ಬೆಂಗಳೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ನ ವೈದ್ಯಕೀಯ ಪರೀಕ್ಷೆ ಮುಂದೂಡುವಂತೆ ಆರೋಗ್ಯ ಸಚಿವ ಸುಧಾಕರ್ ಸೂಚಿಸಿದ್ದಾರೆ.
ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ವೈದ್ಯಕೀಯ ಪರೀಕ್ಷೆ ಕುರಿತು ವೇಳಾಪಟ್ಟಿ ಹೊರಡಿಸಿತ್ತು. ಈ ವೇಳಾಪಟ್ಟಿಯ ಪ್ರಕಾರ, ಅಂತಿಮ ವರ್ಷದ ಪರೀಕ್ಷೆಗಳನ್ನು ಇದೇ ಫೆ. 22 ರಿಂದ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದು ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ಉಪನ್ಯಾಸಕರನ್ನು ಅತ್ಯಂತ ಆತಂಕಕ್ಕೆ ದೂಡಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್ ಮನವಿಯನ್ನು ಸಲ್ಲಿಸಿತ್ತು.
ಇದನ್ನೂ ಓದಿ: ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಶ್ರೀಕಿ ಸಹೋದರನಿಂದ ಅರ್ಜಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಿದ್ದು ಮೇ ತಿಂಗಳಿನಲ್ಲಿ, ಜುಲೈ ತಿಂಗಳವರೆಗೂ ಕೋವಿಡ್ ಕಾರಣ ಆನ್‌ಲೈನ್‌ನಲ್ಲಿಯೇ ತರಗತಿಗಳು ನಡೆದಿವೆ. ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳು ಕೋವಿಡ್ ಸಂದರ್ಭದಲ್ಲಿ ಕೆಲವು ತಿಂಗಳುಗಳ ಕಾಲ ಕೋವಿಡ್ ಕರ್ತವ್ಯವನ್ನು ಸಹ ನಿರ್ವಹಿಸಿದ್ದರು. ಈ ಬ್ಯಾಚ್ ವಿದ್ಯಾರ್ಥಿಗಳು ಎರಡು ತಿಂಗಳು ಟೆಲಿ ಕ್ಲಿನಿಕಲ್ ಕರ್ತವ್ಯ ನಿರ್ವಹಿಸಿದ್ದು, ಮತ್ತೆ ಕೋವಿಡ್ ಮೂರನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆ ತಯಾರಿಗೆ ಸಮಯ ಕಡಿಮೆಯಾಗಿರುವುದಾಗಿ ತಿಳಿಸಿದರು. ಹೀಗಾಗಿ ಅಂತಿಮ ವರ್ಷದ ಪರೀಕ್ಷೆಗೆ ಅಚ್ಚುಕಟ್ಟಾಗಿ ತಯಾರಾಗಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ನಂತರದಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸುವಂತೆ ಕೋರಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ಹಿನ್ನೆಲೆ ಎಲ್ಲಾ ಕಾರಣಗಳಿಂದ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದುಡೂವ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ಸುಧಾಕರ್ ಸೂಚಿಸಿದ್ದಾರೆ.