ETV Bharat / state

ಕೈಗಾರಿಕಾ ಆಸ್ತಿ ತೆರಿಗೆ ಆಕರಣೆ ಬಗ್ಗೆ ಶೀಘ್ರ ಜಂಟಿ ನಿರ್ಧಾರ: ಸಚಿವ ಜಗದೀಶ್ ಶೆಟ್ಟರ್ - ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಸಂವಾದ

ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಸಾಕಷ್ಟು ಬಾರಿ ಮನವಿಯನ್ನು ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಸಭೆಗಳನ್ನು ನಡೆಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

minister-jagadish-shettar-talk-about-industrial-property-tax-form
ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮ
author img

By

Published : Jul 8, 2021, 4:20 PM IST

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬ್ ​ಅನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಎಫ್‌ಕೆಸಿಸಿಐನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಸಾಕಷ್ಟು ಬಾರಿ ಮನವಿಯನ್ನು ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಸಭೆಗಳನ್ನು ನಡೆಸಲಾಗಿದೆ ಎಂದರು.

Jagadeesh shettar
ಸಚಿವ ಜಗದೀಶ್ ಶೆಟ್ಟರ್

ಅಲ್ಲದೆ, ಈ ಬಾರಿಯ ಆಯವ್ಯಯದಲ್ಲಿ ಹಾಗೂ ನೂತನ ಕೈಗಾರಿಕಾ ನೀತಿಯಲ್ಲೂ ಪ್ರಸ್ತಾಪಿಸಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ನೂತನ ಸ್ಲಾಬನ್ನು ರಚಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ವಿಷಯವಾಗಿ ಸಚಿವ ಸಂಪುಟದ ಮುಂದೆ ನಗರಾಭಿವೃದ್ದಿ ಇಲಾಖೆಯ ವತಿಯಿಂದ ಶೀಘ್ರದಲ್ಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

ಹಳೆಯ ತೆರಿಗೆಯ ಬಗ್ಗೆ: ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಹಾಗೂ ಕೆಎಸ್‌ಎಸ್‌ಐಡಿಸಿ ವತಿಯಿಂದ ಅಭಿವೃದ್ದಿಪಡಿಸಲಾದ ಕೈಗಾರಿಕಾ ಪ್ರದೇಶಗಳನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವ ಮುನ್ನ ತೆರಿಗೆ ಸಂಗ್ರಹ ಮಾಡುವ ಹಾಗಿಲ್ಲ. ಆದರೆ, ಕೆಲವು ಕಡೆ ಸ್ಥಳೀಯ ಸಂಸ್ಥೆಗಳು ತೆರಿಗೆ ಸಂಗ್ರಹಿಸುತ್ತಿವೆ. ಆದರೆ ತೆರಿಗೆ ನೀಡುವ ಕೈಗಾರಿಕೆಗಳು ಸ್ಥಳೀಯ ಸಂಸ್ಥೆಗಳಿಂದ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಆಗದೇ ಇರುವ ಹಿನ್ನಲೆಯಲ್ಲಿ ಹಲವಾರು ದೂರುಗಳನ್ನು ನೀಡುತ್ತಿದ್ದಾರೆ.

ಹಳೆಯ ತೆರಿಗೆಯ ಬಗ್ಗೆ ಒಂದು ಸ್ಪಷ್ಟವಾದ ವೈಜ್ಞಾನಿಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೂರು ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ಎಲ್ಲಾ ರೀತಿಯ ಸಮಸ್ಯೆಗಳಿಗೆ ನಗರಾಭಿವೃದ್ದಿ ಸಚಿವರಾದ ಬಿ.ಎ ಬಸವರಾಜ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಟೌನ್‌ ಶಿಪ್‌ ನಿರ್ಮಾಣ: ಟೌನ್​ಶಿಪ್​ಗಳನ್ನು ನಿರ್ಮಿಸುವ ಬಗ್ಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಗರಾಭಿವೃದ್ದಿ ಇಲಾಖೆಯೊಂದಿಗೆ ನಡೆದಿವೆ. ಟೌನ್‌ಶಿಪ್‌ಗಳನ್ನು ನಿರ್ಮಿಸುವ ಮೂಲಕ ಸಂಗ್ರಹವಾಗುವ ಆದಾಯದಲ್ಲಿ ಶೇಕಡಾ 70 ರಷ್ಟು ಟೌನ್‌ಶಿಪ್‌ ಆಡಳಿತ ಮಂಡಳಿಗೆ ಹಾಗೂ ಶೇಡಕಾ 30 ರಷ್ಟು ಸ್ಥಳೀಯ ಸಂಸ್ಥೆಗಳಿಗೆ ನೀಡುವುದರಿಂದ ಎರಡೂ ಕಡೆ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜು ಮಾತನಾಡಿ, ರಾಜ್ಯಾದ್ಯಂತ ಇರುವ ಈ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹಲವಾರು ಬಾರಿ ಚರ್ಚೆ ನಡೆದಿದೆ. ಕೈಗಾರಿಕೆಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾದ ಚರ್ಚೆ ನಡೆಸಲಾಗಿದೆ. ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಸಭೆಯ ಮುಂದೆ ಟೌನ್‌ಶಿಪ್‌ ಹಾಗೂ ಕೈಗಾರಿಕೆಗಳ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಕ್ಯಾಬಿನೆಟ್‌ ನೋಟ್‌ ಮಂಡಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ನಮ್ಮವರಿಗೆ ಸಚಿವ ಸ್ಥಾನ ಸಿಕ್ಕಿದೆಯಲ್ಲ, ಸಂಸದನಾಗಿರುವುದು ನನಗೆ ತೃಪ್ತಿ ಇದೆ: ಸಂಗಣ್ಣ ಕರಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.