ETV Bharat / state

ಮುಂದಿನ ತಿಂಗಳು 36 ಸಾವಿರ ಮನೆ ಹಂಚಿಕೆ: ಸಚಿವ ಜಮೀರ್ ಅಹಮದ್ ಖಾನ್

ರಾಜ್ಯದ ಬಡ ಕುಟುಂಬಗಳಿಗೆ ಮುಂದಿನ ತಿಂಗಳು 36 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್
ಸಚಿವ ಜಮೀರ್ ಅಹಮದ್ ಖಾನ್
author img

By ETV Bharat Karnataka Team

Published : Jan 16, 2024, 4:17 PM IST

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಪೈಕಿ, 36 ಸಾವಿರ ಮನೆ ಮುಂದಿನ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಆಯೋಜಿಸಿದ್ದ ಮನೆ ಬಾಗಿಲಿಗೆ ಬಂತು ಸರ್ಕಾರದ ಸೇವೆಗೆ ಇರಲಿ ಸಹಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2.32 ಲಕ್ಷ ಮನೆಗಳನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡುವ ಗುರಿ ಹೊಂದಿದ್ದು, ಮೊದಲ ಹಂತದಲ್ಲಿ 36 ಸಾವಿರ ಮನೆ ಫೆಬ್ರವರಿ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ 2013ರಿಂದ ಇದುವರೆಗೆ 2.32 ಲಕ್ಷ ಮನೆ ನಿರ್ಮಿಸಲಾಗುತ್ತಿದ್ದು, ಬಡ ಕುಟುಂಬಗಳು ಫಲಾನುಭವಿಗಳ ಪಾಲಿನ ವಂತಿಗೆ 8,200 ಸರ್ಕಾರವೇ ಭರಿಸಲಿದೆ. ಮೊದಲ ಕಂತು 500 ಕೋಟಿ ರೂ. ಬಿಡುಗಡೆಯಾಗಿದ್ದು, ಮನೆಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ವಿನೂತನ ಕಾರ್ಯಕ್ರಮ ಡಿ. ಕೆ ಶಿವಕುಮಾರ್ ಅವರು ಹಮ್ಮಿಕೊಂಡಿರುವ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಇದುವರೆಗೂ ಯಾರೂ ಮಾಡಿಲ್ಲ. ಜನರ ಸಮಸ್ಯೆಗೆ ಅಧಿಕಾರಿಗಳ ಜತೆಗೂಡಿ ಸ್ಥಳದಲ್ಲೇ ಬಂದು ಪರಿಹಾರ ಕಲ್ಪಿಸುವುದು ಉತ್ತಮ ನಿರ್ಧಾರ. ಕಾಂಗ್ರೆಸ್ ಸರ್ಕಾರದ ಜನಪರ ಕಾಳಜಿಗೆ ಇದು ಸಾಕ್ಷಿ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಸಂಡೂರು ಸೇರಿದಂತೆ ವಿವಿಧ ಭಾಗಗಳಿಗೆ ಜಮೀರ್ ಭೇಟಿ : ಕಳೆದ ಕೆಲ ತಿಂಗಳುಗಳ ಹಿಂದೆ ವಿಜಯನಗರ ಜಿಲ್ಲೆಯ ಸಂಡೂರು ಪಟ್ಟಣದ ಕಪ್ಪಲಕುಂಟೆ ರಸ್ತೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪ್ರಧಾನ ಮಂತ್ರಿ ಆವಾಸ್​ ಯೋಜನೆಯಡಿಯಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಸಮುಚ್ಚಯದ ಕಾಮಗಾರಿಯ ಪ್ರಗತಿಯನ್ನು ಜಮೀರ್ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕ ತುಕಾರಾಮ್ ಜತೆಗೂಡಿ 135 ಕೋಟಿ ರೂ. ವೆಚ್ಚದಲ್ಲಿ 32 ಎಕರೆ ಪ್ರದೇಶದಲ್ಲಿ 2172 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಿದ್ದರು. ಈ ಮೂಲಕ ತ್ವರಿತವಾಗಿ ಫಲಾನುಭವಿಗಳಿಗೆ ಮನೆಗಳನ್ನು ನೀಡುವ ಬಗ್ಗೆ ಮುತುವರ್ಜಿ ವಹಿಸಿದ್ದರು.

ಇದನ್ನೂ ಓದಿ: ಸಂಡೂರು ಸೇರಿದಂತೆ ವಿವಿಧ ಭಾಗಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.