ಬೆಂಗಳೂರು : ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ನಿಯಮಾನುಸಾರವೇ ಸರ್ಕಾರಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಕುಣಿಗಲ್ ಕ್ಷೇತ್ರದಲ್ಲಿ 5 ಎಂಎಸ್ಐಎಲ್ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸ್ನೇಹಿತನ ಮದುವೆಗೆಂದು ಊರಿಗೆ ಬಂದಿದ್ದ.. ಕೇಕ್ ತರಲು ಹೋದವನು ಹೆಣವಾದ..
ಶಾಸಕರು ಮತ್ತು ಮಹಿಳೆಯರು ಮದ್ಯದ ಅಂಗಡಿ ಬೇಡ ಎಂದ ಕಡೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ, ಅಂಗಡಿಗಳಿಗೆ ಪರವಾನಿಗೆ ನೀಡಲಾಗಿದೆ. ಯಾವುದೇ ಹಂತದಲ್ಲೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಉತ್ತರಿಸಿದರು.