ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರನ್ನು ಫೋನ್ನಲ್ಲಿ ಸಂಪರ್ಕಿಸಿ ಮಾತನಾಡಿಸಿದ್ದೇನೆ. ಅವರಿಗೆ ಬೆಡ್ ಇಲ್ಲ ಎಂಬುದು ಸುಳ್ಳು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಜೊತೆ ಮಾತನಾಡಿದಾಗ, ಅಪೋಲೋ ಆಸ್ಪತ್ರೆಯಲ್ಲಿ ನಾನು ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದೇನೆ. ಹಾಗಾಗಿ ಅಲ್ಲಿ ಚಿಕಿತ್ಸೆ ಪಡೆಯುತ್ತೇನೆ ಎಂದು ಹೇಳಿದರು. ಅಲ್ಲಿ ಬೆಡ್ ವ್ಯವಸ್ಥೆ ಇರುವ ಬಗ್ಗೆ ನಾನೇ ಖುದ್ದಾಗಿ ಹೇಳಿದ್ದೇನೆ ಎಂದರು.
ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ ಎಂಬುದು ಸತ್ಯಕ್ಕೆ ದೂರವಾದ ವಿಷಯ. ಅಲ್ಲೂ ಸಹ ಬೆಡ್ ಕಾಯ್ದಿರಿಸಲಾಗಿದೆ. ಕುಮಾರಸ್ವಾಮಿ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ಓದಿ: ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದ ಹೆಚ್ಡಿಕೆಗೆ ಸಿಗಲಿಲ್ಲ ಬೆಡ್.!