ETV Bharat / state

ದೇವಾಲಯಗಳ ಆನ್​​​ಲೈನ್​​ ಪೂಜೆಗೆ ನಿರ್ಧಾರ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ದೇವಸ್ಥಾನಗಳು ಬಂದ್ ಆಗಿರುವುದರಿಂದ ಭಕ್ತರಿಗೆ ಅನುಕೂಲವಾಗಲೆಂದು, ಆನ್​​​​​​​​​​​ಲೈನ್ ಪೂಜೆ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದ್ದೇವೆಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Minister Kota Srinivas Poojary statement
ಸಚಿವ ಕೋಟ ಶ್ರೀನಿವಾಸ್ ಪೂಜಾರಿ
author img

By

Published : May 21, 2020, 6:39 PM IST

Updated : May 21, 2020, 7:08 PM IST

ಬೆಂಗಳೂರು: ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು, ನೇರ ಪ್ರಸಾರ ಮಾಡಲು ಚಿಂತನೆ ನಡೆದಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಆಯಾ ದೇವಸ್ಥಾನಗಳ ವೆಬ್‌ಸೈಟ್ ಮತ್ತು ಫೇಸ್​​​​​​​​​​​​​​ಬುಕ್ ಲೈವ್ ಮೂಲಕ‌ ನೇರ ಪ್ರಸಾರ ಮಾಡುವ ಚಿಂತನೆಯಿದೆ. 5 ಜಿಲ್ಲೆಗಳ ದೇಗುಲ ಪೂಜಾ ಪದ್ಧತಿಯನ್ನು ನೇರ ಪ್ರಸಾರ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ಆನ್​​​ಲೈನ್ ಪೂಜೆಗೆ ನಿರ್ಧಾರ:

ಲಾಕ್​​​​​ಡೌನ್ ಹಿನ್ನೆಲೆ ದೇವಸ್ಥಾನಗಳು ಬಂದ್ ಆಗಿರುವುದರಿಂದ ಭಕ್ತರಿಗೆ ಅನುಕೂಲವಾಗಲೆಂದು, ಆನ್​​​​​​​​​​​ಲೈನ್ ಪೂಜೆ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದ್ದೇವೆ. ಆಯ್ದ ದೇವಸ್ಥಾನಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗುವುದು. ಆನ್​​​​​ಲೈನ್ ಮೂಲಕ ಭಕ್ತರು ಸೇವಾ ವೆಚ್ಚ ಭರಿಸಬಹುದು. ಅವರಿಗೆ ಮನೆಗೆ ಪ್ರಸಾದ ಕಳಿಸುವ ಕೆಲಸ ಮಾಡುತ್ತೇವೆ ಎಂದರು.

ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳಾರತಿ, ಅರ್ಚನೆ, ಪುಷ್ಪಾಲಂಕಾರ ಪೂಜೆ, ಅಷ್ಠೋತ್ತರ ಸೇರಿ 15 ಸೇವೆಗಳನ್ನು ಆನ್‌ಲೈನ್ ಮೂಲಕ ಕೊಡಲು ಉದ್ದೇಶಿಸಲಾಗಿದೆ. ಭಕ್ತರು ಬೇಕಾದ ಸೇವೆಗೆ ಹಣ ಪಾವತಿಸಬೇಕು. ಅಂತವರ ಹೆಸರಿನಲ್ಲಿ ಪೂಜೆಯನ್ನು ನೆರವೇರಿಸಲಾಗುತ್ತದೆ ಎಂದರು.

ಬೆಂಗಳೂರಿನ ಬನಶಂಕರಿ, ಸವದತ್ತಿಯ ಯಲ್ಲಮ್ಮ, ಮೈಸೂರಿನ ಚಾಮುಂಡೇಶ್ವರಿ, ನಂಜನಗೂಡು ಶ್ರೀಕಂಠೇಶ್ವರ, ಕಟೀಲು ದುರ್ಗಾ ಪರಮೇಶ್ವರಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಪ್ರಮುಖ ದೇಗುಲಗಳಲ್ಲಿ ಪೂಜೆಯ‌ ನೇರ ಪ್ರಸಾರ ಹಾಗೂ ಆನ್​​ಲೈನ್ ಪೂಜೆಗೆ ವ್ಯವಸ್ಥೆ ಮಾಡಲಾಗುತ್ತದೆ. ಮೇ ತಿಂಗಳಾಂತ್ಯಕ್ಕೆ ಈ ಆನ್​​​​ಲೈನ್ ಪೂಜೆ ಮತ್ತು ನೇರ ಪ್ರಸಾರದ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಮೂರು ತಿಂಗಳ ತಸ್ತೀಕ್ ಬಿಡುಗಡೆ:

ಅರ್ಚಕರಿಗೆ ಸಾಕಷ್ಟು ಸಮಸ್ಯೆಯಿದ್ದು, ಹೀಗಾಗಿ ಮೂರು ತಿಂಗಳ ತಸ್ತೀಕ್ ಬಿಡುಗಡೆಗೆ ಮನವಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ 33.66 ಕೋಟಿ ರೂ. ಹಣ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ಈಗಾಗಲೇ ಆರ್ಥಿಕ ಇಲಾಖೆ ಹಣವನ್ನು ಬಿಡುಗಡೆ ಮಾಡಿದೆ. 29,700 ದೇಗುಲಗಳ ಅರ್ಚಕರಿಗೆ ಮೂರು ತಿಂಗಳ ತಸ್ತೀಕ್ ಬಿಡುಗಡೆ ಮಾಡಲಿದ್ದೇವೆ ಎಂದರು.

ಇನ್ನು ದೇಗುಲಗಳ ಪ್ರಾರಂಭಕ್ಕೆ ಅರ್ಚಕರು ಮನವಿ ಮಾಡಿದ್ದಾರೆ. ಅವರು ತಟ್ಟೆಯ ಕಾಸನ್ನೇ ನಂಬಿಕೊಂಡಿದ್ದಾರೆ. ಲಾಕ್​​​​​ಡೌನ್​​​​ನಿಂದ ಅವರಿಗೆ ಸಮಸ್ಯೆಯಾಗಿದೆ. ಅವರಿಗೆ ಕಿಟ್ ವಿತರಣೆಯನ್ನೂ ಮಾಡ್ತಿದ್ದೇವೆ. ದೇಗುಲ ಪ್ರಾರಂಭವಾದರೆ ಅವರ ಸಮಸ್ಯೆಗಳು ಬಗೆಹರಿಯುತ್ತವೆ. ಹೀಗಾಗಿ ಅವರು ದೇಗುಲ ಪ್ರಾರಂಭಕ್ಕೆ ಒತ್ತಾಯಿಸಿದ್ದಾರೆ. ಆದರೆ ಇದೀಗ ನಾವು ಅವಕಾಶ ಕೊಡೋಕೆ ಸಾಧ್ಯವಿಲ್ಲ ಎಂದು ತಿಳಿಸಿದರು.

Last Updated : May 21, 2020, 7:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.