ETV Bharat / state

ವಿವಿಧ ಯೋಜನೆಗಳ ಪರಿಶೀಲನಾ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ - ಬೆಂಗಳೂರು ಲೆಟೆಸ್ಟ್ ನ್ಯೂಸ್

ಸಚಿವ ಕೆ.ಎಸ್.ಈಶ್ವರಪ್ಪ ಇಂದು ವಿಧಾನಸೌಧದಲ್ಲಿ ವಿವಿಧ ಯೋಜನೆಗಳ ಕುರಿತು ಸಭೆ ನಡೆಸಿದರು. ಸಚಿವ ಎಸ್.ಟಿ ಸೋಮಶೇಖರ್ ಕೂಡಾ ಉಪಸ್ಥಿತರಿದ್ದರು.

Minister KS Eshwarappa had meeting today

author img

By

Published : Aug 19, 2020, 9:42 PM IST

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದು ವಿಧಾನಸೌಧದಲ್ಲಿ ವಿವಿಧ ಯೋಜನೆಗಳ ಕುರಿತು ಸಭೆ ನಡೆಸಿದರು.

ಬಹು ಗ್ರಾಮ ಕುಡಿಯುವ ನೀರು ಯೊಜನೆ ಕುರಿತು ಸಭೆ ನಡೆಸಿದ ಸಚಿವರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧ ಗಂಭೀರ ಚರ್ಚೆ ನಡೆಸಿದರು. ಇದೇ ಸಂದರ್ಭ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕೂಡಾ ಸಾಥ್ ನೀಡಿದರು. ಜಲಸಂಪನ್ಮೂಲ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಕುಂಬಳಗೋಡು ಮತ್ತು ಇತರೆ 32 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರದಲ್ಲಿ ಅನುಷ್ಠಾನ ಮಾಡುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಇಲಾಖೆ ಆಯುಕ್ತರಾದ ಆರ್. ವಿಶಾಲ್ ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇ-ಸ್ವತ್ತು, ಇ-ಖಾತಾ ಸಭೆ:

ಸಚಿವ ಎಸ್.ಟಿ.ಸೋಮಶೇಖರ್ ಜೊತೆಗೆ ನಡೆಸಿದ ಸಭೆಗೂ ಮುನ್ನ ಸಂಜೆ ಸಚಿವ ಕೆ.ಎಸ್. ಈಶ್ವರಪ್ಪ ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ಮತ್ತು ನಗರ ಪ್ರದೇಶಗಳಲ್ಲಿ ಇ-ಖಾತಾ (ಫಾರ್ಮ್-3) ನೀಡುವ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭ ಪಾಲ್ಗೊಂಡಿದ್ದ ಅಧಿಕಾರಿಗಳು ಸಚಿವರಿಗೆ ಈ ವ್ಯವಸ್ಥೆಯ ಕುರಿತು ಸವಿಸ್ತಾರ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.