ETV Bharat / state

ಮಂಗನ ಕಾಯಿಲೆ ಹರಡದಂತೆ ಎಚ್ಚರ ವಹಿಸಲು ಸೂಚನೆ: ಸಚಿವ ಈಶ್ವರಪ್ಪ - Minister KS Eshwarappa meeting

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವ ಈಶ್ವರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

author img

By

Published : Apr 15, 2020, 5:05 PM IST

ಬೆಂಗಳೂರು: ಮಂಗನ ಕಾಯಿಲೆ ಹರಡದಂತೆ ಹೆಚ್ಚಿನ ಗಮನ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಮಲೆನಾಡು ಭಾಗದಲ್ಲಿ ಉಲ್ಬಣಗೊಂಡಿರುವ ಮಂಗನ‌ ಕಾಯಿಲೆ ಬಗ್ಗೆ ಇವತ್ತು ಉನ್ನತ ಮಟ್ಟದ ಸಭೆ ನಡೆಸಿದ್ದೇನೆ. ಶಿವಮೊಗ್ಗ, ಸಾಗರ, ಸೊರಬ, ತೀರ್ಥಹಳ್ಳಿ ಭಾಗದಲ್ಲಿ ಮಂಗನ‌ ಕಾಯಿಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ್ದು, ಈ ಭಾಗದ ಜನಪ್ರತಿನಿಧಿಗಳಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ ಸೇರಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದರು.

ಮಂಗನ ಕಾಯಿಲೆಗೆ ಅಗತ್ಯವಿರುವ ವೈದ್ಯಕೀಯ ಸೌಕರ್ಯಗಳನ್ನು ಶಿವಮೊಗ್ಗದ ಮೆಗ್ಗಾನ್ ಮತ್ತು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

ಮುಂದಿನ‌ ಸೋಮವಾರ ಬೆಂಗಳೂರಿನಿಂದ ಉನ್ನತ ಮಟ್ಟದ ವೈದ್ಯಾಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯ ಅಧ್ಯಯನ ನಡೆಸಲಿದ್ದಾರೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.