ಬೆಂಗಳೂರು: ಕಾಸಿಯಾ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಪಂ ಕಟ್ಟಡಗಳ ಛಾವಣಿ ಮೇಲೆ ಸೋಲಾರ್ ಫಟಕಗಳನ್ನು ಅಳವಡಿಸಿ, ಅನಿಯಮಿತ ವಿದ್ಯುತ್ ಸೌಲಭ್ಯ ಒದಗಿಸುವ ಸಂಬಂಧ ಕರೆದಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಅವಕಾಶ ಮಾಡಿಕೊಡುವ ಬಗ್ಗೆ ಕರ್ನಾಟಕ ಕಾಸಿಯಾ ಸಂಸ್ಥೆ ಹಾಗೂ ಸೌರ ವಿದ್ಯುತ್ ಉಪಕರಣ ಉತ್ಪಾದಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.