ETV Bharat / state

ದೇಶದ ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - etv bharat kannda

ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್​ ಮಾಡಿದ್ದಾರೆ.

Etv Bharat
Etv Bharat
author img

By

Published : Jul 17, 2023, 10:58 PM IST

ಬೆಂಗಳೂರು: ಜಾತ್ಯತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ ನಡೆಯುತ್ತಿದೆ. ದೇಶದ ಸಂವಿಧಾನವನ್ನ ಉಳಿಸಲು ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಹಾ ಘಟಬಂಧನ್ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ವಿವಿಧ ರಾಜ್ಯಗಳ ಮುಖಂಡರನ್ನು ಹೆಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್​ ಹಿರಿಯ ಸಚಿವ ಎಂ.ಬಿ ಪಾಟೀಲ್ ಜೊತೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯುವ ಈ ದೇಶದ ಹಿತಾಸಕ್ತಿ ದೃಷ್ಟಿಯಿಂದ ಮಹತ್ವ ಪಡೆದಿದೆ ಎಂದರು.

  • 1
    ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ.

    ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವ ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ.

    ಸಂವಿಧಾನದ ಉಳಿವೇ, ಈ ದೇಶದ ಉಳಿವು.

    ಇದೇ ಈ ಸಭೆಯ ಉದ್ದೇಶ.

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 17, 2023 " class="align-text-top noRightClick twitterSection" data=" ">

ಹಲವು ರಾಷ್ಟ್ರೀಯ ನಾಯಕರನ್ನು ಸ್ವಾಗತಿಸಲು ಪಕ್ಷ ನನಗೆ ಜವಾಬ್ದಾರಿ ನೀಡಿತ್ತು. ಅದರಂತೆ ನಾನು ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರೀಯ ನಾಯಕರನ್ನ ಸ್ವಾಗತಿಸಿದ್ದೇವೆ. ಸಭೆಯ ಉದ್ದೇಶ, ಅಜೆಂಡಾವನ್ನು ಹಿರಿಯರು ನೋಡ್ತಾರೆ. ಪಾಟ್ನಾದಲ್ಲಿ ನಡೆದ ಸಭೆಯ ಮುಂದುವರೆದ ಭಾಗವಾಗಿ ಬೆಂಗಳೂರು ನಲ್ಲಿ ಈ ಸಭೆ ನಡೆಯುತ್ತಿದೆ ಎಂದು ತಿಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಭೆ ಕುರಿತು ಪ್ರತಿಪಕ್ಷಗಳ ಟೀಕೆಗೆ ಅರ್ಥವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಕುಮಾರಸ್ವಾಮಿ ಎರಡು ಸಲ ಸಿಎಂ ಆದವರು, ಆಡಳಿತದಲ್ಲಿ ಅನುಭವ ಹೊಂದಿರುವವರು, ಸರ್ಕಾರ ಶುರುವಾಗಿ 50 ದಿನ ಆಗಿಲ್ಲ. ಅಂಬೆ ಕಾಲಿಡ್ತಿದೆ. ಸುಖಾಸುಮ್ಮನೆ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಕುಮಾರಸ್ವಾಮಿ ಅವರ ಬಳಿ ಸಾಕ್ಷಿ ಆಧಾರ ಇದ್ರೆ ಬಿಡುಗಡೆ ಮಾಡಲಿ. ಅವ್ರು ಅನುಭವಸ್ಥರು, ಹಿರಿಯರು ಇದಾರೆ ಅವ್ರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇವರಿಂದ ಸಂವಿಧಾನವೇ ಅಪಾಯಕ್ಕೆ ಸಿಲುಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ. ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವ ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ. ಸಂವಿಧಾನದ ಉಳಿವೇ, ಈ ದೇಶದ ಉಳಿವು. ಇದೇ ಈ ಸಭೆಯ ಉದ್ದೇಶ ಎಂದಿದ್ದಾರೆ.

ಈ ದೇಶದ ಪ್ರತಿಯೊಬ್ಬ ನಾಗರಿಕನ ಬದುಕಿಗೆ ರಕ್ಷಣೆ ಒದಗಿಸಿರುವುದೇ ಸಂವಿಧಾ‌ನ‌‌. ಆದರೆ ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುತ್ತಾರೆ. ಸಂವಿಧಾನ ಬದಲಾಯಿಸುವುದೆಂದರೆ ನಾಗರಿಕರ ಬದುಕಿನ ಹಕ್ಕು ಕಸಿದುಕೊಂಡಂತೆ ಎಂದಿದ್ದಾರೆ. ಕೇಂದ್ರದ ಈ ಧೋರಣೆ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೆಲ್ಲಾ ಒಗ್ಗಟ್ಟಾಗಿ ಹೋರಾಡಲೇಬೇಕಿದೆ. ಅಧಿಕಾರದಲ್ಲಿರುವ ಕೇಂದ್ರದ ಎನ್​ಡಿಎ ಕೂಟ ವಿಭಜಿಸುವುದರಲ್ಲಿ ನಂಬಿಕೆಯಿಟ್ಟಿದೆ. ಆದರೆ ನಾವು ಒಗ್ಗೂಡಿಸುವುದರಲ್ಲಿ ನಂಬಿಕೆಯಿಟ್ಟಿದ್ದೇವೆ. ದ್ವೇಷ ಅವರ ದೇವರು, ಪ್ರೀತಿ ನಮ್ಮ ದೇವರು. ಅವರ ಹೃದಯದಲ್ಲಿ ಧರ್ಮಾಂಧತೆಯಿದೆ. ನಮ್ಮಲ್ಲಿ ಕೂಡಿ ಬಾಳುವ ಸೌಹಾರ್ದತೆಯಿದೆ‌. ಸಾಮರಸ್ಯದ ದೇಶ ಕಟ್ಟುವ ಸಲುವಾಗಿಯೇ ಸಮಾನಮನಸ್ಕರ ಈ ಸಭೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳ ಔತಣಕೂಟ ಮುಕ್ತಾಯ..ನಿರಂಕುಶ ಪ್ರಭುತ್ವದಿಂದ ದೇಶ ರಕ್ಷಣೆಗೆ ಸಮಾನ ಮನಸ್ಕ ಪಕ್ಷಗಳಿಂದ ಒಗ್ಗಟ್ಟು: ಕಾಂಗ್ರೆಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.