ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದು, ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಿದೆ.
ಹೀಗಾಗಿ ಇಂದು ಪ್ರಯಾಣಿಕರ ಸಮಸ್ಯೆ ಆಲಿಸಲು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿದರು. ಊರಿನತ್ತ ತೆರಳುತ್ತಿದ್ದ ಪ್ರಯಾಣಿಕರುನ್ನು ಮಾತನಾಡಿಸಿದ ಸಚಿವರು, ಸರಿಯಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.
ಓದಿ : ಡಿಕೆಶಿ ಬಳಿ ತಮ್ಮ ಸಮಸ್ಯೆ ಹೇಳಿಕೊಂಡ ಮಂಗಳಮುಖಿಯರು
ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ ಕೂಡ ಬಸ್ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದರು. ಪ್ರಯಾಣಿಕರ ದಟ್ಟಣೆ ಹೆಚ್ಚಾದಂತೆ ಹೆಚ್ಚುವರಿ ಬಸ್ಗಳನ್ನು ಬಿಡಲು ಅಧಿಕಾರಿಗಳಿಗೆ ಸೂಚಿಸಿದರು.