ETV Bharat / state

ನಾಲ್ಕು ತಿಂಗಳಲ್ಲಿ 4,248 ಕೋಟಿ ರೂ ಬಾಕಿ ವಸೂಲಿ ಮಾಡಿ: ಅಧಿಕಾರಿಗಳಿಗೆ ಸಚಿವ ಎಂ ಬಿ ಪಾಟೀಲ್ ಗಡುವು - ಕೆಐಎಡಿಬಿ ಬಾಕಿ ವಸೂಲಿ

ಕೆಐಎಡಿಬಿಗೆ ಬರಬೇಕಿರುವ 4248 ಕೋಟಿ ರೂ ಬಾಕಿ ಹಣವನ್ನು ನಾಲ್ಕು ತಿಂಗಳಲ್ಲಿ ವಸೂಲಿ ಮಾಡುವಂತೆ ಸಚಿವ ಎಂ ಬಿ ಪಾಟೀಲ್ ಗಡುವು ನೀಡಿದ್ದಾರೆ.

Minister MB Patil
ಕೆಐಎಡಿಬಿ ಅಧಿಕಾರಿಗಳಿಗೆ ಸಚಿವ ಎಂ ಬಿ ಪಾಟೀಲ್ ಗಡುವು
author img

By ETV Bharat Karnataka Team

Published : Oct 14, 2023, 7:41 AM IST

ಬೆಂಗಳೂರು: ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ (ಕೆಐಎಡಿಬಿ) ಈವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. ಇದನ್ನು ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟುನಿಟ್ಟಾಗಿ ವಸೂಲಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗಡುವು ವಿಧಿಸಿದ್ದಾರೆ.

ಖನಿಜ‌ ಭವನದಲ್ಲಿ ಕೆಐಎಡಿಬಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ವಿಫಲರಾದರೆ ಮಂಡಲಿಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಕೆಐಎಡಿಬಿ ಆರಂಭವಾದಾಗಿನಿಂದಲೂ ಈ ಸಮಸ್ಯೆ ಇದೆ. ಈಗಿನ ಅಂಕಿ ಅಂಶಗಳ ಪ್ರಕಾರ, ಮಂಡಲಿಯು ಸಾಮಾನ್ಯ ವರ್ಗದವರಿಗೆ ಮಂಜೂರು ಮಾಡಿರುವ 5,932 ಕೈಗಾರಿಕಾ ಘಟಕಗಳಿಂದ 2,825 ಕೋಟಿ ರೂ. ಬರಬೇಕಾಗಿದೆ. ಎಸ್ಸಿ- ಎಸ್ಟಿ ವರ್ಗಗಳ ಅಡಿಯಲ್ಲಿ 741 ಕೋಟಿ ರೂ. ಬಾಕಿ ಉಳಿದಿದೆ. ಇದರ ಜತೆಗೆ ಎಸ್ಸಿ- ಎಸ್ಟಿ ವರ್ಗಗಳಿಗೆ ನೀಡುವ ಸಬ್ಸಿಡಿ ಬಾಬ್ತಿನಲ್ಲಿ 680 ಕೋಟಿ ಇದೆ ಎಂದು ವಿವರಿಸಿದರು.

ಕೆಐಎಡಿಬಿಯಿಂದ ನಿವೇಶನಗಳನ್ನು ಪಡೆದಿರುವವರಲ್ಲಿ ಎಷ್ಟೋ ಜನ ಈ ನಿವೇಶನಗಳನ್ನು ಹಾಗೆಯೇ ಬಿಟ್ಟುಕೊಂಡಿದ್ದಾರೆ. ಉದ್ಯಮ ಸ್ಥಾಪಿಸಿ ಇನ್ನೇನು ತಮ್ಮ ಹೆಸರಿಗೆ ನಿವೇಶನ ಮಾಡಿಸಿಕೊಳ್ಳುವ ಕೊನೆ ಹಂತದಲ್ಲಿ ಇರುವವರೇ ₹2,100 ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಇಂಥವರ ವಿರುದ್ಧ ನಾಲ್ಕು ತಿಂಗಳೊಳಗೆ ಕಠಿಣ ಕ್ರಮ ಜರುಗಿಸಿ ಬಾಕಿ ಹಣ ವಸೂಲಿ ಮಾಡಲೇಬೇಕು. ಕಾನೂನು ಕ್ರಮದ ಜೊತೆಗೆ ನಿವೇಶನ ಮಂಜೂರಾತಿಯನ್ನೇ ರದ್ದುಪಡಿಸಬೇಕಾದ ನಿಷ್ಠುರತೆಯನ್ನು ಪ್ರದರ್ಶಿಸಲೇಬೇಕಾಗಿದೆ ಎಂದು ವಿವರಿಸಿದರು.

ಕೆಐಎಡಿಬಿ ಮೊದಲಿನಿಂದಲೇ ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತ ಬರಬೇಕಾಗಿತ್ತು. ಆಗ ಈ ಪರಿಸ್ಥಿತಿ ಸೃಷ್ಟಿಯಾಗುತ್ತಿರಲಿಲ್ಲ. ಈ ವಿಚಾರದಲ್ಲಿ ಮಂಡಳಿಯ ಕಾರ್ಯದರ್ಶಿಗಳು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಮಹೇಶ್, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಪಿಲಿಕುಳ ಜೈವಿಕ ಉದ್ಯಾನದ ಉತ್ತಮ ನಿರ್ವಹಣೆಗೆ ಅಗತ್ಯ ತಾಂತ್ರಿಕ ರೂಪುರೇಷೆ ರೂಪಿಸಿ: ಸಚಿವ ಎಸ್‌ ಎಸ್‌ ಬೋಸರಾಜು ಸೂಚನೆ
ಕೇಂದ್ರ ಮೃಗಾಲಯ ಪ್ರಾಧಿಕಾರದ ಷರತ್ತುಗಳ ಅನುಗುಣವಾಗಿ ಪಿಲಿಕುಳ ಜೈವಿಕ ಉದ್ಯಾನವದ ಉತ್ತಮ ನಿರ್ವಹಣೆಗೆ ಅಗತ್ಯವಾಗಿರುವ ತಾಂತ್ರಿಕ ರೂಪುರೇಷೆಗಳನ್ನ ರೂಪಿಸುವ ನಿಟ್ಟಿನಲ್ಲಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಬೋಸರಾಜು ಸೂಚನೆ ನೀಡಿದರು.

ಬೆಂಗಳೂರಿನ ಬಹುಮಹಡಿ ಕಟ್ಟದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮೃಗಾಲಯ ಪ್ರಾಧಿಕಾರವು ಜೈವಿಕ ಉದ್ಯಾನವನದಲ್ಲಿರುವ ಪ್ರಾಣಿಗಳ ಸಮರ್ಥ ನಿರ್ವಹಣೆಗಾಗಿ ತಾಂತ್ರಿಕ ಷರತ್ತುಗಳನ್ನು ಪೂರೈಸುವಂತೆ ಸಲಹೆ ನೀಡಿದೆ.

ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ಮಟ್ಟದಲ್ಲಿ ವಿಸ್ತೃತ ಚರ್ಚೆಯನ್ನು ನಡೆಸುವಂತಹ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆ ನಡೆಸುವಂತೆ ಸಚಿವರಾದ ಎನ್‌.ಎಸ್‌ ಬೋಸರಾಜು ಸೂಚನೆ ನೀಡಿದರು. ಸಭೆಯಲ್ಲಿ ಜೈವಿಕ ಉದ್ಯಾನವನದ ದಿನನಿತ್ಯದ ನಿರ್ವಹಣೆಗಾಗಿ ಅಗತ್ಯವಿರುವ ತಾಂತ್ರಿಕ ಸಹಾಯವನ್ನು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಿ ರಾಜ್ಯ ಸಲಹಾ ಸಮಿತಿಗೆ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.

ಪಿಲಿಕುಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ದಕ್ಷಿಣ ಕನ್ನಡ ಭಾಗದಲ್ಲಿರುವ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರವಾಗುವ ಎಲ್ಲಾ ಸಾಧ್ಯತೆಗಳನ್ನ ಪಿಲಿಕುಳ ಹೊಂದಿದೆ. ಇಲ್ಲಿ ವಿಶ್ವದ ಏಕೈಕ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರವಿದೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆರ್ಥಿಕವಾಗಿ ಸಬಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಏಕ್‌ರೂಪ್‌ ಕೌರ್‌, ಮಂಗಳೂರಿನ ಮಾಜಿ ಶಾಸಕರಾದ ಜಿ.ಆರ್‌ ಲೋಬೋ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ‌ ಐಎಫ್‌ಎಸ್‌ ಕುಮಾರ್‌ ಪುಷ್ಕರ್, ಮಂಗಳೂರಿನ ಜಿಲ್ಲಾಧಿಕಾರಿಗಳು, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೆಎಸ್​​ಆರ್​ಟಿಸಿಯಿಂದ ಪ್ಯಾಕೇಜ್ ಟೂರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.