ETV Bharat / state

ಸಚಿವ ಮಾಧುಸ್ವಾಮಿ ವಿರುದ್ಧದ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದ ಹೈಕೋರ್ಟ್ - ಈಟಿವಿ ಭಾರತ ಕನ್ನಡ ನ್ಯೂಸ್

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದಲ್ಲಿ ಹೈಕೋರ್ಟ್, ಸಚಿವ ಮಾಧುಸ್ವಾಮಿ ವಿರುದ್ಧದ ಪ್ರಕರಣವನ್ನು​ ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದೆ.

minister-madhuswamy-case-sent-to-the-trial-court
ಸಚಿವ ಮಾಧುಸ್ವಾಮಿ ವಿರುದ್ಧದ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದ ಹೈಕೋರ್ಟ್
author img

By

Published : Oct 25, 2022, 4:52 PM IST

ಬೆಂಗಳೂರು : ಜಾತಿ, ಧರ್ಮದ ಆಧಾರದಲ್ಲಿ ಪ್ರಚಾರ ನಡೆಸಿ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ.ಮಾಧುಸ್ವಾಮಿ ಅವರ ವಿರುದ್ಧದ ಪ್ರಕ್ರಿಯೆ ರದ್ದುಗೊಳಿಸಿರುವ ಹೈಕೋರ್ಟ್​, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದೆ.

ತಮ್ಮ ವಿರುದ್ಧ ವಿಚಾರಣೆ ನಡೆಸಲು ಪೊಲೀಸರ ಕೋರಿಕೆಗೆ ಅನುಮತಿ ನೀಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಾಧುಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸುನೀಲ್ ದತ್ತ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಮಾಡಿದೆ.

ಅರ್ಜಿದಾರರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್​ನ ವಗ್ಗೆಪ್ಪ ಗುರುಲಿಂಗ ಜಂಗಲಿಗೆ ಪ್ರಕರಣದಲ್ಲಿ ಹಲವು ಮಾರ್ಗಸೂಚಿಗಳನ್ನು ನೀಡಿದೆ. ಅದರಂತೆ, ಮ್ಯಾಜಿಸ್ಟ್ರೇಟ್​​ ತನಿಖೆಗೆ ವಹಿಸುವ ಮುನ್ನ ಯಾವ ರೀತಿಯಲ್ಲಿ ದೂರು ಬಂದಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶದ ಪ್ರತಿ ನಿರ್ವಹಣೆ ಮಾಡಬೇಕು ಎಂಬ ನಿಯಮವಿದೆ. ಆದರೆ, ಈ ಪ್ರಕರಣದಲ್ಲಿ ಪ್ರತ್ಯೇಕ ಆದೇಶ ಪ್ರತಿಯನ್ನು ನಿರ್ವಹಣೆ ಮಾಡಿಲ್ಲ. ಅಲ್ಲದೆ, ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ಪಾಲನೆ ಮಾಡಿಲ್ಲ. ಆದ್ದರಿಂದ ವಿಚಾರಣೆ ನ್ಯಾಯಾಲಯದ ಪ್ರಕ್ರಿಯೆ ರದ್ದು ಮಾಡಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ : 2019ರ ಡಿಸೆಂಬರ್ 2ರಂದು ಬಳ್ಳಾರಿಯ ಹೊಸಪೇಟೆಯಲ್ಲಿ ಹೋಟೆಲ್​ ಬಳಿ ನಡೆದಿದ್ದ ಸಭೆಯಲ್ಲಿ ಸಚಿವ ಮಾಧುಸ್ವಾಮಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಚುನಾವಣಾ ಸಿಬ್ಬಂದಿಯಾಗಿದ್ದ ಕಿರಣ್​ ಎಂಬುವರು ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ತನಿಖೆಗೆ ಅನುಮತಿ ಕೋರಿ ಪೊಲೀಸರಿಗೆ ವಿಚಾರಣಾ ನ್ಯಾಯಾಲಯ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಮಾಧುಸ್ವಾಮಿ ಅವರು ದೂರು ಮತ್ತು ದೂರಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ನಿಮ್ಮ ಮಕ್ಕಳಿಗೆ ಬುದ್ಧಿ ಹೇಳದಿದ್ದರೆ ಅರೆಸ್ಟ್​ ಆಗ್ತಾರೆ: ಈಶ್ವರಪ್ಪ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.