ETV Bharat / state

ಸಮಸ್ಯೆ ಸೃಷ್ಟಿಸಿರುವ ಫಾರಂ-3 ಸಂಬಂಧಿಸಿದಂತೆ ಶೀಘ್ರದಲ್ಲೇ ಪರಿಹಾರ : ಸಚಿವ ಎಂಟಿಬಿ ನಾಗರಾಜ್ - ವಿಧಾನಸಭೆಯಲ್ಲಿ ಫಾರಂ- 3 ಸಮಸ್ಯೆ ವಿಚಾರ ಚರ್ಚೆ

ರಾಜ್ಯದಲ್ಲಿ ಫಾರಂ-3ಗೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಸಮಸ್ಯೆ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುವ ಭರವಸೆ ನೀಡಿದರು..

Form 3 problem issue discuses in session
ವಿಧಾನಸಭೆಯಲ್ಲಿ ಫಾರಂ- 3 ಸಮಸ್ಯೆ ವಿಚಾರ ಚರ್ಚೆ
author img

By

Published : Mar 11, 2022, 7:24 PM IST

ಬೆಂಗಳೂರು : ರಾಜ್ಯದಲ್ಲಿ ತೀವ್ರ ಸಮಸ್ಯೆ ಸೃಷ್ಟಿಸಿರುವ ಫಾರಂ-3 ಸಂಬಂಧಿಸಿದಂತೆ ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ವಿಧಾನಸಭೆಯಲ್ಲಿ ತಿಳಿಸಿದರು.

ವಿಧಾನಸಭೆಯಲ್ಲಿ ಫಾರಂ-3 ಸಮಸ್ಯೆ ವಿಚಾರ ಚರ್ಚೆ..

ಪ್ರಶ್ನೋತ್ತರ ವೇಳೆ ಶಾಸಕ ಕುಮಾರ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಫಾರಂ-3 ಸಮಸ್ಯೆ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಆದಷ್ಟು ಶೀಘ್ರ ಈ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗ ಜಿಲ್ಲೆಯ ಸೊರಬದ ಪುರಸಭೆ ಹಾಗೂ ಆನಮಟ್ಟಿ ಪಟ್ಟಣ ಪಂಚಾಯತ್‌ನಲ್ಲಿ ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಹಾಗೂ ಕಸ ವಿಲೇವಾರಿ ಮಾಡುವ ಸಿಬ್ಬಂದಿ ಕೊರತೆ ಇರುವುದು ತಮ್ಮ ಗಮನಕ್ಕೆ ಬಂದಿದೆ.

ಸೊರಬ ಪುರಸಭೆಗೆ ಮಂಜೂರಾದ 97 ಹುದ್ದೆಗಳ ಪೈಕಿ 25 ಖಾಯಂ ನೌಕರರು, 23 ಗುತ್ತಿಗೆ/ಹೊರಗುತ್ತಿಗೆ/ದಿನಗೂಲಿ ಹಾಗೂ ಗ್ರಾಪಂನ 13 ನೌಕರರು ಸೇರಿದಂತೆ 63 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ಆನವಟ್ಟಿ ಐದು ಮಂದಿ ಹೊರಗುತ್ತಿಗೆದಾರರು, ಗ್ರಾಪಂ ಪಂಚಾಯತ್‌ನಲ್ಲಿ 26 ಮಂದಿ ಸೇರಿದಂತೆ ಒಟ್ಟು 31 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಫಾರಂ-3 ಸಮಸ್ಯೆ ವಿಚಾರ ಚರ್ಚೆ

ಹುದ್ದೆಗಳ ನೇಮಕಾತಿಗಾಗಿ ಡಿಸಿಗೆ ಸೂಚನೆ : ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಮೇಲೆ ತೆಗೆದುಕೊಳ್ಳಲು ಜಿಲ್ಲಾಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇತ್ತೀಚೆಗೆ ರಾಜ್ಯಾದ್ಯಂತ ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳು ವೇಗವಾಗಿ ಬೆಳೆಯುತ್ತಿವೆ. ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಸೊರಬ ಪುರಸಭೆಗೆ ಟ್ರ್ಯಾಕ್ಟರ್​, ಟಿಪ್ಪರ್ ಖರೀದಿ ಮಾಡಲು ಅಗತ್ಯವಿರುವ ಹಣಕಾಸನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಟ್ರ್ಯಾಕ್ಟರ್ ಖರೀದಿಸಲು ಸಹ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದರು.

ಕಾನೂನು ತಜ್ಞರ ಜತೆ ಚರ್ಚಿಸಿ ಸೂಕ್ತ ಕ್ರಮ : ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನಲ್ಲಿರುವ ಸರ್ಕಾರಿ ಕಾರ್ಖಾನೆ ಕುರಿತಂತೆ ಕಾನೂನು ತಜ್ಞರ ಜೊತೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಗಣೇಶ್.ಎ.ಎನ್. ಅವರ ಪ್ರಶ್ನೆಗೆ ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಉತ್ತರಿಸುತ್ತಿದ್ದಾಗ, ಮಧ್ಯಪ್ರವೇಶಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಂಪ್ಲಿ ಸಕ್ಕರೆ ಕಾರ್ಖಾನೆ ಪ್ರಕರಣದ ಬಗ್ಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಹೀಗಾಗಿ, ಇದರ ಬಗ್ಗೆ ಸದನದಲ್ಲಿ ಚರ್ಚಿಸಬೇಕೋ, ಬೇಡ್ವೋ ಎಂಬುದರ ಬಗ್ಗೆ ಕಾನೂನು ತಜ್ಞರು ಮತ್ತು ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಲಾಗುವುದು. ಸೋಮವಾರ ನನ್ನ ಬಳಿ ಬಂದು ಚರ್ಚಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸದೃಢ, 2023ರ ಚುನಾವಣೆಯಲ್ಲಿ ಬದಲಾವಣೆ: ಸಂಸದ ಡಿ.ಕೆ.ಸುರೇಶ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.