ಬೆಂಗಳೂರು: ಪೌರಡಾಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರಿಗೂ ಕೊರೊನಾ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ನಾಗರಾಜ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
-
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ...#Covid_19
— N.Nagaraj (MTB) (@MtbNagaraju) January 15, 2022 " class="align-text-top noRightClick twitterSection" data="
">ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ...#Covid_19
— N.Nagaraj (MTB) (@MtbNagaraju) January 15, 2022ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ...#Covid_19
— N.Nagaraj (MTB) (@MtbNagaraju) January 15, 2022
ನನಗೆ ಕೋವಿಡ್ ದೃಢಪಟ್ಟಿದ್ದು, ನಾನು ಆರೋಗ್ಯವಾಗಿದ್ದೇನೆ. ಕಳೆದ ಎರಡ್ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು.
ಮತ್ತೆ 114 ಮಂದಿ ಪೊಲೀಸರಿಗೆ ತಗುಲಿದ ಕೊರೊನಾ:
ಇಂದೂ 114 ಮಂದಿ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಸುಮಾರು 23 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 618 ಮಂದಿ ಪೊಲೀಸರಿಗೆ ಕೋವಿಡ್ ದೃಢಪಟ್ಟಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 32,793 ಕೊರೊನಾ ಕೇಸ್ ಪತ್ತೆ: ಪಾಸಿಟಿವಿಟಿ ದರ 15%ಕ್ಕೆ ಏರಿಕೆ