ETV Bharat / state

3ನೇ ಅಲೆ ನಿರ್ವಹಣೆಯಲ್ಲಿ ಕಲಬುರಗಿ ರಾಜ್ಯಕ್ಕೆ ಮಾದರಿಯಾಗಬೇಕು ; ಮುರುಗೇಶ್ ನಿರಾಣಿ ಸೂಚನೆ

author img

By

Published : Jun 27, 2021, 3:19 PM IST

ಕೋವಿಡ್ 3ನೆ ಅಲೆ ಸವಾಲಾಗಿ ಪರಿಣಮಿಸುತ್ತಿರುವುದರಿಂದ ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಪ್ರತಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಔಷಧಗಳು, ಲಸಿಕೆ, ಹಾಸಿಗೆ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯವಿರುವ ಕಡೆ ಹೆಚ್ಚಿನ ಮೂಲಸೌಕರ್ಯಗಳು ಹಾಗೂ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೂ ಗಮನ ಹರಿಸಬೇಕು..

nirani
nirani

ಬೆಂಗಳೂರು : ಕೊರೊನಾ ಎರಡನೇ ಅಲೆಯನ್ನು ನಿಯಂತ್ರಣ ಮಾಡಿದ ಮಾದರಿಯಲ್ಲೇ ಮೂರನೇ ಅಲೆ ನಿಯಂತ್ರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷವಾಗಿ 3ಟಿ (ಪರೀಕ್ಷೆ, ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆ) ಸೂತ್ರವನ್ನು ಪಾಲಿಸಬೇಕೆಂದು ಕಲಬುರಗಿ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಮೂರನೇ ಕೋವಿಡ್ -19 ಅಲೆ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಜಿಲ್ಲಾಡಳಿತದೊಂದಿಗೆ ಸಚಿವ ಮುರುಗೇಶ್ ನಿರಾಣಿ ವಿಡಿಯೋ ಸಂವಾದ ನಡೆಸಿದರು.

2ನೇ ಅಲೆ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯು ಅತಿ ವೇಗವಾಗಿ ಕೋವಿಡ್ ಸೋಂಕು ನಿಯಂತ್ರಿಸಿದ ಮೊದಲ 5 ಜಿಲ್ಲೆಗಳಲ್ಲಿ 3ನೇ ಸ್ಥಾನ ಪಡೆದಿದೆ. 3ನೇ ಅಲೆಯಲ್ಲೂ 31 ಜಿಲ್ಲೆಗಳಿಗೂ ನಮ್ಮ ಜಿಲ್ಲೆ ಮಾದರಿಯಾಗಬೇಕು. ಅದಕ್ಕಾಗಿ ಈ ಬಾರಿ ಜಿಲ್ಲೆಯಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ವಿಶೇಷ ಒತ್ತು ಕೊಟ್ಟು ಕೋವಿಡ್ ಸೋಂಕು ನಿಯಂತ್ರಿಸಬೇಕು. ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಅಭಿಯಾನದ ಶಿಬಿರಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಸೂಚಿಸಿದರು.

ಈ ಬಾರಿ ಜಿಲ್ಲಾಡಳಿತ, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಬೇಕು, ಪ್ರತಿದಿನ ಸರಣಿ ಸಭೆಗಳನ್ನು ನಡೆಸಿ ಜಿಲ್ಲೆಯ ಸ್ಥಿತಿಗತಿಗಳನ್ನು ಪರಾಮರ್ಶೆ ನಡೆಸಬೇಕೆಂದು ಸಚಿವ ನಿರಾಣಿ ನಿರ್ದೇಶನ ನೀಡಿದ್ದಾರೆ.

ವಿವಿಧ ಇಲಾಖೆಗಳ ಸಮನ್ವಯದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಬೇಕು. ಗ್ರಾಮ ಪಂಚಾಯತ್, ಹೋಬಳಿ, ತಾಲೂಕು, ಜಿಲ್ಲಾ ಮಟ್ಟಗಳಲ್ಲಿ ಎಲ್ಲೆಲ್ಲಿ ಗಂಭೀರ ಸಮಸ್ಯೆಗಳಿವೆ ಎಂಬುದರ ಮಾಹಿತಿಯನ್ನು ಮುಂಚಿತವಾಗಿಯೇ ಪಡೆದು ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಬೇಕು. ಜನಪ್ರತಿನಿಧಿಗಳ ಜೊತೆ ಪ್ರತಿದಿನ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಸೇರಿ ಮತ್ತಿತರರು ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಜಿಲ್ಲಾ ಹಂತದ ಸ್ಥಳೀಯ ನಾಯಕರು, ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸುವಂತೆ ಸಚಿವ ನಿರಾಣಿ ಸೂಚನೆ ನೀಡಿದರು.

ಮಹಾರಾಷ್ಟ್ರ, ಆಂಧ್ರ,ತೆಲಂಗಾಣ ಗಡಿ ತಪಾಸಣೆ ಹೆಚ್ಚಿಸಿ : ವೈದ್ಯಕೀಯ ಕಾಲೇಜು, ಜಿಲ್ಲಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗಾಗಿ ಹಾಸಿಗೆಗಳು, ಐಸಿಯು ಮತ್ತು ಮಿನಿ ಐಸಿಯು ಘಟಕಗಳನ್ನು ಈಗಿನಿಂದಲೇ ಸಿದ್ಧಗೊಳಿಸಬೇಕು ಎಂದು ಸೂಚಿಸಿದ್ದಾರೆ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಪರಿಪಾಟ ನಿಲ್ಲಿಸಬೇಕೆಂದು ತಾಕೀತು ಮಾಡಿದ ನಿರಾಣಿ, ಈಗಾಗಲೇ ಜಿಲ್ಲಾಡಳಿತವು ಬೇರೆ ಬೇರೆ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. ಕಲಬುರಗಿ ಜಿಲ್ಲೆಯು ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳಿಗೆ ಗಡಿ ಹಂಚಿಕೊಂಡಿರುವುದರಿಂದ ಗಡಿ ಭಾಗದಲ್ಲಿ ತಪಾಸಣೆಯನ್ನು ಹೆಚ್ಚು ಮಾಡಬೇಕೆಂದು ತಿಳಿಸಿದರು.

ಕೋವಿಡ್ 3ನೆ ಅಲೆ ಸವಾಲಾಗಿ ಪರಿಣಮಿಸುತ್ತಿರುವುದರಿಂದ ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಪ್ರತಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಔಷಧಗಳು, ಲಸಿಕೆ, ಹಾಸಿಗೆ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯವಿರುವ ಕಡೆ ಹೆಚ್ಚಿನ ಮೂಲಸೌಕರ್ಯಗಳು ಹಾಗೂ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೂ ಗಮನ ಹರಿಸಬೇಕು ಎಂದು ಹೇಳಿದ್ರು.

ಸೋಂಕು ನಿಯಂತ್ರಿಸುವಲ್ಲಿ ಕೋವಿಡ್ ವಾರಿಯರ್ಸ್‍ಗಳ ಪಾತ್ರ ಪ್ರಮುಖವಾಗಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇದು ನಮ್ಮ ಮನೆಯ ಸಮಸ್ಯೆ ಎಂದುಕೊಂಡು ಪ್ರತಿಯೊಬ್ಬರು ಸೋಂಕು ತಡೆಗಟ್ಟಲು ಶಪಥ ಮಾಡಬೇಕೆಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.