ETV Bharat / state

ಶೀಘ್ರದಲ್ಲೇ ಉಚಿತ ಮರಳು ನೀತಿ ಜಾರಿ : ಸಚಿವ ಮುರುಗೇಶ್ ನಿರಾಣಿ - ಕರ್ನಾಟಕ ವಿಧಾನಸಭೆ ಅಧಿವೇಶನ

ನೀವು ರೈತರಿಗೆ ಎತ್ತಿನಗಾಡಿಯಲ್ಲಿ ಮರಳು ಸಾಗಾಣೆ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಹೇಳುತ್ತೀರಿ. ಹಳ್ಳ-ಕೊಳ್ಳ, ಕೆರೆ ಮತ್ತಿತರ ಕಡೆ ಮರಳು ತೆಗೆಯಲು ಹೋದರೆ ಪೊಲೀಸರು ರೈತರ ಎತ್ತಿನಗಾಡಿಗಳನ್ನೇ ವಶಪಡಿಸಿಕೊಂಡಿದ್ದಾರೆ..

Murugesh Nirani promised to implement free sand policy
ಉಚಿತ ಮರಳು ನೀತಿ ಜಾರಿಗೊಳಿಸುವ ಭರವಸೆ
author img

By

Published : Mar 19, 2021, 6:59 PM IST

ಬೆಂಗಳೂರು : ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲಕ್ಷ ರೂಪಾಯಿನೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರ ನೂತನ ಉಚಿತ ಮರಳು ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಜೆಡಿಎಸ್‍ ಶಾಸಕ ಸಿ ಎನ್ ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ 10 ಲಕ್ಷದೊಳಗಿನ ಮನೆಗೆ 100 ರಿಂದ 200 ರೂ. ದರದಲ್ಲಿ ಟನ್ ಮರಳು ಪೂರೈಕೆ ಮಾಡುವ ನೀತಿ ಜಾರಿ ಮಾಡುತ್ತೇವೆ ಎಂದರು.

ಬಡವರು ಹೆಚ್ಚಿನ ಹಣ ವ್ಯಯಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮ ಪಂಚಾಯತ್​ನಿಂದ ಹಿಡಿದು ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡುವವರಿಗೆ ಇದು ಅನುಕೂಲವಾಗಲಿದೆ ಎಂದರು.

ಈಗಾಗಲೇ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಹಳ್ಳ, ತೊರೆ ಮತ್ತಿತರ ಕಡೆ ಎತ್ತಿನಗಾಡಿ ಮೂಲಕ ಮರಳು ಸಾಗಿಸಲು ಅವಕಾಶ ಕಲ್ಪಿಸಿದ್ದೇವೆ. ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್‍ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

1, 2 ಮತ್ತು 3ನೇ ಶ್ರೇಣಿಯ ಹಳ್ಳ, ತೊರೆ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳನ್ನು ಗ್ರಾಪಂ ಮೂಲಕ ವಿಲೇವಾರಿ ಮಾಡಲು ಅವಕಾಶ ನೀಡಲಾಗಿದೆ. ಅದೇ ರೀತಿ 4, 5 ಮತ್ತು 6ನೇ ಶ್ರೇಣಿಯ ಹೊಳೆ, ನದಿ, ಅಣೆಕಟ್ಟು, ಜಲಾಶಯ, ಬ್ಯಾರೇಜ್ ಹಾಗೂ ಅಣೆಕಟ್ಟಿನ ಹಿನ್ನೀರಿನ ಪ್ರದೇಶಗಳಲ್ಲಿ ಮರಳು ತೆಗೆಯಲು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಮತ್ತು ಹಟ್ಟಿ ಚಿನ್ನದ ಗಣಿಗೆ ವಹಿಸಲಾಗಿದೆ.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ 46 ಹಾಗೂ ಹಟ್ಟಿ ಚಿನ್ನದ ಗಣಿಶ್ರೇಣಿಯ 43 ಮರಳು ಬ್ಲಾಕ್‍ಗಳಲ್ಲಿ ಗಣಗಾರಿಕೆ ನಡೆಸಲು ಆಯಾ ಜಿಲ್ಲಾ ಮರಳು ಸಮಿತಿಗಳಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಕಠಿಣ ಕ್ರಮ : ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್‍ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ನಾನು ಸಭೆಗಳನ್ನು ನಡೆಸಿ, ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ ಎಂದರು.

ಇಬ್ಬರು ಅಧಿಕಾರಿಗಳು ಅಮಾನತು : ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ಅಧಿಕಾರಿಗಳನ್ನು ತನಿಖೆ ನಡೆಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಒಂದು ವೇಳೆ ನಮ್ಮ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.

ನಾನು ಪ್ರವಾಸ ಮಾಡಿದ ಎಲ್ಲಾ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರು ಬರುತ್ತಲೇ ಇವೆ. ಈ ಹಿನ್ನೆಲೆ ಏಕಗವಾಕ್ಷಿ ಪದ್ಧತಿ ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.

ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 154 ಕೋಟಿ ರೂ. ಆದಾಯ ಬರುತ್ತದೆ. ಕೆಲ ಕಡೆ ಸೋರಿಕೆಯಾಗುತ್ತಿರುವುದನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ.

ಎಲ್ಲಿಯೂ ಕೂಡ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುತ್ತಿಲ್ಲ. ಒಂದು ವೇಳೆ ನನ್ನ ಗಮನಕ್ಕೆ ಬಂದರೆ, ಅಂತವರ ಮೇಲೆ ಕಾನೂನು ಕ್ರಮ ಜರುಗಿಸುವುದು ಖಚಿತ ಎಂದರು. ನಾನು ಸಚಿವನಾದ ನಂತರ ಜಿಲ್ಲಾ ಪ್ರವಾಸ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ.

ಮಣ್ಣನ್ನು ಫಿಲ್ಟರ್ ಮಾಡಿ ಕೆಲ ಕಡೆ ಮರಳು ತಯಾರಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಇಂತಹ ಪ್ರಕರಣಗಳಲ್ಲಿ ಯಾರೇ ಭಾಗಿಯಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಅವರ ಮೇಲೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಹಾಸನ ಸೇರಿ ರಾಜ್ಯದ ಅನೇಕ ಕಡೆ ಮಣ್ಣನ್ನು ಫಿಲ್ಟರ್ ಮಾಡಿ ಮರಳಿನ ರೂಪದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದನ್ನು ಬಳಕೆ ಮಾಡಿ ಮನೆ ಕಟ್ಟಿದರೆ ಕಟ್ಟಡಗಳು ಉರುಳಿ ಬೀಳುತ್ತವೆ.

ಮೊದಲು ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಜೆಡಿಎಸ್‍ ಸದಸ್ಯ ಹೆಚ್.ಡಿ.ರೇವಣ್ಣ, ಬಹುತೇಕ ಕಡೆ ಇಂತಹ ಅಕ್ರಮ ನಡೆಯಿತ್ತಿದೆ. ಇದನ್ನು ಪರಿಶೀಲಿಸಲು ನಿಮ್ಮ ಇಲಾಖೆಯಲ್ಲಿ ಅಧಿಕಾರಿಗಳೇ ಇಲ್ಲ. ಒಂದಿಬ್ಬರಿದ್ದರೂ, ಅವರು ಏನು ಮಾಡಲಾಗದ ಸ್ಥಿತಿಯಲ್ಲಿರುತ್ತಾರೆ.

ಕಾನೂನು ಬಾಹಿರ ಚಟುವಟಿಕೆಗಳಿಗೆ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದಾರೆ. ಸಣ್ಣ ಪ್ರಮಾಣದಲ್ಲಿ ಮರಳು ಸಾಗಾಣಿಕೆ ಮಾಡಿದರೆ ರೈತರ ಮೇಲೆ ಮೊಕದ್ದಮೆ ದಾಖಲಿಸುತ್ತೀರಿ. ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟವಾಗುತ್ತಿದೆ. ಮೊದಲು ಇದನ್ನು ಸರಿಪಡಿಸಲು ಸ್ಪಷ್ಟವಾದ ಕಾನೂನು ತನ್ನಿ ಎಂದರು.

ಡಾ. ಅನ್ನದಾನಿ ಮಾತನಾಡಿ, ನೀವು ರೈತರಿಗೆ ಎತ್ತಿನಗಾಡಿಯಲ್ಲಿ ಮರಳು ಸಾಗಾಣೆ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಹೇಳುತ್ತೀರಿ. ಹಳ್ಳ-ಕೊಳ್ಳ, ಕೆರೆ ಮತ್ತಿತರ ಕಡೆ ಮರಳು ತೆಗೆಯಲು ಹೋದರೆ ಪೊಲೀಸರು ರೈತರ ಎತ್ತಿನಗಾಡಿಗಳನ್ನೇ ವಶಪಡಿಸಿಕೊಂಡಿದ್ದಾರೆ.

ರಾತ್ರಿ ವೇಳೆ ಟ್ರ್ಯಾಕ್ಟರ್, ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಿದರೂ ಪೊಲೀಸರು ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು. ಮರಳು ವಿಚಾರದಲ್ಲಿ ಸಾಕಷ್ಟು ಲೋಪಗಳಿರುವುದು ನನಗೂ ಗೊತ್ತು. ಎಲ್ಲವನ್ನೂ ಬಗೆಹರಿಸುವುದಾಗಿ ಸಚಿವ ನಿರಾಣಿ ಆಶ್ವಾಸನೆ ನೀಡಿದರು.

ಇದೇ ವೇಳೆಗೆ ತಮಗೂ ಮಾತನಾಡಲು ಅವಕಾಶ ಕೊಡಿ ಎಂದು ಆಡಳಿತ ಮತ್ತು ಪ್ರತಿಪಕ್ಷದ ಕೆಲ ಸದಸ್ಯರು ಎದ್ದು ನಿಂತಾಗ ಸ್ಪೀಕರ್ ಅವಕಾಶ ನೀಡಲಿಲ್ಲ. ಇದು ರಾಜ್ಯದ ಎಲ್ಲ ಕಡೆ ಗಂಭೀರ ಸಮಸ್ಯೆ ಇದೆ. ಅರ್ಧ ಗಂಟೆಗಳ ಕಾಲ ಚರ್ಚೆಗೆ ಅವಕಾಶ ನೀಡುವಂತೆ ಕೋರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.