ETV Bharat / state

88 ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ, ರಾಜ್ಯದಲ್ಲಿ ಒಟ್ಟು 10,904 ಉದ್ಯೋಗ ಸೃಷ್ಟಿ : ಸಚಿವ ನಿರಾಣಿ

ಈಗಾಗಲೇ ವಿದೇಶಿ ನೇರ ಹೂಡಿಕೆ (ಎಫ್​ಡಿಐ )ನಲ್ಲಿ ಕರ್ನಾಟಕ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದು, ಬಂಡವಾಳ ಹೂಡಿಕೆಯಲ್ಲೂ ಬೇರೆ ರಾಜ್ಯಗಳನ್ನು ಹಿಂದಿಕ್ಕಿ ಇಡೀ ದೇಶದಲ್ಲೇ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ‌ತರಲು ಅವಿರತ ಪ್ರಯತ್ನ ನಡೆಸಿದ್ದಾರೆ..

minister-murugesh-nirani
ಸಚಿವ ಮುರುಗೇಶ್ ನಿರಾಣಿ
author img

By

Published : Feb 2, 2022, 3:18 PM IST

ಬೆಂಗಳೂರು : ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಡಿ ಒಟ್ಟು 2367.99 ಕೋಟಿ ರೂ. ಮೊತ್ತದ 88 ಯೋಜನೆಗಳಿಗೆ ಅನುಮೋದನೆ ನೀಡಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಒಟ್ಟು 88 ಯೋಜನೆಗಳಿಂದ 2367.99 ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಲಿದ್ದು,ಇದರಿಂದ 10904 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 7 ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿ ಅನುಮೋದನೆ ನೀಡಿದ್ದು, ಒಟ್ಟು 799.1 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 3237 ಜನರಿಗೆ ಉದ್ಯೋಗ ಲಭಿಸಲಿವೆ.

15 ಕೋಟಿ ರೂ. ಯಿಂದ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 78 ಯೋಜನೆಗಳಿಗೆ ಅನುಮೋದಿಸಿದ್ದು, ಒಟ್ಟು 1431.74 ಕೋಟಿ ರೂ. ಹೂಡಿಕೆ ಮಾಡಲಿದೆ. ಸುಮಾರು 7667 ಉದ್ಯೋಗಗಳು ಸೃಜನೆಯಾಗಲಿವೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು 137.15 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡಯ್ಯಬೇಕು ಎಂಬುದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರ ಬಹುದಿನಗಳ ಕನಸಾಗಿದೆ.

ಈಗಾಗಲೇ ವಿದೇಶಿ ನೇರ ಹೂಡಿಕೆ (ಎಫ್​ಡಿಐ )ನಲ್ಲಿ ಕರ್ನಾಟಕ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದು, ಬಂಡವಾಳ ಹೂಡಿಕೆಯಲ್ಲೂ ಬೇರೆ ರಾಜ್ಯಗಳನ್ನು ಹಿಂದಿಕ್ಕಿ ಇಡೀ ದೇಶದಲ್ಲೇ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ‌ತರಲು ಅವಿರತ ಪ್ರಯತ್ನ ನಡೆಸಿದ್ದಾರೆ.

ಬಂಡವಾಳ ಹೂಡಿಕೆಗೆ ಉದ್ಯಮಿಗಳನ್ನು ಆಹ್ವಾನಿಸಲಾಗುತ್ತದೆ. ಇದರಿಂದ ರಾಜ್ಯಕ್ಕೆ ದೊಡ್ಡ ಮೊತ್ತದ ಬಂಡವಾಳ ಹೂಡಿಕೆಯಾಗಲಿದ್ದು, ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗಲಿವೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಮಣರೆಡ್ಡಿ, ಇಲಾಖೆಯ ಆಯುಕ್ತೆ, ಗುಂಜನ್ ಕೃಷ್ಣ, ನಿರ್ದೇಶಕರುಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಅನುಮೋದನೆ ನೀಡಿರುವ ಯೋಜನೆಗಳು : ಮೆ.ಗುರುದತ್ತ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ಪಾಕ್೯ ಲಿ-₹357 ಕೋಟಿ

ಮೆ. ಸ್ಪಾನ್ ಸುಲ್ಸ್ ಫಾರ್ಮುಲೇಷನ್ -₹96 ಕೋಟಿ
ಮೆ.ರಿನಾಕ್ ಇಂಡಿಯಾ ಲಿಮಿಟೆಡ್- ₹80 ಕೋಟಿ
ಮೆ. ಸನ್ವಿಕ್ ಸ್ಟೀಲ್ ಲಿಮಿಟೆಡ್-₹64 ಕೋಟಿ
ಮೆ. ಹೆಚ್ ಅಂಡ್ ವಿ ಅಡ್ವಾನ್ಸಡ್ ಮೆಟೀರಿಯಲ್ ಇಂಡಿಯಾ ಪ್ರೆ,ಲಿಮಿಟೆಡ್-₹59.31 ಕೋಟಿ
ಮೆ.ಎ .ಒನ್ ಟೆಕ್ಸ್ ಟೆಕ್ ಪ್ರೆ.ಲಿಮಿಟೆಡ್ -₹46.50 ಕೋಟಿ
ಮೆ.ಟೆಕ್ಸ್ ಪೋಟ್೯ ಇಂಡಸ್ಟ್ರೀಸ್ ಪ್ರೆ.ಲಿಮಿಟೆಡ್-₹44.80 ಕೋಟಿ
ಮೆ. ಕೇನಾಸ್ಸ್ ಟೆಕ್ನಾಲಜಿ ಇಂಡಿಯಾ ಪ್ರೆ.ಲಿಮಿಟೆಡ್-₹35 ಕೋಟಿ.

ಓದಿ: ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.