ETV Bharat / state

ಕರಾವಳಿ ಭಾಗಕ್ಕೆ ಶೀಘ್ರದಲ್ಲೇ ಪ್ರತ್ಯೇಕ ಮರಳು ನೀತಿ: ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಮರಳಿನ ಅಭಾವದ ಬಗ್ಗೆ ಸಚಿವರ ಗಮನ ಸೆಳೆದಾಗ, ಸದಸ್ಯರಾದ ರಘುಪತಿಭಟ್, ನಾಡಗೌಡ, ಕುಮಾರ್ ಬಂಗಾರಪ್ಪ ಮತ್ತಿತರರು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜನರಿಗೆ ಸುಲಭವಾಗಿ ಮರಳು ಲಭ್ಯವಾಗುತ್ತಿಲ್ಲ. ಪ್ರತಿ ಕೆಡಿಪಿ ಸಭೆಯಲ್ಲೂ ಇದು ಪ್ರಸ್ತಾಪವಾಗುತ್ತದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Minister Murugesh nirani talks in assembly about sand amendment
ಸಚಿವ ಮುರುಗೇಶ್ ನಿರಾಣಿ
author img

By

Published : Jan 29, 2021, 6:31 PM IST

ಬೆಂಗಳೂರು: ಕರಾವಳಿ ಭಾಗಗಳಲ್ಲಿ ಮರಳುಗಾರಿಕೆಗೆ ಅನುಕೂಲವಾಗುವಂತೆ ಶೀಘ್ರದಲ್ಲೇ ಪ್ರತ್ಯೇಕ ಕರಾವಳಿ ಮರಳು ನೀತಿಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್ ಪ್ರಶ್ನೆಗೆ ಉತ್ತರಿಸಿದ ಅವರು, ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ಮರಳು ನೀತಿಯನ್ನು ಜಾರಿಗೆ ತರಲಾಗುವುದು. ಇದರಿಂದಾಗಿ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದ್ದು, ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲಾ ಮತ್ತು ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಮರಳಿನ ಬಗ್ಗೆ ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅರಿವಿದೆ. ಪದೇ ಪದೆ ಸಭೆ ನಡೆಸುವುದು, ಮುಂದೂಡುವುದರಲ್ಲಿ ಅರ್ಥವಿಲ್ಲ. ಜನರಿಗೆ ಸುಲಭವಾಗಿ ಮರಳು ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಕರಾವಳಿ ಭಾಗಕ್ಕೆ ಶೀಘ್ರದಲ್ಲೇ ಪ್ರತ್ಯೇಕ ಮರಳು ನೀತಿ: ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಮರಳಿನ ಅಭಾವದ ಬಗ್ಗೆ ಸಚಿವರ ಗಮನ ಸೆಳೆದಾಗ, ಸದಸ್ಯರಾದ ರಘುಪತಿಭಟ್, ನಾಡಗೌಡ, ಕುಮಾರ್ ಬಂಗಾರಪ್ಪ ಮತ್ತಿತರರು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜನರಿಗೆ ಸುಲಭವಾಗಿ ಮರಳು ಲಭ್ಯವಾಗುತ್ತಿಲ್ಲ. ಪ್ರತಿ ಕೆಡಿಪಿ ಸಭೆಯಲ್ಲೂ ಇದು ಪ್ರಸ್ತಾಪವಾಗುತ್ತದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದಸ್ಯರ ಮನವಿಗೆ ಸ್ಪಂದಿಸಿದ ಸಚಿವ ನಿರಾಣಿ, ನಮ್ಮ ಸರ್ಕಾರ ಪ್ರತಿಯೊಬ್ಬರಿಗೂ ಸುಲಭವಾಗಿ ಮರಳು ದೊರೆಯುವಂತೆ ನೋಡಿಕೊಳ್ಳಲಿದೆ. ಕಾನೂನಿನ ವ್ಯಾಪ್ತಿಯಲ್ಲೇ ನಿಯಮಗಳಿಗೆ ಒಳಪಟ್ಟು ಮರಳು ಹರಾಜು ಪ್ರಕ್ರಿಯೆ ನಡೆಯಲಿದೆ. ಮರಳು ಎಲ್ಲರಿಗೂ ಸಿಕ್ಕರೆ ಮಾತ್ರ ಸುಲಭವಾಗಿ ಕಾಮಗಾರಿಗಳು ನಡೆಯುತ್ತವೆ. ಕೆಲವು ಸಂದರ್ಭದಲ್ಲಿ ಆಶ್ರಯ ಮನೆ, ಸಣ್ಣಪುಟ್ಟ ಮನೆಗಳ ನಿರ್ಮಾಣಕ್ಕಾಗಿ ಮರಳನ್ನು ಎತ್ತಿನಗಾಡಿ, ದ್ವಿಚಕ್ರ ವಾಹನ ಮತ್ತಿತರ ವಾಹನಗಳಲ್ಲಿ ಸರಬರಾಜು ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನಾವು ಯಾರಿಗೂ ದಂಡ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ ನಿಯಮಗಳ ಸರಳೀಣಕರಣದ ಅಗತ್ಯವಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್​ಝೆಡ್​​ ವ್ಯಾಪ್ತಿಯಲ್ಲಿನ ನದಿ ಪಾತ್ರಗಳಲ್ಲಿ 2020-21ನೇ ಸಾಲಿನಲ್ಲಿ ಒಟ್ಟು 13 ಮರಳು ದಿಬ್ಬಗಳನ್ನು ತೆರವುಗೊಳಿಸಲು ಕರಾವಳಿ ವಲಯ ನಿರ್ವಹಣ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. 13 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಏಳು ಸದಸ್ಯರ ಸಮಿತಿಯಿಂದ ಒಟ್ಟು 104 ಸಾಂಪ್ರದಾಯಿಕ ಮರಳು ತೆಗೆಯುವ ವ್ಯಕ್ತಿಗಳಿಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಪರವಾನಗಿಗಳನ್ನು ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಇದನ್ನೂ ಓದಿ: ಪೌರ ಕಾರ್ಮಿಕರ ಹಿತಕ್ಕೆ ವಿಶ್ರಾಂತಿ ಗೃಹ ನಿರ್ಮಾಣ : ಮಾಜಿ ಸಚಿವ ಕೋಟೆ ಶಿವಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.