ETV Bharat / state

ಶಾಲಾ-ಕಾಲೇಜುಗಳ ಕೊಠಡಿ ಕೆಲಸ ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್ ಸೂಚನೆ - Minister nagesh

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಚಿವ ಬಿ.ಸಿ.ನಾಗೇಶ್​ ಸಭೆ ನಡೆಸಿದರು.

ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿ
ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿ
author img

By

Published : Aug 3, 2022, 9:41 PM IST

ಬೆಂಗಳೂರು: ವಿವೇಕ ಯೋಜನೆಯಡಿ ರಾಜ್ಯದ 8,101 ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ಚರ್ಚಿಸಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿದೆ. ಕೊಠಡಿಗಳು, ದುರಸ್ತಿ ಅಗತ್ಯತೆಯನ್ನು ನೋಡಿಕೊಂಡು ಆದ್ಯತೆ ಮೇರೆಗೆ ನೂತನ ಕೊಠಡಿಗಳು ನಿರ್ಮಾಣವಾಗಬೇಕು. ಕೊಠಡಿಗಳ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ವೇಳೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಕಾಮಗಾರಿ ಮುಗಿಯುವವರೆಗೆ ವಿದ್ಯಾರ್ಥಿಗಳಿಗೆ ಪರ್ಯಾಯ ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಸರ್ಕಾರಿ, ಶಾಲಾ ಕಾಲೇಜುಗಳ ಆಸ್ತಿ ಸಂರಕ್ಷಣೆಗೆ ಇದೇ ಆಗಸ್ಟ್​ನಿಂದ ಅಕ್ಟೋಬರ್​ವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಸ್ತಿ ದಾಖಲೆಗಳು ಸೂಕ್ತವಾಗಿವೆಯೇ? ಈ ಹಿಂದೆ ಶಿಕ್ಷಣ ಸಂಸ್ಥೆಗಳಿಗಾಗಿ ದಾನ ರೂಪದಲ್ಲಿ ನೀಡಿರುವ ಆಸ್ತಿಗಳು ನೋಂದಣಿಯಾಗಿವೆಯೇ? ಎಂದ ಅವರು, ಒತ್ತುವರಿ ತೆರವು ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ಕಂದಾಯ ಇಲಾಖೆಯ ಜೊತೆಗೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಾಲೆ-ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಅನುಷ್ಠಾನ ಮಾಡಲಾಗುತ್ತಿರುವ ಶಾಲಾ ಶೈಕ್ಷಣಿಕ ದತ್ತು ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯಾವುದಾದರೂ ಒಂದು ಶಾಲೆ ಅಥವಾ ಪಿಯು ಕಾಲೇಜನ್ನು ಶೈಕ್ಷಣಿಕ ಅಭಿವೃದ್ಧಿ ವಿಚಾರಕ್ಕೆ ದತ್ತು ಪಡೆಯಬೇಕು. ತಿಂಗಳಿಗೆ ಕನಿಷ್ಠ ಒಮ್ಮೆ ಭೇಟಿ ನೀಡಬೇಕು. ಶಿಕ್ಷಕರು, ಉಪನ್ಯಾಸಕರಿಗೆ ಸಲಹೆ ಸೂಚನೆಗಳನ್ನು ನೀಡಬಹುದು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಸಲಹೆ, ಸೂಚನೆಗಳನ್ನು ಪಡೆಯಬೇಕು. ಶಿಕ್ಷಣ ಗುಣಮಟ್ಟ ಸುಧಾರಣೆ ಮತ್ತು ಪರೀಕ್ಷೆ ಫಲಿತಾಂಶ ಸುಧಾರಣೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಕುರಿತು ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ‘ಮನೆ ಮನೆಯಲ್ಲಿ ಧ್ವಜಾರೋಹಣ’ (ಹರ್ ಘರ್ ತಿರಂಗಾ) ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಮನೆ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸಲು ಎಲ್ಲರಿಗೂ ಸಲಹೆ, ಸೂಚನೆ, ಪ್ರೇರಣೆ ನೀಡಬೇಕು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅರ್ಥಪೂರ್ಣ ಆಚರಣೆಗಾಗಿ ಶಾಲೆ-ಕಾಲೇಜುಗಳಲ್ಲಿ ಪ್ರಬಂಧ, ಗೀತ ಗಾಯನ, ವೇಷ ಭೂಷಣ, ಭಾಷಣ, ರಾಷ್ಟ್ರಧ್ವಜ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಶಿಕ್ಷಣ ಇಲಾಖೆಯಿಂದಲೂ ಸುತ್ತೋಲೆ ಹೊರಡಿಸಲಾಗಿದ್ದು, ಅನುಷ್ಠಾನಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: 'ಹರ್ ಘರ್ ತಿರಂಗಾ' ಅಭಿಯಾನ ಯಶಸ್ವಿಗೊಳಿಸಲು ಬಿಬಿಎಂಪಿಯಿಂದ ಸೇಲ್ಸ್ ಕೌಂಟರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.