ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪಕ್ಷೇತರ ಶಾಸಕ ನಾಗೇಶ್ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
![Independent MLA, Minister Nagesh resigned](https://etvbharatimages.akamaized.net/etvbharat/prod-images/3777143_nagesh2.jpg)
ಹೌದು, ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ನಾಗೇಶ್, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ.
ಕೋಲಾರದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್ ಕಳೆದ ಜೂನ್ 14 ರಂದು ಜೆಡಿಎಸ್ ಕೋಟಾದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
![Independent MLA, Minister Nagesh resigned](https://etvbharatimages.akamaized.net/etvbharat/prod-images/3777143_nagendra.jpg)
ಮೈತ್ರಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಾಗೇಶ್ ಅತೃಪ್ತರೊಂದಿಗೆ ಕೈಜೋಡಿಸಿದ್ದಾರೆ. ರಾಜ್ಯಪಾಲರಿಗೂ ರಾಜೀನಾಮೆ ಪತ್ರ ಸಲ್ಲಿಸಿರುವ ನಾಗೇಶ್ 'ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಡಿದೀನಿ. ಜೆಡಿಎಸ್ಗೆ ನಾನು ಕೊಟ್ಟಿರುವ ಬೆಂಬಲ ವಾಪಸ್ ಪಡೆದಿದ್ದೇನೆ ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ರಾಜೀನಾಮೆ ನೀಡಿದ ಬಳಿಕ ಕಾರಿನಲ್ಲಿ ಹೊರಬಂದ ಶಾಸಕ, ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ಇದಕ್ಕೂ ಮುನ್ನ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುತ್ತಿರುವುದಾಗಿ ಮತ್ತು ರಾಜೀನಾಮೆ ನೀಡುತ್ತಿರುವುದಾಗಿ ಸಿಎಂಗೆ ಮತ್ತೊಂದು ಲೆಟರ್ ಅನ್ನು ನಾಗೇಶ್ ರವಾನಿಸಿದ್ದಾರೆ ಎಂದು ಹೇಳಲಾಗ್ತಿದೆ.