ETV Bharat / state

ಪ್ಯಾರಾ ಅಥ್ಲೀಟ್ ವೆಂಕಟೇಶ್ ನಮ್ಮ ನಾಡಿನ ಹೆಮ್ಮೆ: ಸಚಿವ ನಾರಾಯಣಗೌಡ - 4ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆ

2005 ರಲ್ಲಿ ವೆಂಕಟೇಶ್ 4ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು 6 ಪದಕಗಳನ್ನು ಪಡೆದು ವಿಶ್ವ ದಾಖಲೆ ಮಾಡಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. 1994ರಲ್ಲಿ ಬರ್ಲಿನ್‌ನಲ್ಲಿ ನಡೆದ ಮೊದಲ ಅಂತರರಾಷ್ಟ್ರೀಯ ಪ್ಯಾರಾ ಒಲಿಂಪಿಕ್ ಸಮಿತಿಯ (ಐಪಿಸಿ) ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

minister-narayana-gowda-talk
ಸಚಿವ ನಾರಾಯಣಗೌಡ
author img

By

Published : Feb 4, 2021, 9:20 PM IST

ಬೆಂಗಳೂರು: ಪದ್ಮಶ್ರೀ ಗೌರವಕ್ಕೆ ಭಾಜನರಾಗಿರುವ ಖ್ಯಾತ ಪ್ಯಾರಾ ಅಥ್ಲೀಟ್ ಕೆ.ವೈ. ವೆಂಕಟೇಶ್ ನಿವಾಸಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಭೇಟಿ ನೀಡಿ ಶುಭಕೋರಿ ಸನ್ಮಾನಿಸಿದರು.

ಸಚಿವ ನಾರಾಯಣಗೌಡ

ಓದಿ: ಬೆಂಗಳೂರಿಗೆ ರಾಷ್ಟ್ರಪತಿ ಆಗಮನ: ರಾಜ್ಯಪಾಲ, ಸಿಎಂರಿಂದ ಸ್ವಾಗತ

ದೇಶದ ಹೆಮ್ಮೆಯ ಪುತ್ರ ವೆಂಕಟೇಶ್ ಕನ್ನಡಿಗರು ಎನ್ನುವುದು ಇನ್ನಷ್ಟು ಸಂತಸದ ವಿಚಾರ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿಯಲ್ಲಿರುವ ಯುವಜನತೆಗೆ ವೆಂಕಟೇಶ್ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪದ್ಮಶ್ರೀ ಗೌರವಕ್ಕೆ ಪಾತ್ರವಾಗಿರುವ ವೆಂಕಟೇಶ್ ಅವರ ಸಾಧನೆಯನ್ನು ಸಚಿವರು ಕೊಂಡಾಡಿದರು.

ಸಚಿವರು ತಮ್ಮ ನಿವಾಸಕ್ಕೆ ಬಂದು ಗೌರವಿಸಿದ್ದು, ಸಚಿವರಿಗೆ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ವೆಂಕಟೇಶ್ ಧನ್ಯವಾದ ಅರ್ಪಿಸಿದರು. ತಮ್ಮ ಸಾಧನೆಗೆ ಇಲಾಖೆ ನೀಡಿದ್ದ ನೆರವನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಆಯುಕ್ತ ಶ್ರೀನಿವಾಸ್ ಕೆಂಪಯ್ಯ, ಪ್ಯಾರಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಅಧ್ಯಕ್ಷ ಎನ್.ಸಿ. ಸುಧೀರ್ ಅಥ್ಲೀಟ್ ಕೆ.ವೈ. ವೆಂಕಟೇಶ್ ನಿವಾಸದಲ್ಲಿ ಉಪಸ್ಥಿತರಿದ್ದರು.

2005 ರಲ್ಲಿ ವೆಂಕಟೇಶ್ 4ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು 6 ಪದಕಗಳನ್ನು ಪಡೆದು ವಿಶ್ವ ದಾಖಲೆ ಮಾಡಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. 1994ರಲ್ಲಿ ಬರ್ಲಿನ್‌ನಲ್ಲಿ ನಡೆದ ಮೊದಲ ಅಂತರರಾಷ್ಟ್ರೀಯ ಪ್ಯಾರಾ ಒಲಿಂಪಿಕ್ ಸಮಿತಿಯ (ಐಪಿಸಿ) ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ಹಾಕಿ, ವಾಲಿಬಾಲ್, ಫುಟ್‌ಬಾಲ್ ಮತ್ತು ಬ್ಯಾಡ್ಮಿಂಟನ್ ಸೇರಿದಂತೆ ಅನೇಕ ಪಂದ್ಯಗಳಲ್ಲಿ ಸಾಧನೆ ತೋರಿ ಪದಕಗಳಿಗೆ ಕೊರಳೊಡ್ಡಿದ್ದಾರೆ.

ಆಸ್ಟ್ರಿಯಾದಲ್ಲಿ ನಡೆದ ಮಲ್ಟಿ ಡಿಸಬಿಲಿಟಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಂಡು ಶಾಟ್​​ಪುಟ್‌ ನಲ್ಲಿ ವೆಂಕಟೇಶ್ ಮೊದಲ ಅಂತರರಾಷ್ಟ್ರೀಯ ಚಿನ್ನದ ಪದಕ ಜಯಿಸಿದ್ದರು. 2002ರಲ್ಲಿ ನಡೆದ ವಿಶ್ವಕಪ್ ನಲ್ಲಿ ಬ್ಯಾಡ್ಮಿಂಟನ್​​ಗಾಗಿ ಅವರು ಬೆಳ್ಳಿ ಪದಕ, 2004 ರಲ್ಲಿ ಓಪನ್ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್‌ಶಿಪ್ ನಲ್ಲಿ ಶಾಟ್ ಪುಟ್, ಡಿಸ್ಕಸ್ ಥ್ರೋ ಮತ್ತು ಜಾವೆಲಿನ್ ಥ್ರೋನಲ್ಲಿ ಮೂರು ಚಿನ್ನ ಮತ್ತು ಎರಡು ಬೆಳ್ಳಿ ಪದಕ ಜಯಿಸಿದ್ದಾರೆ.

ಸ್ವೀಡಿಷ್ ಓಪನ್ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕ, ಹಾಕಿ ಸ್ಪರ್ಧೆಯಲ್ಲಿ ಚಿನ್ನದ ಪದಕ, ಫುಟ್ಬಾಲ್ ಮತ್ತು ಬ್ಯಾಸ್ಕೆಟ್‌ಬಾಲ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕಗಳು ಮತ್ತು 2006 ರಲ್ಲಿ ಯುರೋಪಿಯನ್ ಓಪನ್ ಚಾಂಪಿಯನ್‌ಶಿಪ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ವೆಂಕಟೇಶ್ ಗೆದ್ದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.