ETV Bharat / state

I#Cheer4India: ಒಲಿಂಪಿಕ್​ನಲ್ಲಿ ಭಾಗಿಯಾಗುವ ಸ್ಪರ್ಧಿಗಳಿಗೆ ವಿಭಿನ್ನ ರೀತಿಯ ಪ್ರೋತ್ಸಾಹ - ಟೋಕಿಯೋ ಒಲಿಂಪಿಕ್​ನಲ್ಲಿ ದೇಶದ ಕ್ರೀಡಾಪಟುಗಳು ಭಾಗಿ

ಕ್ರೀಡಾ ಇಲಾಖೆ ಸಾಕಷ್ಟು ವಿನೂತನ ಕಾರ್ಯಕ್ರಮಗಳ ಮೂಲಕ ಕ್ರೀಡಾಪಟುಗಳನ್ನು ಉತ್ತೇಜಿಸುವ ಕಾರ್ಯ ಮಾಡುತ್ತಿದೆ ಎಂದು ಸಚಿವ ಡಾ. ನಾರಾಯಣಗೌಡ ತಿಳಿಸಿದರು.

minister-narayana-gowda-wishes-olympic-participants
ಸೆಲ್ಫಿ ಪಾಯಿಂಟ್ ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡ ಸಚಿವ ನಾರಾಯಣ ಗೌಡ
author img

By

Published : Jul 7, 2021, 6:48 PM IST

ಬೆಂಗಳೂರು: ಟೋಕಿಯೋ ಒಲಿಂಪಿಕ್​ನಲ್ಲಿ ಪಾಲ್ಗೊಳ್ಳುತ್ತಿರುವ ದೇಶದ ಕ್ರೀಡಾಪಟುಗಳನ್ನು ಬೆಂಬಲಿಸಲು ರಾಜ್ಯದಲ್ಲಿ ವಿಶಿಷ್ಟ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ.
ಸೆಲ್ಫಿ ಪಾಯಿಂಟ್‌ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ದೇಶದ ಕ್ರೀಡಾಪಟುಗಳಿಗೆ ಶುಭ ಹಾರೈಸುವ ವಿನೂತನ ಕಾರ್ಯಕ್ರಮಕ್ಕೆ ಸಚಿವ ಡಾ. ನಾರಾಯಣಗೌಡ ಇಂದು ವಿಧಾನಸೌಧ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿದರು. ಸ್ವತಃ ತಾವೇ ಸೆಲ್ಫಿ ಪಾಯಿಂಟ್‌ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ರಾಜ್ಯದ ಮೊದಲ ಸಲ್ಲಿಸಿದ ವ್ಯಕ್ತಿ ಆದರು.

ಇದೇ ಸಂದರ್ಭ ಮಾತನಾಡಿದ ಸಚಿವರು, ಕ್ರೀಡಾ ಇಲಾಖೆ ಸಾಕಷ್ಟು ವಿನೂತನ ಕಾರ್ಯಕ್ರಮಗಳ ಮೂಲಕ ಕ್ರೀಡಾಪಟುಗಳನ್ನು ಉತ್ತೇಜಿಸುವ ಕಾರ್ಯ ಮಾಡುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸೆಲ್ಫಿ ಪಾಯಿಂಟ್ ಸಿದ್ಧಪಡಿಸಲಾಗಿದೆ. ಟೋಕಿಯೋದಲ್ಲಿ ನಡೆಯುವ ಒಲಂಪಿಕ್ ನಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳನ್ನು ಈ ಮೂಲಕ ಉತ್ತೇಜಿಸುವ ಮಹತ್​ ಕಾರ್ಯಕ್ಕೆ ರಾಜ್ಯದಲ್ಲಿ ಚಾಲನೆ ನೀಡಿರುವುದಕ್ಕೆ ಹೆಮ್ಮೆಯಿದೆ ಎಂದು ವಿವರಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಅವರು ಸಹ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಫೋಟೋ ಕ್ಲಿಕ್ಕಿಸಿಕೊಂಡರು. ಜಪಾನ್ ನ ಟೋಕಿಯೋದಲ್ಲಿ ಒಲಂಪಿಕ್ಸ್ 2020 ಕ್ರೀಡಾಕೂಟವು 2021ರ ಜುಲೈ 23 ರಿಂದ ಆಗಸ್ಟ್ 08ರ ವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದಿಂದ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ದೇಶದ ಹೆಮ್ಮೆಯ ಪ್ರತೀಕವಾಗಿರುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಮತ್ತು ಭಾರತದ 130 ಕೋಟಿ ನಾಗರೀಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಸೆಲ್ಫಿ ಪಾಯಿಂಟ್ ಗಳನ್ನು ಅಳವಡಿಸಲು ಸೂಚಿಸಿತ್ತು.

ಇದನ್ನೂ ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸುವ ವೇಳೆ ಕೋವಿಡ್​ ನಿಯಮ ಮರೆತ ಕಾಂಗ್ರೆಸ್​ ನಾಯಕರು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.