ETV Bharat / state

ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆ ಬಾವಿ ತಡೆಗಟ್ಟಲು ವಿಶೇಷ ತಂಡ: ಸಚಿವ ಬೋಸರಾಜು - etv bharat karnataka

ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಬೋಸರಾಜು ತಿಳಿಸಿದ್ದಾರೆ.

Etv Bharatminister-ns-bosaraju-reaction-on-illegal-borewells-in-bangalore-urban-district
ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆ ಬಾವಿ ತಡೆಗಟ್ಟಲು ವಿಶೇಷ ತಂಡ: ಸಚಿವ ಬೋಸರಾಜು
author img

By ETV Bharat Karnataka Team

Published : Nov 10, 2023, 10:45 PM IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಂತರ್ಜಲ ನಿರ್ದೇಶನಾಲಯದಿಂದ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ ಎಸ್ ಬೋಸರಾಜು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ, ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿಗಳನ್ನು ಕೊರೆಯುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳುವುದು ಆದ್ಯತೆಯ ವಿಷಯವಾಗಿದೆ. ಅನಧಿಕೃತ ಕೊಳವೆ ಬಾವಿಗಳಿಂದ ಅಂತರ್ಜಲ ಮಟ್ಟ ಕಡಿಮೆ ಆಗುತ್ತದೆ. ಅಂತರ್ಜಲ ಶೋಷಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೊಳವೆ ಬಾವಿಗಳನ್ನು ಕೊರೆಸುವುದಕ್ಕೆ ಅನುಮತಿ ಪಡೆದುಕೊಳ್ಳುವುದು ಅಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಇದನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ. ಅನುಮತಿ ಪಡೆದುಕೊಳ್ಳದೇ ಕೊಳವೆ ಬಾವಿಗಳನ್ನ ಕೊರೆಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ವಿಶೇಷ ತಂಡವನ್ನು ರಚಿಸಲಾಗಿದೆ ಎಂದಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ವಿಶೇಷ ತಂಡಕ್ಕೆ ಸೂಚಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ತಮ್ಮ ಅಧೀನದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ತಿಳಿಸಲಾಗಿದೆ. ಅಲ್ಲದೇ, ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ಸೂಚನೆಯಂತೆ ಅಂತರ್ಜಲ ನಿರ್ದೇಶನಾಲಯದ ಉಪನಿರ್ದೇಶಕ ಜಿ. ಜಯಣ್ಣ ಹಾಗೂ ಹಿರಿಯ ಭೂವಿಜ್ಞಾನಿ ಹೆಚ್.ಎಂ ನಾಗರಾಜ ನೇತೃತ್ವದ ತಂಡವನ್ನು ರಚಿಸಲಾಗಿದೆ.

ಇದನ್ನೂ ಓದಿ: ಬರಗಾಲ ನಿಭಾಯಿಸಲಾಗದ ಅಸಮರ್ಥ ಸರ್ಕಾರ: ಸಂಸದ ರಾಘವೇಂದ್ರ ವಾಗ್ದಾಳಿ

ಬಗರ್ ಹುಕುಂ ಸಮಿತಿ ರಚನೆ - ಸಚಿವ ಕೃಷ್ಣ ಬೈರೇಗೌಡ: ಮತ್ತೊಂದೆಡೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ - ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಮುಂದಿನ 15 ದಿನಗಳೊಳಗಾಗಿ 100 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ ಮಾಡಲಾಗುವುದು. ಅಧಿಕಾರಿಗಳು ಮುಂದಿನ 6 ತಿಂಗಳಲ್ಲಿ ಯಾವ ಅರ್ಜಿಯೂ ಬಾಕಿ ಉಳಿಸದಂತೆ ಸಂಪೂರ್ಣ ವಿಲೇವಾರಿ ಮಾಡಬೇಕು. ಅಲ್ಲದೇ, ಅರ್ಹ ಫಲಾನುಭವಿಗಳಿಗೆ ಶೀಘ್ರ ಸಾಗುವಳಿ ಚೀಟಿ ನೀಡಬೇಕು" ಎಂದು ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.