ETV Bharat / state

ಕಲ್ಯಾಣ ಕರ್ನಾಟಕ ಸೇರಿದಂತೆ ಬೆಂಗಳೂರಿನಲ್ಲಿ 'ಸೈನ್ಸ್‌ ಸಿಟಿ' ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ: ಸಚಿವ ಎನ್ ಎಸ್ ಬೋಸರಾಜು - ಈಟಿವಿ ಭಾರತ್​ ಕನ್ನಡ ನ್ಯೂಸ್

ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಪ್ರಯೋಜನದ ದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ವಿಜ್ಞಾನ ನಗರ ಸ್ಥಾಪಿಸಲು ಸಚಿವ ಎನ್.ಎಸ್ ಬೋಸರಾಜು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವಿಜ್ಞಾನ ನಗರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಸಚಿವ ಎನ್.ಎಸ್ ಬೋಸರಾಜು ಮನವಿ

author img

By

Published : Aug 3, 2023, 8:40 PM IST

ದೆಹಲಿ/ಬೆಂಗಳೂರು : ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಹೊರ ಹೊಮ್ಮಿರುವ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ವಿಜ್ಞಾನ ನಗರ [ಸೈನ್ಸ್‌ ಸಿಟಿ] ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಎನ್ ಎಸ್‌ ಬೋಸರಾಜು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಇಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ ಕಿಶನ್‌ ರೆಡ್ಡಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಬೆಂಗಳೂರು ಪ್ರಮುಖ ನಗರವಾಗಿದ್ದು, ಭಾರತೀಯ ವಿಜ್ಞಾನ ಮಂದಿರ, ಜೆಎನ್​ಸಿಎಎಸ್​ಆರ್‌, ರಾಮನ್‌ ಸಂಶೋಧನಾ ಸಂಸ್ಥೆ, 400 ಕ್ಕೂ ಅಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು, ಐಟಿ-ಬಿಟಿ ಪಾರ್ಕ್​ಗಳಿವೆ. ಇತ್ತೀಚೆಗೆ ವಿಜ್ಞಾನ ಗ್ಯಾಲರಿಯನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗಿದೆ ಎಂದು ಕೇಂದ್ರದ ಗಮನಕ್ಕೆ ತಂದಿದ್ದಾರೆ.

ಕರ್ನಾಟಕ ಜನ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಅದಕ್ಕೆ ಹೊಂದಿಕೊಂಡಿರುವ ರಾಮನಗರದಲ್ಲಿದ್ದು, ಈ ಪ್ರದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಪ್ರಯೋಜನದ ದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು, ತಂತ್ರಜ್ಞರು, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡುವಂತೆ ಸಚಿವರು ಕೋರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಟಗರಿ – 3 ವಿಜ್ಞಾನ ಕೇಂದ್ರ, 8 ಮೀಟರ್ ಅಗಲದ ಟೈಪ್ – ಬಿ ಡಿಜಿಟಲ್ ಡೋಮ್ ಪ್ಲಾನೇಟೋರಿಯಮ್. ರಾಯಚೂರು ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2, ಟೈಪ್ ಬಿ ವಿಜ್ಞಾನ ಕೇಂದ್ರ ಸ್ಥಾಪನೆ, ಯಾದಗಿರಿ ಜಿಲ್ಲೆಯಲ್ಲಿ ಟೈಪ್ ಬಿ ಕೆಟಗರಿ – 3 ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನು ಕೇಂದ್ರ ಸರಕಾರ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದು ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.

ಏಮ್ಸ್​ಗೆ ಒತ್ತಡ ಹೇರುವಂತೆ ಕೇಂದ್ರ ಸಚಿವರಿಗೆ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರ ಹಾಗೂ ಡಿಜಿಟಲ್ ಡೋಮ್ ಪ್ಲಾನೆಟೋರಿಯಮ್ ನಿರ್ಮಾಣಕ್ಕಾಗಿ 9.36 ಏಕರೆ ಜಾಗವನ್ನು ಈಗಾಗಲೇ ಸಬ್-ರೀಜನಲ್ ಸೈನ್ಸ್ ಸೆಂಟರ್ ಸೊಸೈಟಿ ಗೆ ಹಂಚಿಕೆ ಮಾಡಲಾಗಿದೆ. ಅಲ್ಲದೇ, ಕೇಂದ್ರ ಸರಕಾರಕ್ಕೆ ಡಿಪಿಆರ್​ನ್ನು ಸಲ್ಲಿಸಲಾಗಿದೆ. ಈ ಕೇಂದ್ರಗಳ ಸ್ಥಾಪನೆಯಿಂದ ನಗರದ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಆಸಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಬಗ್ಗೆ ಅಗತ್ಯ ಅನುದಾನವನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮತಿಯ ಅಗತ್ಯವಿದೆ. ಅನುಮತಿಯನ್ನು ಶೀಘ್ರದಲ್ಲಿ ನೀಡಬೇಕು ಎನ್ನುವ ಮನವಿಯನ್ನು ಸಹ ಕೇಂದ್ರ ಸಚಿವರಿಗೆ ಸಲ್ಲಿಸಲಾಗಿದೆ.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳ ಸ್ಥಾಪನೆ : ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರ ಒಪ್ಪಿಗೆ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆಟಗರಿ-3, ಟೈಪ್-ಬಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಅಗತ್ಯವಿರುವ ಶೇಕಡಾ 50 ರಷ್ಟು ಅನುದಾನ ರಾಜ್ಯ ಸರಕಾರ ಭರಿಸುವ ಒಪ್ಪಿಗೆಯನ್ನು ನೀಡಿದೆ.

ಕೇಂದ್ರ ಸ್ಥಾಪನೆಗೆ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ ಎತ್ತಿದ್ದಂತಹ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ರಾಜ್ಯ ಸರ್ಕಾರ ನೀಡಲು ಸಿದ್ಧವಿದೆ. ಹಿಂದುಳಿದ ಜಿಲ್ಲೆಯಾಗಳಾಗಿರುವ ಯಾದಗಿರಿ ಮತ್ತು ರಾಯಚೂರಿನ ವಿದ್ಯಾರ್ಥಿಗಳು ಮತ್ತು ವಿಜ್ಞಾನ ಆಸಕ್ತರ ಅನುಕೂಲಕ್ಕಾಗಿ ಇದು ಬಹಳ ಅಗತ್ಯವಾಗಿದೆ. ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸುವ ಹಾಗೂ ಅಗತ್ಯ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಎನ್.ಎಸ್ ಬೋಸರಾಜು ಹೇಳಿದ್ದಾರೆ.

ಏಮ್ಸ್​ಗೆ ಒತ್ತಡ ಹೇರುವಂತೆ ಕೇಂದ್ರ ಸಚಿವರಿಗೆ ಮನವಿ : ರಾಯಚೂರಿಗೆ ಬಹು ಅವಶ್ಯವಿರುವ ಏಮ್ಸ್ ಮಂಜೂರಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಭಗವಂತ ಖೂಬಾಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನ್ಸೂಖ್ ಮಂಡವಿಯಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಭಾಗದ ಜನರ ಚಿಕಿತ್ಸೆಗಾಗಿ ಏಮ್ಸ್ ಅವಶ್ಯಕತೆ ಹೆಚ್ಚಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಮನವೊಲಿಸಬೇಕು ಎಂದು ಸಚಿವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಭೇಟಿ.. ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಪದೋಷ ಚರ್ಚೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.