ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಗಳು ಎಲ್ಲಾ ನಿಲ್ದಾಣಗಳಲ್ಲೂ ಬಸ್ ನಿಲ್ಲಿಸದೆ ಚಲಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಕೆಎಸ್ಆರ್ಟಿಸಿಯ ಕೆಲವು ಚಾಲಕರು/ನಿರ್ವಾಹಕರು ವಿದ್ಯಾರ್ಥಿಗಳ ಹತ್ತಿಸಿಕೊಳ್ಳದೆ ತೆರಳುತ್ತಿರುವುದು ಕಂಡುಬರುತ್ತಿದೆ. ನಾನು ಕಳೆದ ಶನಿವಾರ ತುಮಕೂರು ಜಿಲ್ಲೆಯ ಪ್ರವಾಸದಲ್ಲಿರುವಾಗ ಪಿನಗಾನಹಳ್ಳಿ ಮಾರ್ಗದ ಬಸ್ ವೊಂದು ನಿಲುಗಡೆ ಕಡ್ಡಾಯವಾಗಿದ್ದರೂ ಸಹ ಬಸ್ ನಿಲ್ಲದಿದ್ದಾಗ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದು ನನ್ನ ಗಮನಕ್ಕೆ ಬಂತು.
ಆ ಬಸ್ ಚಾಲಕ/ನಿರ್ವಾಹಕರಿಗೆ ಬಸ್ ನಿಲ್ಲಿಸದಿದ್ದರೆ ಮಕ್ಕಳಿಗೆ ಆಗುವ ತೊಂದರೆ ಕುರಿತು ಮನದಟ್ಟು ಮಾಡಿದ್ದೇನೆ. ವಿದ್ಯಾರ್ಥಿಗಳನ್ನು ಬಸ್ ಚಾಲಕ/ನಿರ್ವಾಹಕರು ಅವಜ್ಞೆ ಮಾಡದೇ ಮತ್ತು ಮಕ್ಕಳು ಶಾಲಾ-ಕಾಲೇಜಿಗೆ ಹೋಗಿ ಬರಲು ತೊಂದರೆ ಯಾಗದಂತೆ ಸಹಾನುಭೂತಿಯಿಂದ ವರ್ತಿಸುವಂತೆ ಚಾಲಕ/ನಿರ್ವಾಹಕರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸೆಲ್ಫಿ ಕ್ರೇಜ್‌ಗೆ ಯುವತಿ ಬಲಿ.. ಹರಿಯುವ ನೀರಿನೊಳಗೆ ಜಾರಿ ಬಿದ್ದು ದುರ್ಮರಣ.. ವಿಡಿಯೋ ವೈರಲ್