ETV Bharat / state

ಬಿಎಸ್​ವೈ ಸಂಪುಟವನ್ನು ಕಾಡುತ್ತಿರುವ ಕೋವಿಡ್​​​: ಸಚಿವ ಪ್ರಭು ಚೌವ್ಹಾಣ್​ಗೂ ಕೊರೊನಾ

ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​​​​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Minister Prabhu Chauhan
ಸಚಿವ ಪ್ರಭು ಚವ್ಹಾಣ್
author img

By

Published : Sep 10, 2020, 9:05 AM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟವನ್ನು ಕೊರೊನಾ ಸೋಂಕು ಬೆಂಬಿಡದೆ ಕಾಡುತ್ತಿದೆ. ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಕೊರೊನಾದಿಂದ ಗುಣಮುಖರಾದ ಬೆನ್ನೆಲ್ಲೇ ಮತ್ತೋರ್ವ ಸಚಿವ ಪ್ರಭು ಚೌವ್ಹಾಣ್​​​​ಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಬಂದಿಲ್ಲ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದಷ್ಟೇ ಸಚಿವರ ವಾಹನ ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವ ಪ್ರಭು ಚೌವ್ಹಾಣ್ ನಿನ್ನೆ ಕೊರೊನಾ ತಪಾಸಣೆ ಮಾಡಿಸಿಕೊಂಡಿದ್ದರು. ವರದಿ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಸಚಿವರ ಆಪ್ತ ಸಹಾಯಕ ಹಾಗೂ ಬೀದರ್​ನಲ್ಲಿ ಸಚಿವರ ಗನ್ ಮ್ಯಾನ್​​ಗೂ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಕೊರೊನಾ ಪಾಸಿಟಿವ್ ಬಂದಿರುವುದನ್ನು ಸ್ವತಃ ಖಚಿತಪಡಿಸಿರುವ ಸಚಿವ ಪ್ರಭು ಚೌವ್ಹಾಣ್ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದ್ದಾರೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದು, ಆದಷ್ಟು ಬೇಗ ಗುಣಮುಖನಾಗಿ ಮತ್ತೆ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.