ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದೇ ಉಳಿದ ಗೋ ಹತ್ಯೆ ನಿಷೇಧ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಜಾನುವಾರು ಸಂರಕ್ಷಣೆ ಮತ್ತು ಪ್ರತಿಬಂಧಕ ನಿಯಮದ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ನೀಡಲಾಗಿದೆ ಎಂದರು. ಇಂದು ನಡೆದ ಸಚಿವ ಸಂಪುಟದಲ್ಲಿ ಗೋಹತ್ಯೆ ಮಸೂದೆಗೆ ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ಕರ್ನಾಟಕದಲ್ಲೂ ಯಶಸ್ವಿ ಆಗಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದರು.
ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದ ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ಓದಿ : ಸಚಿವ ಸಂಪುಟ ಸಭೆ.. ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ನಿಯಮ ಸುಗ್ರೀವಾಜ್ಞೆಗೆ ಅನುಮೋದನೆ ಸಾಧ್ಯತೆ