ETV Bharat / state

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ: ಸಚಿವ ಚೌಹಾಣ್ - ಪ್ರಭು ಚೌಹಾಣ್

ಬೆಂಗಳೂರಿನಲ್ಲಿ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ಗುರುವಾರ ಇಲಾಖೆ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.

ಪ್ರಭು ಚೌಹಾಣ್
author img

By

Published : Sep 6, 2019, 1:22 AM IST

ಬೆಂಗಳೂರು: ಪಶುಸಂಗೋಪನೆ ಸಚಿವರಾದ ಪ್ರಭು ಚೌಹಾಣ್​ ಗುರುವಾರ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಇದರ ಬಗ್ಗೆ ಸಿಎಂ ಗಮನಕ್ಕೆ ತಂದು ಬೇಗ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇಲಾಖೆಯ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಸಂವರ್ಧನೆ ಕಾರ್ಯ ನಡೆಯುತ್ತಿದ್ದು, ಅದನ್ನು ಸೂಕ್ತ ರೀತಿಯಲ್ಲಿ ರೈತರಿಗೆ ತಲುಪಿಸಲು ಅತ್ಯುನ್ನತವಾದ ತರಬೇತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಹೈನುಗಾರಿಕೆ ಅಭಿವೃದ್ಧಿಯೊಂದಿಗೆ ಸಮಗ್ರ ಪಶುಪಾಲನೆಗೆ ಹೆಚ್ಚಿನ ಒತ್ತು ಕೊಟ್ಟು ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ಪಶುಸಂಗೋಪನಾ ಇಲಾಖೆಯ ಹೆಸರಘಟ್ಟದ ಜಾನುವಾರು ಕ್ಷೇತ್ರಗಳಾದ ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಜಾನುವಾರು ಸಂವರ್ಧನಾ ಕ್ಷೇತ, ರಾಜ್ಯ ಕುಕ್ಕುಟ ಕ್ಷೇತ್ರ, ಹಂದಿ ತಳಿ ಸಂವರ್ಧನಾ ಕೇಂದ್ರ, ರಾಜ್ಯ ವೀರ್ಯ ಶೇಖರಣಾ ಕೇಂದ್ರ, ಮೊಲ ಸಾಕಾಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ವೇಳೆ ಕ್ಷೇತ್ರ ಜಂಟಿ ನಿರ್ದೇಶಕರಾದ ಡಾ.ಎಚ್.ಎಸ್ ಜಯಣ್ಣ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.

Intro:Body:KN_BNG_07_PRABUCHAUHAN_VISIT_SCRIPT_7201951

ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ಭರ್ತಿ ಮಾಡಲು ಕ್ರಮ: ಸಚಿವ ಪ್ರಭು ಚೌಹಾಣ್

ಬೆಂಗಳೂರು: ಪಶುಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ಅವರು ಗುರುವಾರ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಸಿಎಂ ಗಮನಕ್ಕೆ ತಂದು ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇಲಾಖೆಯ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಸಂವರ್ಧನೆ ಕಾರ್ಯ ನಡೆಯುತ್ತಿದ್ದು, ಅದನ್ನು ಸೂಕ್ತ ರೀತಿಯಲ್ಲಿ ರೈತರಿಗೆ ತಲುಪಿಸಲು ಅತ್ಯುನ್ನತವಾದ ತರಬೇತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕೆಲಸದಲ್ಲಿ ಯಾವುದೇ ರೀತಿಯ ಕರ್ತವ್ಯ ಲೋಪ ಮತ್ತು ಗೈರು ಹಾಜರಿಯನ್ನು ಸಹಿಸುವುದಿಲ್ಲ. ನಮ್ಮ ಇಲಾಖೆ ರೈತಾಪಿ ವರ್ಗದವರಿಗೆ ಹತ್ತಿರವಿರುವುದರಿಂದ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ತರಹದ ಸಹಾಯವನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೈನುಗಾರಿಕೆ ಅಭಿವೃದ್ಧಿಯೊಂದಿಗೆ ಸಮಗ್ರ ಪಶುಪಾಲನೆಗೆ ಹೆಚ್ಚಿನ ಒತ್ತು ಕೊಟ್ಟು ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಇವುಗಳಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ಪಶುಸಂಗೋಪನಾ ಇಲಾಖೆಯ ಹೆಸರಘಟ್ಟದ ಜಾನುವಾರು ಕ್ಷೇತ್ರಗಳಾದ ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಜಾನುವಾರು ಸಂವರ್ಧನಾ ಕ್ಷೇತ, ರಾಜ್ಯ ಕುಕ್ಕುಟ ಕ್ಷೇತ, ಹಂದಿ ತಳಿ ಸಂವರ್ಧನಾ ಕೇಂದ್ರ, ರಾಜ್ಯ ವೀರ್ಯ ಶೇಖರಣಾ ಕೇಂದ್ರ, ಮೊಲ ಸಾಕಾಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಭೇಟಿಯ ವೇಳೆ ಕ್ಷೇತ್ರ ಜಂಟಿ ನಿರ್ದೇಶಕರಾದ ಡಾ.ಎಚ್.ಎಸ್ ಜಯಣ್ಣ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.