ETV Bharat / state

ಪಿಡಿಒ ಅಧಿಕಾರಿಗಳ ಜೇಷ್ಠತಾ ಪಟ್ಟಿ ಪರಿಶೀಲಿಸಿ ಅಂತಿಮ‌ಪಟ್ಟಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ - Minister Priyank Kharge

ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ಅಧಿಕಾರಿಗಳ ಜೇಷ್ಠತಾ ಪಟ್ಟಿ ಪರಿಶೀಲಿಸಿ ಅಂತಿಮ‌ಪಟ್ಟಿ ಪ್ರಕಟಿಸುವಂತೆ ಸೂಚನೆ ನೀಡಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಪ್ರಿಯಾಂಕ್‌ ಖರ್ಗೆ

author img

By ETV Bharat Karnataka Team

Published : Sep 5, 2023, 7:33 PM IST

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ತಿಂಗಳ 14ರಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಸಚಿವರು ಮಂಗಳವಾರ ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.

ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಗೋಜಲಾಗಿದ್ದು, ಹಲವಾರು ಜಿಲ್ಲೆಗಳ ಅಧಿಕಾರಿಗಳು ನ್ಯಾಯಾಲಯಗಳ ಮೊರೆ ಹೋಗಿರುವುದರಿಂದ ಕಗ್ಗಂಟಾಗಿರುವ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮುಂದಿನ ಸಾಮಾನ್ಯ ವರ್ಗಾವಣೆ ಸಮಯಕ್ಕೆ ಕೌನ್ಸೆಲಿಂಗ್​​ ನೀತಿಯನ್ನು ಜಾರಿಗೆ ತಂದು ವರ್ಗಾವಣೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದರು. ಅಲ್ಲದೇ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪರಿಶೀಲನೆ ನಡೆಸಿ ಎಲ್ಲ ಅಧಿಕಾರಿಗಳಿಗೂ ಈ ಸೌಲಭ್ಯ ವಿಸ್ತರಿಸುವುದಾಗಿ ಸಚಿವರು ಇದೇ ವೇಳೆ ತಿಳಿಸಿದರು.

ಪಂಚಾಯಿತಿ ಅಧಿಕಾರಿಗಳ ಸೇವಾ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡಲು ನಿಗದಿತವಾಗಿ ಸಭೆಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡುವುದಾಗಿಯೂ ಸಚಿವರು ಸಂಘದ ಪದಾಧಿಕಾರಿಗಳಿಗೆ ತಿಳಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಿದಲ್ಲಿ, ಸರ್ಕಾರ ಅಧಿಕಾರಿಗಳ ಕಲ್ಯಾಣಕ್ಕಾಗಿ ಹೆಚ್ಚು ಆಸಕ್ತಿ ತೋರುವುದೆಂದು ಕಿವಿಮಾತು ಹೇಳಿದರು.

ಪ್ರತಿಭಟನೆ ಕೈಬಿಟ್ಟ ಪಿಡಿಒ: ಬಡ್ತಿ ನೀಡಿಕೆಯಲ್ಲಿ ವಿಳಂಬ ಸೇರಿದಂತೆ ಸಂಘದ ಬೇಡಿಕೆಗಳ ವಿಷಯದಲ್ಲಿ ಸಚಿವರು ದೃಢ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು ಈ ತಿಂಗಳ 14ರಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ತಮ್ಮ ಶಾಂತಿಯುತ ಪ್ರತಿಭಟನೆಯನ್ನು ಕೈ ಬಿಟ್ಟಿರುವುದಾಗಿ ತಿಳಿಸಿದರು.

ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹದೇವನ್‌ ಹಾಗೂ ಆಯುಕ್ತೆ ಪ್ರಿಯಾಂಕಾ ಫ್ರಾನ್ಸಿಸ್‌ ಸಭೆಯಲ್ಲಿ ಹಾಜರಿದ್ದರು. ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಹಾಗೂ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಬಗ್ಗೆ ಸಚಿವರಿಗೆ ಮನದಟ್ಟು ಮಾಡಿಕೊಟ್ಟರು.

ಇದನ್ನೂ ಓದಿ: ಪಿಡಿಒ ವರ್ಗಾವಣೆ ಸಂಬಂಧ ರೇವಣ್ಣ ಬಳಿ ಯಾವ ಪೆನ್ ಡ್ರೈವ್ ಇದೆ ಕೊಡಲಿ: ಸಚಿವ ಪ್ರಿಯಾಂಕ್ ಖರ್ಗೆ ಸವಾಲು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.