ETV Bharat / state

ಬರ ಪರಿಸ್ಥಿತಿ: ನರೇಗಾ ಮಾನವ ದಿನಗಳು 150ಕ್ಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ - 1234 ಲಕ್ಷ ಮಾನವ ದಿನಗಳ ಗುರಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಹೆಚ್ಚಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿ​ಗೆ ಪತ್ರ ಬರೆದಿದ್ದಾರೆ.

Minister Priyank Kharge
ಸಚಿವ ಪ್ರಿಯಾಂಕ್‌ ಖರ್ಗೆ
author img

By ETV Bharat Karnataka Team

Published : Sep 22, 2023, 5:49 PM IST

ಬೆಂಗಳೂರು: ತೀವ್ರ ಬರಗಾಲ ಪರಿಸ್ಥಿತಿ ಹಿನ್ನೆಲೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು. 1,300 ಲಕ್ಷ ಮಾನವ ದಿನಗಳನ್ನು 1,800 ಲಕ್ಷ ಮಾನವ ದಿನಗಳಿಗೆ ಏರಿಕೆ ಮಾಡಬೇಕೆಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್​ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ಈಗಾಗಲೇ 31 ಜಿಲ್ಲೆಗಳಲ್ಲಿನ 195 ತಾಲೂಕು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆ ಕರ್ನಾಟಕ ರಾಜ್ಯವು ನರೇಗಾ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಇದುವರೆಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬರಗಾಲದ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಬೇಕು. ಬರ ಪೀಡಿತ ತಾಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದೆ. ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂಓದಿ:ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ: ಸಚಿವ ಪ್ರಿಯಾಂಕ್ ಖರ್ಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.