ETV Bharat / state

ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡ ರೈತರಿಗೆ ಒಂದೇ ತಿಂಗಳಲ್ಲಿ ಪರಿಹಾರ : ಸಚಿವ ಅಶೋಕ್ - ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ

ಕಳೆದ ಎರಡು ಮೂರು ದಶಕಗಳ ನಂತರ ರಾಜ್ಯದಲ್ಲಿ ಭಾರಿ ಮಳೆ ಬಿದ್ದು 9 ಲಕ್ಷ ಹೆಕ್ಟೇರ್​ಗೂ ಅಧಿಕ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಹೇಳಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್
ಕಂದಾಯ ಸಚಿವ ಆರ್ ಅಶೋಕ್
author img

By

Published : Sep 19, 2022, 6:07 PM IST

Updated : Sep 19, 2022, 6:40 PM IST

ಬೆಂಗಳೂರು: ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡ ರೈತರಿಗೆ ಒಂದೇ ತಿಂಗಳಲ್ಲಿ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಅತಿವೃಷ್ಟಿಯ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಈ ಹಿಂದೆ ಪ್ರಕೃತಿ ವಿಕೋಪದಿಂದ ಬೆಳೆ ಹಾನಿಯಾದಾಗ ರೈತರಿಗೆ ಹತ್ತು ಹನ್ನೊಂದು ತಿಂಗಳ ನಂತರ ಪರಿಹಾರ ಸಿಗುತ್ತಿತ್ತು. ಆದರೆ, ಅದು ಇನ್ನು ಮುಂದೆ ಒಂದೇ ತಿಂಗಳಲ್ಲಿ ಲಭ್ಯವಾಗಲಿದೆ. ಪರಿಹಾರಕ್ಕಾಗಿ ರೈತರು ಅಲೆದಾಡಬೇಕಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡುತ್ತಿದ್ದಂತೆಯೇ ರೈತರ ಖಾತೆಗಳಿಗೆ ನೇರವಾಗಿ ಪರಿಹಾರ ಜಮಾ ಮಾಡಲಾಗುವುದು ಎಂದು ಸಚಿವರು ವಿವರ ನೀಡಿದರು.

ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಪರಿಹಾರ ಸಿಗುತ್ತದೆ. ಮತ್ತು ಪರಿಹಾರದ ಮೊತ್ತವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ.‌ ಕೇಂದ್ರ ಸರ್ಕಾರದ ಅನುದಾನಕ್ಕೂ ಕಾಯದೆ ನಮ್ಮ ಬೊಕ್ಕಸದಿಂದಲೇ ಪರಿಹಾರ ನೀಡಿ, ಆನಂತರ ಈ ಮೊತ್ತವನ್ನು ನಾವು ಕೇಂದ್ರ ಸರ್ಕಾರದಿಂದ ಪಡೆಯುತ್ತೇವೆ ಎಂದರು.

ಪ್ರಕೃತಿ ವಿಕೋಪದ ಪರಿಹಾರದ ಬಗ್ಗೆ ಕಂದಾಯ ಸಚಿವ ಆರ್​ ಅಶೋಕ್ ಅವರು ಮಾತನಾಡಿದರು

ಕಳೆದ ಎರಡು ಮೂರು ದಶಕಗಳ ನಂತರ ರಾಜ್ಯದಲ್ಲಿ ಭಾರಿ ಮಳೆ ಬಿದ್ದು 9 ಲಕ್ಷ ಹೆಕ್ಟೇರ್ ಗೂ ಅಧಿಕ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ಇದರ ಪ್ರಮಾಣ ಮತ್ತಷ್ಟು ಹೆಚ್ಚಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಮಳೆ ಮತ್ತು ಪ್ರವಾಹವಲ್ಲದೆ ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಪಾತ್ರದಲ್ಲಿ ತೇವಾಂಶ ಹೆಚ್ಚಾಗಿ ಈ ಪ್ರಮಾಣದ ಬೆಳೆ ನಷ್ಟವಾಗಿದೆ ಎಂದು ಅಂಕಿ ಅಂಶ ಒದಗಿಸಿದರು.

ಮಳೆಯಿಂದಾಗಿ ಅಪಾರ ಹಾನಿಯಾಗಿದ್ದರೂ ರಾಜ್ಯದ ಜಲಾಶಯಗಳಲ್ಲಿ 865 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ ಎಂದ ಅವರು, ಇದೇ ರೀತಿ ಮಳೆಯಿಂದಾಗಿ ರಾಜ್ಯದಲ್ಲಿ ಅಂತರ್ಜಲದ ಪ್ರಮಾಣ ಶೇ. 84 ರಷ್ಟು ಹೆಚ್ಚಿದೆ. ಇವತ್ತು ರಾಜ್ಯದ 190 ತಾಲ್ಲೂಕುಗಳಲ್ಲಿ ಅಂತರ್ಜಲದ ಪ್ರಮಾಣ ಗಣನೀಯ ಮಟ್ಟದಲ್ಲಿ ಏರಿಕೆಯಾಗಿದ್ದು, ಇದು ಕೂಡಾ ಒಂದು ದಾಖಲೆ ಎಂದು ತಿಳಿಸಿದರು.

ಪ್ರಕೃತಿ ವಿಕೋಪ ಪರಿಹಾರ: ಪ್ರಧಾನಿ ನರೇಂದ್ರಮೋದಿ ಅವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಹನ್ನೊಂದು ಸಾವಿರ ಕೋಟಿ ರೂಪಾಯಿಗಳಿಗಿಂತ ಅದಿಕ ಹಣ ಬಂದಿದ್ದು, ಅವರ ಹಿಂದಿದ್ದ ಮನಮೋಹನಸಿಂಗ್ ಅವರ ಅಧಿಕಾರಾವಧಿಯಲ್ಲಿ ಕೇವಲ 3 ಸಾವಿರ ಕೋಟಿ ರೂ.ಗಳಷ್ಟು ಪರಿಹಾರ ಲಭ್ಯವಾಗಿತ್ತು. ಈ ಹಂತದಲ್ಲಿ ಕಂದಾಯ ಸಚಿವರ ಮಾತನ್ನು ವಿರೋಧಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಆಯಾ ಪ್ರಧಾನ ಮಂತ್ರಿಗಳು ಅವರ ಬಜೆಟ್ ಗೆ ಅನುಗುಣವಾಗಿ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯನ್ನು ಬಿಡುಗಡೆ ಮಾಡುತ್ತಾರೆ ಎಂದು ಹೇಳಿದರು.

ನೀವು ಹಲವು ವರ್ಷಗಳ ದಾಖಲೆ ಕೊಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದೀರಿ. ನಾವು ನಿಮಗೆ ಕೇಳುತ್ತಿರುವುದು 2022-23 ನೇ ಸಾಲಿನಲ್ಲಿ ಮಳೆಯಿಂದಾದ ಹಾನಿ ಮತ್ತು ಅದಕ್ಕೆ ಸಂಬಂಧಿಸಿದಂತೆ ಎಷ್ಟು ಪರಿಹಾರ ಬಂದಿದೆ ಎಂದಷ್ಟೇ ಎಂದು ಹೇಳಿದರು.

ಈ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರು ಅವಧಿಯಲ್ಲಿ ಮಳೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ 1012 ಕೋಟಿ ರೂ. ಕೇಳಿದ್ದೀರಿ. ಆದರೆ ಅದರಲ್ಲಿ ಬಂದಿರುವ ಹಣವೆಷ್ಟು? ಎಂದು ಪ್ರಶ್ನಿಸಿದರು. ಈ ಬಾರಿಯ ಮಳೆಯಿಂದ ನಮಗೆ 7 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಯನ್ವಯವೂ ಪರಿಹಾರ ಬಂದಿಲ್ಲ ಎಂದು ವಿವರಿಸಿದರು.

ತಕ್ಷಣ ಪರಿಹಾರದ ಕ್ರಮ: ಪುನ: ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಮಳೆಯಿಂದಾದ ಹಾನಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ತಾವು ರಾಜ್ಯದ ಬಹುತೇಕ ಭಾಗಗಳಿಗೆ ಹೋಗಿ ಪರಿಶೀಲನೆ ಮಾಡಿದ್ದಲ್ಲದೆ, ತಕ್ಷಣ ಪರಿಹಾರದ ಕ್ರಮಗಳನ್ನು ಕೈಗೊಂಡಿರುವುದಾಗಿ ಸಮರ್ಥಿಸಿಕೊಂಡರು.

ಓದಿ: ಪುನಃ ಗರ್ಜಿಸಿದ ಜೆಸಿಬಿಗಳು: 5 ಕಡೆ ಯಶಸ್ವಿ ತೆರವು ಕಾರ್ಯಾಚರಣೆ ನಡೆಸಿದ ಪಾಲಿಕೆ

Last Updated : Sep 19, 2022, 6:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.