ETV Bharat / state

ಮಹದಾಯಿ ವಿಚಾರ... ನೀರು ಭಾವನಾತ್ಮಕ ವಿಷಯ, ಸಂಭ್ರಮಾಚರಣೆ ಬೇಡ: ಸಚಿವ ರಮೇಶ್ ಜಾರಕಿಹೊಳಿ - ಬೆಂಗಳೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

ಆದಷ್ಟು ಬೇಗ ಕಳಸಾ ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಲಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

Minister Ramesh Jarakiholi press meet, ಕರ್ನಾಟಕ ನೀರಾವರಿ ನಿಗಮ ಕಚೇರಿಯಲ್ಲಿ ಸುದ್ದಿಗೋಷ್ಠಿ
ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ
author img

By

Published : Feb 28, 2020, 12:30 PM IST

ಬೆಂಗಳೂರು: ಆದಷ್ಟು ಬೇಗ ಕಳಸಾ ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಲಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

ಕರ್ನಾಟಕ ನೀರಾವರಿ ನಿಗಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಮಗಾರಿ ಆರಂಭಿಸಲು ನ್ಯಾಯಾಲಯ, ಪರಿಸರ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿದೆ. ಆದರೆ ನೀರು ಭಾವನಾತ್ಮಕ ವಿಷಯ. ಹಾಗಾಗಿ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ. ಅತೀ ಶೀಘ್ರದಲ್ಲೇ ನಮ್ಮ ಪಾಲಿನ ನೀರಿನ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಮಹದಾಯಿ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸುತ್ತೇವೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಸಿದ್ಧವಿದೆ. ಅದನ್ನು ನ್ಯಾಯಾಧಿಕರಣಕ್ಕೆ ತೋರಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮಹದಾಯಿ ಸೇರಿದಂತೆ ವಿವಿಧ ನೀರಾವರಿ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಇಚ್ಛೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತದೆ. ಜುಲೈನಲ್ಲಿ ಮಹದಾಯಿ ವಿವಾದದ ಬಗ್ಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಆಗ ರಾಜ್ಯಕ್ಕೆ ಹೆಚ್ಚಿನ ಪಾಲು ಸಿಗುವ ನಿರೀಕ್ಷೆ ಇದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.