ETV Bharat / state

ಬಿಯು ಸಂಖ್ಯೆ ಇಲ್ಲವೆಂದು ಚಿಕಿತ್ಸೆ ನೀಡದಿದ್ದರೆ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಬಂದ್ : ಆರ್. ಅಶೋಕ್

ಯಾವ ಖಾಸಗಿ ಆಸ್ಪತ್ರೆಗ ಬಿಯು ನಂಬರ್ ಇಲ್ಲವೆಂಬ ಕಾರಣಕ್ಕೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತವೋ, ಅಂಥಹ ಆಸ್ಪತ್ರೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳಲು ಬಿಯು ನಂಬರ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ
ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ
author img

By

Published : May 10, 2021, 12:59 PM IST

Updated : May 10, 2021, 3:00 PM IST

ಬೆಂಗಳೂರು : ಬಿಯು ಸಂಖ್ಯೆ ಇಲ್ಲವೆಂದು ನೆಪವೊಡ್ಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂಥಹ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನ ಮುಚ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ರಾಜರಾಜೇಶ್ವರಿ ನಗರದ ವಾರ್ ರೂಮ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಯಾವ ಖಾಸಗಿ ಆಸ್ಪತ್ರೆಗಳು ಬಿಯು ನಂಬರ್ ಇಲ್ಲವೆಂಬ ಕಾರಣಕ್ಕೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತವೋ, ಅಂಥಹ ಆಸ್ಪತ್ರೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳಲು ಬಿಯು ನಂಬರ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ. ರಾಜ್ಯಕ್ಕೆ 2,000 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ತರಿಸಿಕೊಳ್ಳಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ 100 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರವನ್ನ ಸ್ಥಾಪಿಸಲಾಗುವುದು. ಬೆಡ್ ಹಂಚಿಕೆಯ ಹೊಣೆಯನ್ನ ವೈದ್ಯರಿಗೆ ನೀಡಬೇಕು. ಇದರಿಂದ ಅಗತ್ಯವಿರುವವರಿಗೆ ಬೆಡ್ ದೊರೆಯುತ್ತದೆ ಎಂದು ಹೇಳಿದರು.

ಲಾಕ್ ಡೌನ್ ಕುರಿತಂತೆ ಮಾತನಾಡಿದ ಅವರು, ಇಂದಿನಿಂದ ಕಠಿಣ ಲಾಕ್ ಡೌನ್ ನಿಯಮಗಳು ಜಾರಿಯಾಗಿವೆ. ಕೋವಿಡ್ ನಿಯಂತ್ರಿಸುವುದಕ್ಕೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ. ಸಾರ್ವಜನಿಕರು ಅನಗತ್ಯವಾಗಿ ರಸ್ತೆಗೆ ಇಳಿಯುವಂತಿಲ್ಲ. ಹಾಗೇ ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಹಾಗೆಯೇ ನಿಯಮಗಳನ್ನ ಉಲ್ಲಂಘಿಸುವ ಸಂಸ್ಥೆಗಳ ಮೇಲೆಯೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಓದಿ : ಶಾಕಿಂಗ್​ ಸುದ್ದಿ.. ಇತರೆ ಕಾಯಿಲೆಗಳಿಲ್ಲದಿದ್ದರೂ ಸಹ ಕೊರೊನಾ‌ ಸೋಂಕಿಗೆ ಬಲಿಯಾದವರೇ ಹೆಚ್ಚು!

Last Updated : May 10, 2021, 3:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.