ETV Bharat / state

ಯಶಸ್ವಿ ಯೋಜನೆಯಡಿ 33 ಲಕ್ಷ ಸದಸ್ಯರ ನೋಂದಣಿ: ಎಸ್​.ಟಿ.ಸೋಮಶೇಖರ್​

ಯಶಸ್ವಿ ಯೋಜನೆಯಡಿ ಜನವರಿ ಅಂತ್ಯದ ವೇಳೆಗೆ ಸುಮಾರು 33.10 ಲಕ್ಷ ಸದಸ್ಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಹಕಾರ ಸಚಿವರು ಮಾಹಿತಿ ನೀಡಿದ್ದಾರೆ.

st somashekhar
ಎಸ್​.ಟಿ ಸೋಮಶೇಖರ್​
author img

By

Published : Feb 2, 2023, 10:49 PM IST

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರು ಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು, ಈ ಯೋಜನೆಯಡಿ 33.10 ಲಕ್ಷ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಯಶಸ್ವಿನಿ ಯೋಜನೆ ಕುರಿತು ಇಂದು ನಗರದಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಸಚಿವರು, ಜನವರಿ ಅಂತ್ಯದವರೆಗೆ ಈ ಯೋಜನೆಯಡಿ 30 ಲಕ್ಷ ಸದಸ್ಯರ ಗುರಿಗೆ ಬದಲಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ. ಸದಸ್ಯರ ನೋಂದಣಿ ಕಾರ್ಯ ಮುಂದುವರೆಯುವ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1000 ಕ್ಕೂ ಹೆಚ್ಚು ಫಲಾನುಭವಿಗಳು ಯೊಜನೆಯಡಿ ಚಿಕಿತ್ಸೆ ಪಡೆದಿದ್ದಾರೆ ಎಂದರು.

ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್ ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ‌.

ಚಿಕಿತ್ಸೆ ದರ ಪರಿಷ್ಕರಿಸಿ ಆದೇಶ: ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1650 ಚಿಕಿತ್ಸೆಗಳನ್ನು ನಗದು ರಹಿತವಾಗಿ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿದೆ. ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್ ಗಳನ್ನು ಪಾವತಿಸಲಾಗುತ್ತದೆ.

ನೆಟ್​ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ ಒಂದು ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್‌ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಕೇಂದ್ರಕ್ಕೆ ಇಂದೇ ಪ್ತಸ್ತಾವನೆ: ಬಿಎಸ್‌ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.