ETV Bharat / state

60 ವರ್ಷ ಮೇಲ್ಪಟ್ಟವರು ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಸಲಹೆ - ಕೋವಿಡ್ ಮುಂಜಾಗ್ರತಾ ಸಭೆ

60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಕೋವಿಡ್ ಮುಂಜಾಗ್ರತಾ ಕ್ರಮದ ಕುರಿತ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಜನರಿಗೆ ಸಲಹೆ ನೀಡಿದರು.

Minister Sharan Prakash Patil
60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಸಲಹೆ
author img

By ETV Bharat Karnataka Team

Published : Jan 2, 2024, 6:03 PM IST

ಸಚಿವ ಶರಣ ಪ್ರಕಾಶ್ ಪಾಟೀಲ್ ಮಾಧ್ಯಮಗೋಷ್ಟಿ

ಬೆಂಗಳೂರು: ''60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘಾವಧಿ ಕಾಯಿಲೆಗಳಿಂದ ಬಳಲುತ್ತಿರುವವರು ಮಾತ್ರ ಕೋವಿಡ್ ಲಸಿಕೆ ತೆಗೆದುಕೊಳ್ಳಬಹುದು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ವಿಕಾಸೌಧದಲ್ಲಿ ಇಂದು ಮಾತನಾಡಿದ ಅವರು, ''ದಿನದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳು ಜಾಸ್ತಿಯಾಗ್ತಿವೆ. ಅದಕ್ಕಾಗಿ ಸಿದ್ಧತಾ ಸಭೆಯನ್ನು ಇವತ್ತು ಮಾಡಿದ್ದೇವೆ. ಆಕ್ಸಿಜನ್ ಬೆಡ್, ಐಸಿಯು, ಜಿಲ್ಲೆಗಳಲ್ಲಿ ಟೆಸ್ಟಿಂಗ್ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ಬಾರಿ ಆಕ್ಸಿಜನ್ ಕೊರತೆಯಿಂದ ಅವಘಡಗಳು ಆಗಿದ್ದವು. ಅದಕ್ಕಾಗಿ ಈ ಬಾರಿ ಆಗಬಾರದು ಎಂದು ಸೂಚನೆ ಕೊಡಲಾಗಿದೆ'' ಎಂದು ತಿಳಿಸಿದರು.

''60 ವರ್ಷ ಹಾಗೂ ವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ. ರಾಜ್ಯದಲ್ಲಿ ಕೋವಿಡ್ ಕೇಸ್ ಜಾಸ್ತಿಯಾಗ್ತಿವೆ. ಆದರೂ ಜನರು ಆತಂಕ ಪಡುವ ಅಗತ್ಯತೆ ಇಲ್ಲ. 60 ವರ್ಷದ ಮೇಲ್ಮಟ್ಟವರು ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಬಹು ಕಾಯಿಲೆ ಹೊಂದಿದವರಿಗೆ ಲಸಿಕೆ ಹಾಕಲು ಸೂಚಿಸಲಾಗಿದೆ. 30 ಸಾವಿರ ಲಸಿಕೆ ಈಗಾಗಲೇ ಸರಬರಾಜು ಆಗಿದೆ'' ಎಂದು ತಿಳಿಸಿದರು.

''ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ'' ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

''ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಬೆಡ್‍ಗಳನ್ನು ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ 18,141 ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರೆಗಳಲ್ಲಿ 11,500 ಹಾಸಿಗೆಗಳು ಇವೆ'' ಎಂದು ವಿವರಿಸಿದರು.

''ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರ JN.1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಂಡಿದ್ದೇವೆ'' ಎಂದರು. ''ಡೆತ್ ಆಡಿಟ್ ರಿಪೋರ್ಟ್ ನಡೆಸಿದ್ದೇವೆ. 10 ಮರಣ ಪ್ರಕರಣಗಳ ಆಡಿಟ್ ಮಾಡಿಸಲಾಗಿದೆ. ಅವರೆಲ್ಲರೂ ಐಸಿಯುಗೆ ಅಡ್ಮಿಟ್ ಆಗಿದ್ದರು. ಅವರೆಲ್ಲರೂ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಕೋವಿಡ್​ನಿಂದ ನೇರವಾಗಿ ಸಾವು ಸಂಭವಿಸಿಲ್ಲ. ಅವರು ಇತರೆ ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ'' ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಅದ್ಭುತವಾಗಿದೆ ಬಾಲರಾಮನ ಮೂರ್ತಿ : ಶಿಲ್ಪಿ ಅರುಣ್ ಜೊತೆಗೆ ಮೂರ್ತಿ ಕೆತ್ತನೆಯಲ್ಲಿ ಭಾಗಿಯಾದ ಚಲುವರಾಜ್ ಸಂದರ್ಶನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.