ETV Bharat / state

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಅರ್ಚಕರಿಗೆ ವೇತನ ನೀಡುವ ಬಗ್ಗೆ ಪರಿಶೀಲನೆ.. ಸಚಿವೆ ಜೊಲ್ಲೆ

ನಮ್ಮ ರಾಜ್ಯದ ಜನರು ಬೇರೆ ರಾಜ್ಯದ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳುವ, ಮಹಾರಾಷ್ಟ್ರದ ತುಳಜಾಭವಾನಿ, ಪಂಡರಾಪುರ, ಗುಡ್ಡಾಪುರ ದಾನಮ್ಮ, ಆಂಧ್ರಪ್ರದೇಶದ ತಿರುಪತಿ, ಶ್ರೀಶೈಲದಲ್ಲಿ ರಾಜ್ಯ ಸರ್ಕಾರದ ಜಾಗ ಇರುವ ಬಗ್ಗೆ ಪರಿಶೀಲಿಸಿ ಅಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಶೀಘ್ರವೇ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ..

author img

By

Published : Sep 6, 2021, 9:00 PM IST

Minister Shashikala jolle make meeting with officers
ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವೆ ಜೊಲ್ಲೆ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಮುಜರಾಯಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವೆ ಜೊಲ್ಲೆ

ವಿಕಾಸಸೌಧದಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೇ ಕಡೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲಾಖಾ ಹಂತದಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ಹಿರಿಯ ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಬೇಕು.

ಬೆಂಗಳೂರಿನ ಬನಶಂಕರಿ ದೇವಸ್ಥಾನದ ಅವ್ಯವಹಾರದ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮುಜರಾಯಿ ಇಲಾಖೆಯ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಮಿಟಿಗಳು ಇಲಾಖೆಯ ಮಾಹಿತಿಯನ್ನು ಧಾರ್ಮಿಕ ಪರಿಷತ್ ‌ಸದಸ್ಯರಿಗೆ ನೀಡುವುದಿಲ್ಲ ಎಂಬ ಆರೋಪ ಇದೆ. ಆಯುಕ್ತರು ಸಂಬಂಧ ಪಟ್ಟವರನ್ನು ಸಂಪರ್ಕಿಸಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಬೇಕು. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದ ಯೋಜನೆ ಜಾರಿಯಲ್ಲಿದ್ದು, ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು.

ಗೋ ಪೂಜೆಗೆ ಆದ್ಯತೆ : ಗೋವು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಅದನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಹೀಗಾಗಿ, ಕೇವಲ ಪಶು ಸಂಗೋಪನೆ ಇಲಾಖೆ ಮಾತ್ರವಲ್ಲ ಮುಜರಾಯಿ ಇಲಾಖೆಯ ಮೂಲಕವೂ ಗೋವಿನಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಲ್ಲದೆ ದೀಪಾವಳಿ ಸಂದರ್ಭದಲ್ಲಿ ಗೋ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಅರ್ಚಕರಿಗೆ ಜೀವ ವಿಮೆ ಮಾಡಬೇಕು ಎಂಬುದರ ಕುರಿತಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಅರ್ಚಕರಿಗೆ ವೇತನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಳ್ಳುವುದಾಗಿ ತಿಳಿಸಿದರು.

ನಮ್ಮ ರಾಜ್ಯದ ಜನರು ಬೇರೆ ರಾಜ್ಯದ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳುವ, ಮಹಾರಾಷ್ಟ್ರದ ತುಳಜಾಭವಾನಿ, ಪಂಡರಾಪುರ, ಗುಡ್ಡಾಪುರ ದಾನಮ್ಮ, ಆಂಧ್ರಪ್ರದೇಶದ ತಿರುಪತಿ, ಶ್ರೀಶೈಲದಲ್ಲಿ ರಾಜ್ಯ ಸರ್ಕಾರದ ಜಾಗ ಇರುವ ಬಗ್ಗೆ ಪರಿಶೀಲಿಸಿ ಅಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಶೀಘ್ರವೇ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದರು.

ಓದಿ : ಕರ್ನಾಟಕ ಕೋವಿಡ್ ರಿಪೋರ್ಟ್ : ಇಂದು 973 ಮಂದಿಗೆ ಕೊರೊನಾ,17 ಸೋಂಕಿತರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.