ETV Bharat / state

ಮುಜರಾಯಿ ದೇವಾಲಯಗಳ ಅರ್ಚಕರಿಗೆ ದಸರಾ ಹಬ್ಬಕ್ಕೆ ಬಂಪರ್​​ ಉಡುಗೊರೆ ನೀಡಿದ ಸರ್ಕಾರ - ಮುಜರಾಯಿ ದೇವಾಲಯಗಳ ಅರ್ಚಕರಿಗೆ ದಸರಾ ಹಬ್ಬಕ್ಕೆ ​​ ಉಡುಗೊರೆ ನೀಡಿದ ಸರ್ಕಾರ

ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಎಲ್ಲಾ ದೇವಸ್ಥಾನಗಳಿಗೆ ತಸ್ತಿಕ ಹಣ 19 ಕೋಟಿ ರೂ. ಬಾಕಿ ಇದ್ದು, ಶೀಘ್ರವೇ ಅದನ್ನ ಬಿಡುಗಡೆ ಮಾಡಲಾಗುವುದು..

ಸಚಿವೆ ಶಶಿಕಲಾ ಜೊಲ್ಲೆ ಸುದ್ದಿಗೋಷ್ಠಿ
ಸಚಿವೆ ಶಶಿಕಲಾ ಜೊಲ್ಲೆ ಸುದ್ದಿಗೋಷ್ಠಿ
author img

By

Published : Oct 12, 2021, 3:33 PM IST

ಬೆಂಗಳೂರು : ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಸರ್ಕಾರ ದಸರಾ ಹಬ್ಬದ ಉಡುಗೊರೆ ನೀಡಿದೆ. ಈ ಸಂಬಂಧ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ವೇತನ ದೊರಕಿಸಿ ಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು.

ಇದೀಗ ಸಿಎಂ ಜೊತೆ ಚರ್ಚಿಸಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ.35ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮುಜರಾಯಿ ಇಲಾಖೆ ನೌಕರರು- ಅರ್ಚಕರ ವೇತನ ಹೆಚ್ಚಳ ಕುರಿತಂತೆ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿರುವುದು..

ಇದರಿಂದ ಮುಜರಾಯಿ ಇಲಾಖೆಯ ಎ ಮತ್ತು ಬಿ ದರ್ಜೆ ದೇವಾಲಯಗಳ ಸುಮಾರು 1,034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದೆ. ಇದನ್ನ ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದರು.

ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂಬ ಪ್ರಶ್ನೆಗೆ, ಸಿ ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಖಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿನೂತನ ವಿಮೆ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಎಲ್ಲಾ ದೇವಸ್ಥಾನಗಳಿಗೆ ತಸ್ತಿಕ ಹಣ 19 ಕೋಟಿ ರೂ. ಬಾಕಿ ಇದ್ದು, ಶೀಘ್ರವೇ ಅದನ್ನ ಬಿಡುಗಡೆ ಮಾಡಲಾಗುವುದು ಎಂದರು.

ದೇವಾಲಯಗಳ ಮಾಹಿತಿಗಾಗಿ ಆನ್‌ಲೈನ್ ತಂತ್ರಾಂಶ : ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್‌ ಮೂಲಕ ತಿಳಿದುಕೊಳ್ಳಲು ಐಟಿಎಂಎಸ್ (ಇಂಟಿಗ್ರೇಟೆಡ್ ಡೆವಲಪ್ ಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದರು.

ಇದೊಂದು ವಿನೂತನ ಯೋಜನೆಯಾಗಿದೆ. ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಇದು ಪೂರಕ ಎಂದರು.

ಕೊರೊನಾ ಸಂಕಟ ದೂರ ಮಾಡಲು ವಿಶೇಷ ಪೂಜೆ : ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ 3ನೇ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದರು.

ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ, ವಿಶೇಷ ಫಲ ಹೊಂದಬಹುದೆಂದು ಶಾಸ್ತ್ರ ವಿಧಿತವಾಗಿದೆ.

ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದುಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ್ 15ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೊನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಡ್ರೆಸ್ ಕೋಡ್ ಬಗ್ಗೆ ನಿರ್ಧಾರ ಆಗಿಲ್ಲ : ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಭಕ್ತರಿಗೆ ಡ್ರೆಸ್ ಕೋಡ್ ಮಾಡುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಈ ಸಂಬಂಧ ನನ್ನ ಮುಂದೆ ಯಾವುದೇ ಪ್ರಸ್ತಾಪ ಬಂದಿಲ್ಲ. ಧಾರ್ಮಿಕ ಪರಿಷತ್‌ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.