ಬೆಂಗಳೂರು : ಸಚಿವ ಸಂಪುಟ ಪುನಾರಚನೆ ವೇಳೆ ನನ್ನ ಹೆಸರು ಕೈಬಿಡುವ ವಿಚಾರದ ಬಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮವರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಪಕ್ಷ ತಂದಿದೆ. ಇದರಿಂದ ಸಂತೋಷ ಇದೆ.
ಸಚಿವ ಸಂಪುಟ ಪುನಾರಚನೆ ವೇಳೆ ನನ್ನ ಹೆಸರನ್ನು ಕೈಬಿಡುವ ವಿಚಾರ ಬಂದೇ ಬರುತ್ತಿದೆ. ಈವರೆಗೂ ಹಾಗೇ ಬಂದಿಲ್ಲ. ಮುಂದೆ ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ನಾನು ಬದ್ಧನಾಗಿದ್ದೇನೆ ಎಂದರು.
ಹಿಜಾಬ್ ವಿವಾದದ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಿದ್ದಾರೆ. ಸದ್ಯ ವಿಚಾರ ಹೈಕೋರ್ಟ್‌ನಲ್ಲಿದೆ. ಹಾಗಾಗಿ, ನಾನು ಹೆಚ್ಚಿಗೆ ಏನೂ ಹೇಳಲಾಗುವುದಿಲ್ಲ ಎಂದರು.
ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. ನಮ್ಮಲ್ಲಿ ಅನೇಕ, ಜಾತಿ, ಧರ್ಮ,ಸಂಪ್ರದಾಯ ಪಾಲಿಸಲಾಗುತ್ತಿದೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಈ ರೀತಿ ಭಾವನೆ ಬರಬಾರದು. ಕೋರ್ಟ್ ಉತ್ತಮ ತೀರ್ಪು ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬೆಂಗಳೂರಲ್ಲಿ ಪತ್ನಿ ವಿನಿಮಯ ದಂಧೆಗೆ ಟ್ವಿಟರ್ ಮೂಲಕ ಆಹ್ವಾನ; ಪತ್ನಿಯ ವಿಡಿಯೋ ಮಾಡಿ ಶೇರ್ ಮಾಡೋ ಪತಿ!