ETV Bharat / state

ರಾಷ್ಟ್ರೀಯ ಪೋಷಣ ಅಭಿಯಾನದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ತನ್ನಿ: ಶಶಿಕಲಾ ಜೊಲ್ಲೆ

author img

By

Published : Mar 25, 2021, 6:59 PM IST

ಪೋಷಣ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜತೆ ಸಚಿವೆ ಶಶಿಕಲಾ ಜೊಲ್ಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

Minister Shashikala Jolle
ರಾಷ್ಟ್ರೀಯ ಪೋಷಣ ಅಭಿಯಾನದ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು: ರಾಷ್ಟ್ರೀಯ ಪೋಷಣ ಅಭಿಯಾನದಲ್ಲಿ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ 2ನೇ ಸ್ಥಾನದಲ್ಲಿದ್ದು, ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಗುರಿ ನೀಡಿದ್ದಾರೆ.

ಪೋಷಣ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಅಭಿಯಾನದ ಕುರಿತಂತೆ ಪ್ರತಿಯೊಂದು ಜಿಲ್ಲೆಗಳ ಉಪನಿರ್ದೇಶಕರ ಜೊತೆಗೆ ಮಾತನಾಡಿ ಚಟುವಟಿಕೆಗಳ ಭೌತಿಕ ಹಾಗೂ ಆರ್ಥಿಕ ಮಾಹಿತಿ ಪಡೆದರು.

ಪೋಷಣ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ಐಎಲ್​ಎ ತರಬೇತಿ ಕಾರ್ಯಕ್ರಮ, ಇ-ಐಎಲ್ಎ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಯನ್ನು ಲಿಖಿತ ರೂಪದಲ್ಲಿ ಆಯುಕ್ತರಿಗೆ ಸಲ್ಲಿಸುವಂತೆ ಸೂಚಿಸಿದರು.

ರಾಷ್ಟ್ರೀಯ ಪೋಷಣ ಅಭಿಯಾನದ ಜಾರಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿರುವುದಕ್ಕೆ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಮುಂದಿನ ಸಭೆಯ ವೇಳೆಗೆ ದೇಶದಲ್ಲಿ ಈ ಅಭಿಯಾನ ಜಾರಿಗೊಳಿಸುವುದರಲ್ಲಿ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಿ. ಹಾಗೇ ಸರ್ಕಾರದ ಯೋಜನೆ ಜಾರಿಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ನೇರವಾಗಿ ತನ್ನನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.