ETV Bharat / state

ಸಿಎಂ ಭೇಟಿಯಾದ ಶೋಭಾ ಕರಂದ್ಲಾಜೆ : ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತು ಸಮಾಲೋಚನೆ

author img

By

Published : Aug 20, 2021, 5:22 PM IST

ಜನಾಶೀರ್ವಾದ ಯಾತ್ರೆ ಮುಗಿಸಿದ ನಂತರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಸಚಿವರು, ಅಲ್ಲಿಂದ ನೇರವಾಗಿ ಆರ್ ಟಿನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದರು. ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದರು.‌ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಸಿಹಿ ನೀಡಿದರು..

ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದರು.

ಜನಾಶೀರ್ವಾದ ಯಾತ್ರೆ ಮುಗಿಸಿದ ನಂತರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಸಚಿವರು, ಅಲ್ಲಿಂದ ನೇರವಾಗಿ ಆರ್ ಟಿನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದರು. ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದರು.‌ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಸಿಹಿ ನೀಡಿದರು.

ನಂತರ ಕೃಷಿ ಇಲಾಖೆಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ಜೊತೆ ಅನೌಪಚಾರಿಕ ಮಾತುಕತೆ ನಡೆಸಿದರು. ಸಿರಿಧಾನ್ಯ ರಫ್ತು, ಸಾವಯವ ಕೃಷಿಗೆ ಉತ್ತೇಜನ ನೀಡುವ ಕುರಿತು ಸಮಾಲೋಚನೆ ನಡೆಸಿದ್ದು, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕೇಂದ್ರದಿಂದ ಅಗತ್ಯ ಸಹಕಾರ, ನೆರವು ಕಲ್ಪಿಸುವ ಭರವಸೆ ನೀಡಿದರು.

ಇದನ್ನೂ ಓಧಿ : ಸುಳ್ಳು ಹೇಳೋದ್ರಲ್ಲಿ ಕುಮಾರಸ್ವಾಮಿ ನಿಸ್ಸೀಮರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.