ETV Bharat / state

ಕೆರೆಗಳಿಗೆ ನೀರು ತಂಬಿಸುವ ಸಮಗ್ರ ಯೋಜನೆ: ಎರಡು ಹಂತದಲ್ಲಿ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಸಚಿವ ಸೋಮಣ್ಣ ಸೂಚನೆ

ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ನೂತನ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Meeting of Senior Officials of Irrigation Department
ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ
author img

By

Published : Nov 5, 2022, 11:45 AM IST

ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ನೂತನ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ 749 ಕೋಟಿ ರೂ. ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ತಿಳಿಸಿದರು.

Meeting of Senior Officials of Irrigation Department
ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ

ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಬಾಕಿಯಿರುವ ಎಲ್ಲಾ ರೂಪುರೇಷೆಗಳನ್ನು ಅಂತಿಮಗೊಳಿಸಿ ಅನುಮೋದನೆ ಪಡೆದುಕೊಳ್ಳಬೇಕು. ವಿಳಂಬ ಮಾಡದೇ ಯೋಜನೆ ಜಾರಿಗೆ ಮುಂದಾಗಲು ಹಿರಿಯ ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಬೇಕು ಎಂದರು.

ಆನೆಮಡುವಿನ ಕೆರೆಗೆ ನೀರು ತುಂಬಿಸುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚಿಸಿದರು. ಯಾವುದೇ ತೊಂದರೆಯಿಲ್ಲದೇ ಆನೆಮಡುವಿನ ಕೆರೆಗೆ ನೀರು ತುಂಬಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಸುತ್ತೂರು ಏತ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಅಗತ್ಯ ಕ್ರಮ ವಹಿಸಬೇಕು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಮನಗುಡ್ಡ, ಹುಬ್ಬೆ ಹುಣಸೆ ಯೋಜನೆ ಕಾಮಗಾರಿಗಳನ್ನು ಕೈಗೊಂಡು ಕೆರೆಗಳನ್ನು ತುಂಬಿಸುವ ಯೋಜನೆಗೆ ಮುಂದಾಗಬೇಕು. ಬಾಕಿ ಇರುವ ಕೆರೆ ತುಂಬಿಸುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.ನಿಜಗುಣ ರಾಜು, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‍ಸಿಂಗ್, ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮೃತ್ಯುಂಜಯಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಕಾವೇರಿ ನೀರಾವರಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್ ವೆಂಕಟೇಶ್, ಅಧೀಕ್ಷಕ ಎಂಜಿನಿಯರ್ ಶಿವಮಾದಯ್ಯ, ಕಾರ್ಯಪಾಲಕ ಎಂಜಿನಿಯರ್ ಎಂ.ಬಿ. ಪಾಟೀಲ್, ವೆಂಕಟೇಶ್ ಪ್ರಭು, ಕಿಶೋರ್, ಈಶ್ವರ್, ಮಂಜುನಾಥ್, ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕೆರೆಗಳಿಗೆ ನೀರು ತುಂಬಿಸುವಂತೆ ಪ್ರತಿಭಟನೆ: ಜಿಲ್ಲಾಡಳಿತ ಭವನದ ಒಳಗೆ ನುಗ್ಗಿದ ಪ್ರತಿಭಟನಾಕಾರರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.