ETV Bharat / state

ರಾಜ್ಯದಲ್ಲಿ ವಾಟರ್ ಏರೋಡ್ರೋಮ್ ಅಭಿವೃದ್ಧಿಗೆ ನಿರ್ಧಾರ: ಸಚಿವ ವಿ ಸೋಮಣ್ಣ

ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸುವುದು ಅಗತ್ಯ. ಈ ನೀತಿಯು ರಾಜ್ಯದ ವಿವಿಧ ಭಾಗಗಳ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಹಕಾರಿ ಆಗಲಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.

ಸಚಿವ ವಿ. ಸೋಮಣ್ಣ
ಸಚಿವ ವಿ. ಸೋಮಣ್ಣ
author img

By

Published : Jul 13, 2022, 8:45 PM IST

ಬೆಂಗಳೂರು: ನಾಗರಿಕ ವಿಮಾನಯಾನ ಸಂಪರ್ಕದ ಮೂಲಕ ಪ್ರವಾಸೋದ್ಯಮ ಪ್ರೋತ್ಸಾಹಿಸುವ ಜತೆಗೆ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ 9 ಕಡೆ ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ 'ಕರ್ನಾಟಕದ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ' ಕುರಿತ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. "ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನಮಕ್ಕಿ, ಆಲಮಟ್ಟಿ ಮತ್ತು ಹಿಡಕಲ್‌ ಜಲಾಶಯಗಳಲ್ಲಿ ವಾಟರ್‌ ಏರೋಡ್ರೋಮ್ಸ್‌ ಅಭಿವೃದ್ಧಿಪಡಿಸಲು ಸಂಭಾವ್ಯ ಸ್ಥಳಗಳನ್ನಾಗಿ ಗುರುತಿಸಲಾಗಿದೆ'' ಎಂದರು.

'ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸುವುದು ಅಗತ್ಯ. ಈ ನೀತಿಯು ರಾಜ್ಯದ ವಿವಿಧ ಭಾಗಗಳ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಹಕಾರಿ ಆಗಲಿದೆ. ವಾಣಿಜ್ಯ ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಪ್ತು, ತುರ್ತು ವೈದ್ಯಕೀಯ ಸೇವೆ, ಶೈಕ್ಷಣಿಕ ವಲಯಗಳ ಸಂಪರ್ಕ ಅಭಿವೃದ್ಧಿಗೆ ನಾಗರಿಕ ವಿಮಾನಯಾನ ಸೇವೆ ಪೂರಕವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಗಾರದಿಂದ ಬರುವಂತಹ ಸಲಹೆಗಳು ಮತ್ತು ಅಭಿಪ್ರಾಯಗಳು ನಮ್ಮ ನೀತಿಯನ್ನು ರೂಪಿಸಲು ಸಹಕಾರಿಯಾಗಲಿದೆ' ಎಂದರು.

ಹೆಲಿಪೋರ್ಟ್‌ಗಳ ನಿರ್ಮಾಣ: ಮಡಿಕೇರಿ, ಚಿಕ್ಕಮಗಳೂರು ಮತ್ತು ಹಂಪಿಯಲ್ಲಿ ಹೆಲಿಪೋರ್ಟ್‌ಗಳನ್ನು ಸ್ಥಾಪಿಸಲು ಕಾರ್ಯ ಸಾಧ್ಯತೆ ಮತ್ತು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಚಿಕ್ಕಮಗಳೂರು, ಹರಿಹರ, ಕುಶಾಲನಗರ ಮತ್ತು ಅಥಣಿಯಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಚಿಂತನೆ ಇದೆ ಎಂದು ಅವರು ಹೇಳಿದರು.

ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಮತ್ತು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಸಲುವಾಗಿ ಸುಮಾರು 240 ಎಕರೆ ಜಮೀನನ್ನು ಭೂಸ್ವಾಧೀನಪಡಿಸಿಕೊಂಡು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಪ್ರಾದೇಶಿಕ ಸಂಪರ್ಕ ಯೋಜನೆ-ಉಡಾನ್‌ (ಉಡೇ ದೇಶ್‌ ಕಾ ಆಮ್‌ ನಾಗರಿಕ್‌) ಅಡಿ ಬರುವ ಮೈಸೂರು, ಹುಬ್ಬಳ್ಳಿ, ವಿದ್ಯಾನಗರ (ತೋರಣಗಲ್), ಬೆಳಗಾವಿ, ಕಲಬುರಗಿ ಮತ್ತು ಬೀದರ್‌ ವಿಮಾನ ನಿಲ್ದಾಣಗಳಿಂದ ಉಡಾನ್‌ ಯೋಜನೆಯಡಿ ಕಾರ್ಯಾಚರಣೆ ಮಾಡುತ್ತಿರುವ ವಿಮಾನಯಾನ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಪಾಲಿನ ಶೇಕಡಾ 20ರಷ್ಟು ವಯಬಿಲಿಟಿ ಗ್ಯಾಪ್‌ ಫಂಡಿಂಗ್‌ ಭರಿಸಲಾಗುತ್ತಿದೆ. ಇದಲ್ಲದೇ ವಿಮಾನ ನಿಲ್ದಾಣದ ರಕ್ಷಣೆ, ಭದ್ರತೆ ಮತ್ತು ಅಗ್ನಿಶಾಮಕ ಸೇವಗಳ ಶುಲ್ಕವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ ಎಂದು ವಿವರಿಸಿದರು.

ಡಿಸೆಂಬರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ: ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ಈ ವರ್ಷಾಂತ್ಯದೊಳಗೆ ಲೋಕಾರ್ಪಣೆ ಆಗಲಿದೆ. ಇದಲ್ಲದೇ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ಧಾಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂಬರುವ ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಕರ್ನಾಟಕವೇ ಮೊದಲು: ವಿಮಾನಯಾನ ನೀತಿ ರೂಪಣೆ ಕುರಿತು ಕಾರ್ಯಾಗಾರ ಆಯೋಜಿಸಿರುವ ಮೊದಲ ರಾಜ್ಯ ಕರ್ನಾಟಕ. ಪ್ರತಿ ರಾಜ್ಯಕ್ಕೂ ಇಂಥ ವಿಮಾನಯಾನ ನೀತಿ ಅಗತ್ಯ ಇದ್ದು, ಈ ಸಂಬಂಧ ಕಾರ್ಯಾಗಾರ ನಡೆಸುವುದು ಬಹಳ ಮುಖ್ಯ. ರಾಜ್ಯದ ವಿಮಾನಯಾನ ಯೋಜನೆಗಳಿಗೆ ಕೇಂದ್ರದ ನೆರವು ಒದಗಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಮಾತನಾಡಿದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, 'ಕರ್ನಾಟಕ ರಾಜ್ಯವು ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕ ಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ' ಎಂದರು.

ಓದಿ: ಪಿಎಸ್ಐ ನೇಮಕಾತಿ ಹಗರಣ.. ಐಪಿಎಸ್ ಅಧಿಕಾರಿ ಪಾಲ್ ಮತ್ತೆ ಮೂರು ದಿನ ಪೊಲೀಸ್ ವಶಕ್ಕೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.