ETV Bharat / state

ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಸಚಿವ ಶ್ರೀರಾಮಲು ಎಚ್ಚರಿಕೆ

author img

By

Published : Nov 7, 2019, 11:30 PM IST

ವೈದ್ಯರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಯಾವುದೇ ಸಂಘಟನೆಯವರು ವೈದ್ಯರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ. ​​​​​​​

ಸಚಿವ ಶ್ರೀರಾಮಲು ಎಚ್ಚರಿಕೆ

ಬೆಂಗಳೂರು: ವೈದ್ಯರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಯಾವುದೇ ಸಂಘಟನೆಯವರು ವೈದ್ಯರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ, ವೈದ್ಯರು ಮುಷ್ಕರ ವಾಪಸ್ ಪಡೆಯಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಿಂಟೋ ಆಸ್ಪತ್ರೆಯಲ್ಲಿ ನಡೆದ ಹಲ್ಲೆ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರ ಜೊತೆಗೆ ಮತ್ತೆ ಆಸ್ಪತ್ರೆಗಳಲ್ಲಿ ಖಾಸಗಿ ಸೆಕ್ಯೂರಿಟಿ ಗಾರ್ಡ್ ಗಳ ನೇಮಕದ ಜೊತೆಗೆ ಪೊಲೀಸ್ ಬಂದೋಬಸ್ತ್ ನ್ನೂ ಕಲ್ಪಿಸುವ ಬಗ್ಗೆ ಸಿಎಂ ಹಾಗೂ ಗೃಹ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.

ಸಚಿವ ಶ್ರೀರಾಮಲು

ವೈದ್ಯರು ತಮ್ಮ ಮುಷ್ಕರ ಹಿಂದೆ ಪಡೆಯಬೇಕೆಂದು ಮನವಿ ಮಾಡಿದ್ದೇನೆ. ವೈದ್ಯರು ಎಸ್ಮಾ ಕಾಯ್ದೆಯ ವ್ಯಾಪ್ತಿಯಲ್ಲಿ ಬರುತ್ತಾರೆ. ಈ ವಿಷಯವನ್ನೂ ಅವರಿಗೆ ಈಗಾಗಲೇ ಸೂಕ್ಷ್ಮವಾಗಿ ತಿಳಿಸಿದ್ದೇನೆ ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ತಾರತಮ್ಯ ಹೆಚ್ಚಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿಗೆ ವೇತನ ಹಾಗೂ ಸೌಲಭ್ಯಗಳು ಹೆಚ್ಚು. ಈ ತಾರತಮ್ಯ ಹೋಗಲಾಡಿಸಲು ಎರಡೂ ಇಲಾಖೆಗಳನ್ನು ಒಂದುಗೂಡಿಸಿ ಒಂದೇ ಇಲಾಖೆಯಡಿ ತರುವುದು ಸೂಕ್ತ. ಈ ಬಗ್ಗೆ ಸಿಎಂ ಅವರ ಗಮನ ತಂದಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಮನವಿ ಮಾಡಿದ್ದೇನೆ ಎಂದರು.

ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ಹಾಗೂ ಗುಣಮಟ್ಟದ ಆಹಾರ ಕೊಡಲು ತೀರ್ಮಾನಿಸಲಾಗಿದೆ. 1 ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ ಎಂದಿದ್ದು,ಇಲಾಖೆಯಲ್ಲಿ ಹಣದ ಸಮಸ್ಯೆ ಇಲ್ಲ. 1363 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ಇಲ್ಲ. ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸ್ವಂತ ಕಟ್ಟಡ ನಿರ್ಮಾಣದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಕ್ರೈಸ್ಟ್ ಸಂಸ್ಥೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಸಂಸ್ಥೆಗೆ 150 ಕಟ್ಟಡಗಳ ನಿರ್ಮಾಣದ ಹೊಣೆ ನೀಡಲಾಗಿತ್ತು. ಕಳೆದ ಐದು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಕಾಮಗಾರಿಗಳು ಅಪೂರ್ಣಗೊಂಡಿವೆ. ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರೈಸ್ಟ್ ಸಂಸ್ಥೆಗೆ ಮನವಿ ಮಾಡುತ್ತೇನೆ ಎಂದರು.

Intro:ಬೆಂಗಳೂರು : ವೈದ್ಯರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಯಾವುದೇ ಸಂಘಟನೆಯವರು ವೈದ್ಯರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ವೈದ್ಯರು ಮುಷ್ಕರ ವಾಪಸ್ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ. Body:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಿಂಟೋ ಆಸ್ಪತ್ರೆಯಲ್ಲಿ ನಡೆದ ಹಲ್ಲೆ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರ ಜೊತೆಗೆ ಮತ್ತೆ ಆಸ್ಪತ್ರೆಗಳಲ್ಲಿ ಖಾಸಗಿ ಸೆಕ್ಯೂರಿಟಿ ಗಾರ್ಡ್ ಗಳ ನೇಮಕದ ಜೊತೆಗೆ ಪೊಲೀಸ್ ಬಂದೋಬಸ್ತ್ ನ್ನೂ ಕಲ್ಪಿಸುವ ಬಗ್ಗೆ ಸಿಎಂ ಹಾಗೂ ಗೃಹ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.
ವೈದ್ಯರು ತಮ್ಮ ಮುಷ್ಕರ ಹಿಂದೆ ಪಡೆಯಬೇಕೆಂದು ಮನವಿ ಮಾಡಿದ್ದೇನೆ. ವೈದ್ಯರ ಎಸ್ಮಾ ಕಾಯ್ದೆಯ ವ್ಯಾಪ್ತಿಯಲ್ಲಿ ಬರುತ್ತಾರೆ. ಈ ವಿಷಯವನ್ನೂ ಅವರಿಗೆ ಈಗಾಗಲೇ ಸೂಕ್ಷ್ಮವಾಗಿ ತಿಳಿಸಿದ್ದೇನೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ತಾರತಮ್ಯ ಹೆಚ್ಚಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿಗೆ ವೇತನ ಹಾಗೂ ಸೌಲಭ್ಯಗಳು ಹೆಚ್ಚು. ಈ ತಾರತಮ್ಯ ಹೋಗಲಾಡಿಸಲು ಎರಡೂ ಇಲಾಖೆಗಳನ್ನು ಒಂದುಗೂಡಿಸಿ ಒಂದೇ ಇಲಾಖೆಯಡಿ ತರುವುದು ಸೂಕ್ತ. ಈ ಬಗ್ಗೆ ಸಿಎಂ ಅವರ ಗಮನ ತಂದಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ಹಾಗೂ ಗುಣಮಟ್ಟದ ಆಹಾರ ಕೊಡಲು ತೀರ್ಮಾನಿಸಲಾಗಿದೆ. 1 ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಇಲಾಖೆಯಲ್ಲಿ ಹಣದ ಸಮಸ್ಯೆ ಇಲ್ಲ. 1363 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ಇಲ್ಲ. ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸ್ವಂತ ಕಟ್ಟಡ ನಿರ್ಮಾಣದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಕ್ರೈಸ್ಟ್ ಸಂಸ್ಥೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಸಂಸ್ಥೆಗೆ 150 ಕಟ್ಟಡಗಳ ನಿರ್ಮಾಣದ ಹೊಣೆ ನೀಡಲಾಗಿತ್ತು. ಕಳೆದ ಐದು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಕಾಮಗಾರಿಗಳು ಅಪೂರ್ಣಗೊಂಡಿವೆ. ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರೈಸ್ಟ್ ಸಂಸ್ಥೆಗೆ ಮನವಿ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ 2019-20 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳ ಸಂಕ್ಷಿಪ್ತ ಮಾಹಿತಿ ಪುಸ್ತಕವನ್ನು ಶ್ರೀರಾಮುಲು ಅವರು ಬಿಡುಗಡೆ ಮಾಡಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.