ETV Bharat / state

ನಿಮ್ಮ ನಿಸ್ವಾರ್ಥ ಸೇವೆ ನಿಜಕ್ಕೂ ಮೆಚ್ಚುವಂತಹದ್ದು:ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿಗೆ ಶ್ರೀರಾಮುಲು ಶ್ಲಾಘನೆ! - ವೈದ್ಯಕೀಯ ಸಿಬ್ಬಂದಿ

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಕರ್ತವ್ಯ ನಿಷ್ಠೆ ತೋರಿಸುತ್ತಿರುವ ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಶ್ರೀರಾಮುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Minister Sriramulu
Minister Sriramulu
author img

By

Published : Jul 8, 2020, 1:55 AM IST

ಬೆಂಗಳೂರು: ಮಹಾಮಾರಿ ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಪ್ರತಿ ಹಳ್ಳಿಗಳಿಗೆ ತೆರಳಿ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿಗೆ ಶ್ರೀರಾಮುಲು ಶ್ಲಾಘನೆ

‌ನಕ್ಸಲ್​ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲ್ಲೂಕಿನ ಕೊರಗ ಕಾಲೋನಿಯಲ್ಲಿ ವಾಸವಾಗಿರುವ ಸುಮಾರು 40 ಕ್ಕೂ ಹೆಚ್ಚಿನ‌ ಕುಟುಂಬಗಳಲ್ಲಿ ಕೆಲವರಿಗೆ ಡೆಂಗ್ಯೂ ಸೇರಿದಂತೆ ಜ್ವರದ‌ ಲಕ್ಷಣಗಳು ಕಾಣಿಸಿಕೊಂಡಿವೆ. ಆ ಭಾಗದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಕೂಡ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ರಭಸವಾಗಿ ಹರಿಯುವ ನದಿಯನ್ನು ಕಿರಿದಾದ ಕಾಲು ಸೇತುವೆಯ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡು ದಾಟಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ರೋಗಗಳ ಕುರಿತು ಮುಂಜಾಗ್ರತೆ ವಹಿಸುವಂತೆ ಅರಿವು ಮೂಡಿಸಿ ಬಂದಿದ್ದಾರೆ.

ಅವರ ಕರ್ತವ್ಯ ನಿಷ್ಠೆ, ನಿಸ್ವಾರ್ಥ ಸೇವೆ ನಿಜಕ್ಕೂ‌‌ ಮೆಚ್ಚುವಂತಹದ್ದು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಸಚಿವ ರಾಮುಲು ಆಶಾ ಕಾರ್ಯಕರ್ತೆಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇವೆಯನ್ನು ಶ್ಲಾಘಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.