ETV Bharat / state

ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ: ಸಚಿವ ಡಾ.ಸುಧಾಕರ್ - Attack against Congress

ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ‌ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Health and Medical Education Minister Dr. K. Sudhakar
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರು ಡಾ.ಕೆ.ಸುಧಾಕರ್
author img

By

Published : Nov 20, 2022, 11:45 AM IST

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟಿತ್ತು. ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ, ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ ಎಂದು ಕಿಡಿ ಕಾರಿದರು.

ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಿಲ್ಲದೆ ಹತಾಶೆಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ ಎಂದರು.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲೊಂದು ಕ್ಯಾತೆ ತೆಗೆಯುತ್ತಲೇ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ನಾಯಕರಿಗೆ ಕಾಮನ್‌ ಸೆನ್ಸ್ ಇಲ್ವಾ?: ಸಚಿವ ಡಾ.ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.