ETV Bharat / state

'ಕಾಂಗ್ರೆಸ್‌ ಡಬಲ್‌ ಡೋರ್‌ ಬಸ್‌, ಮೊದಲು ಯಾರನ್ನು ಇಳಿಸುತ್ತಾರೋ ಗೊತ್ತಿಲ್ಲ' - ಸುಧಾಕರ್

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌. ಈ ಬಸ್‌ನಿಂದ ಯಾರನ್ನು ಮೊದಲು ಇಳಿಸುತ್ತಾರೋ ಗೊತ್ತಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್‌ ಟೀಕಿಸಿದ್ದಾರೆ.

minister sudhakar criticize congress
ಕಾಂಗ್ರೆಸ್ ಬಗ್ಗೆ ಸಚಿವ ಸುಧಾಕರ್ ವ್ಯಂಗ್ಯ
author img

By

Published : Aug 11, 2022, 5:28 PM IST

Updated : Aug 11, 2022, 5:42 PM IST

ಬೆಂಗಳೂರು: ಕಾಂಗ್ರೆಸ್‌ ನಾಯಕರು ರಾಜಕೀಯವಾಗಿ ನಿರುದ್ಯೋಗಿಗಳಾಗಿರುವುದರಿಂದ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ದಿನ ಸುದ್ದಿಯಲ್ಲಿರಲು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಅಜ್ಞಾನಕ್ಕೆ ನಗಬೇಕಷ್ಟೇ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ರಾಜಕೀಯವಾಗಿ ಕ್ರಿಯಾಶೀಲರಾಗಿರಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಹಿರಿಯರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಡಾ.ಕೆ.ಸುಧಾಕರ್‌

ಕಾಂಗ್ರೆಸ್‌ ಡಬಲ್‌ ಡೋರ್‌ ಬಸ್‌: ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌. ಈ ಬಸ್‌ನಿಂದ ಯಾರನ್ನು ಮೊದಲು ಇಳಿಸುತ್ತಾರೋ ಗೊತ್ತಿಲ್ಲ. ಈ ಬಸ್‌ಗೆ ಎರಡು ಸ್ಟೇರಿಂಗ್‌ ಇದ್ದು, ಒಬ್ಬರು ಒಂದು ಕಡೆ ತಿರುಗಿಸಿದರೆ, ಮತ್ತೊಬ್ಬರು ಇನ್ನೊಂದು ಕಡೆಗೆ ತಿರುಗಿಸುತ್ತಿದ್ದಾರೆ. ಈ ಬಸ್‌ ಯಾವ ಕಡೆಗೆ ಹೋಗುವುದೋ ಗೊತ್ತಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ 3ನೇ ಡೋಸ್‌ ಲಸಿಕೆ ಪಡೆದಿದ್ದು ಶೇ.17ರಷ್ಟು ಮಂದಿ ಮಾತ್ರ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತಿ ಕಡಿಮೆ ಅವಧಿಯಲ್ಲಿ ರೈತರು, ಮಹಿಳೆಯರು, ಯುವಜನರಿಗೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆಡಳಿತವನ್ನು ಉತ್ತಮವಾಗಿ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಕೇಂದ್ರ ನಾಯಕರ ಜೊತೆಗೆ ಉತ್ತಮ ಸಂಬಂಧ ಇರಿಸಿಕೊಳ್ಳಲು ಅವರು ಆಗಾಗ್ಗೆ ದೆಹಲಿಗೆ ಹೋಗುತ್ತಾರೆ. ಇದು ಸಹಜ ವಿಚಾರ ಎಂದರು.

Last Updated : Aug 11, 2022, 5:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.