ETV Bharat / state

3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ : ಆರೋಗ್ಯ ಸಚಿವ ಡಾ. ಕೆ ಸುಧಾಕರ್

author img

By

Published : Jan 16, 2022, 5:46 PM IST

ರಾಜ್ಯ ಸರ್ಕಾರ ಕೋವಿಡ್ 3ನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. 10 ಸಾವಿರ ಗೃಹ ವೈದ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ, ಹೋಮ್ ಐಸೋಲೇಷನ್​ನಲ್ಲಿದ್ದಾಗ ಯಾವ ರೀತಿ ಆರೈಕೆ ಮಾಡಬೇಕು, ಟೆಲಿ ಟ್ರಯಾಜಿಂಕ್ ಹೇಗೆ ಮಾಡಬೇಕು, ಅವರಿಗೆ ನೀಡಬೇಕಾಗಿರುವ ಸಲಹೆ, ಸೂಚನೆಗಳೇನು? ಎಂದು ವಿವರಿಸಲಾಗಿದೆ..

Minister-sudhakar
ಸಚಿವ ಡಾ. ಕೆ ಸುಧಾಕರ್

ಬೆಂಗಳೂರು : ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಬಸವನಗುಡಿಯ ಅಬಲಾಶ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಒಂದು ವರ್ಷವಾಗಿದೆ.

ಭಾರತ 156 ಕೋಟಿ ಡೋಸ್ ಲಸಿಕೆಗಳನ್ನು ನೀಡಿ, ಐತಿಹಾಸಿಕ ಸಾಧನೆ ಮಾಡಿದೆ. ಭಾರತೀಯನಾಗಿ ಕರ್ನಾಟಕದ ಜನತೆಯ ಪರವಾಗಿ ಪ್ರಧಾನಿಗಳಿಗೆ ಅಭಿನಂದನೆಗಳು ಹಾಗೂ ಲಸಿಕೆಯನ್ನು ಕಂಡು ಹಿಡಿದ ವಿಜ್ಞಾನಿಗಳಿಗೆ ಹಾಗೂ ಸಂಸ್ಥೆಗಳಿಗೂ ಕೃತಜ್ಞತೆಗಳು ಎಂದು ಹೇಳಿದರು.

ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಯ ಕೊಡುಗೆಯೂ ಇದೆ. ಮುಂಚೂಣಿ ಕಾರ್ಯಕರ್ತರು ಮತ್ತು ಅಧಿಕಾರಿಗಳು ಕೂಡ ಈ ಲಸಿಕಾಕರಣದ ಯಶಸ್ಸಿನ ಭಾಗವಾಗಿದ್ದಾರೆ. ಜನರು ಲಸಿಕೆ ಪಡೆದುಕೊಂಡು ಸರ್ಕಾರದ ಹೋರಾಟದ ಜೊತೆ ಕೈ ಜೋಡಿಸಿದ್ದಾರೆ ಎಂದರು.

minister-sudhakar
ಬಸವನಗುಡಿಯ ಅಬಲಾಶ್ರಮಕ್ಕೆ ಸಚಿವ ಸುಧಾಕರ್ ಭೇಟಿ

36 ದೇಶಗಳಲ್ಲಿ ಇನ್ನೂ ಶೇ.10ರಷ್ಟು ಲಸಿಕೆ ನೀಡಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿ ಶೇ.99ರಷ್ಟು ಜನರು ಮೊದಲ ಡೋಸ್ ತೆಗೆದುಕೊಂಡಿದ್ದರೆ, 83 ರಷ್ಟು ಜನರು ಎರಡೂ ಡೋಸ್​​ ತೆಗೆದುಕೊಂಡಿದ್ದಾರೆ.

ಪ್ರಧಾನಿಗಳು ನಮ್ಮ ದೇಶಕ್ಕೆ ಮಾತ್ರವಲ್ಲ, ವಿಶ್ವದ ಬಡ ರಾಷ್ಟ್ರಗಳಿಗೂ ಲಸಿಕೆ ಸರಬರಾಜು ಮಾಡಿ, ಕೊರೊನಾ ಹೋರಾಟದಲ್ಲಿ ಭಾರತ ದೊಡ್ಡಣ್ಣನ ಪಾತ್ರ ನಿರ್ವಹಿಸುವಂತೆ ಮಾಡಿದ್ದಾರೆ ಎಂದರು.

ರಾಜ್ಯ ಸರ್ಕಾರ ಕೋವಿಡ್ 3ನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. 10 ಸಾವಿರ ಗೃಹ ವೈದ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ, ಹೋಮ್ ಐಸೋಲೇಷನ್​ನಲ್ಲಿದ್ದಾಗ ಯಾವ ರೀತಿ ಆರೈಕೆ ಮಾಡಬೇಕು, ಟೆಲಿ ಟ್ರಯಾಜಿಂಕ್ ಹೇಗೆ ಮಾಡಬೇಕು, ಅವರಿಗೆ ನೀಡಬೇಕಾಗಿರುವ ಸಲಹೆ, ಸೂಚನೆಗಳೇನು? ಎಂದು ವಿವರಿಸಲಾಗಿದೆ.

ಕೆಲವೇ ದಿನಗಳಲ್ಲಿ ಅಂತಿಮ ವರ್ಷದ ವೈದ್ಯಕೀಯ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಸೇರಿಕೊಳ್ಳಲಿದ್ದಾರೆ. ಎಷ್ಟೇ ಜನರಿಗೆ ಸೋಂಕು ತಗುಲಿದರೂ ಮನೆಯಲ್ಲೇ ಪರಿಣಾಮಕಾರಿ ಚಿಕಿತ್ಸೆ ಸಿಗುವ ಹಾಗೆ ತಂತ್ರಜ್ಞಾನ ಹಾಗೂ ದತ್ತಾಂಶಗಳನ್ನು ಉಪಯೋಗ ಮಾಡಿಕೊಂಡು ವಿನೂತನವಾಗಿ 3ನೇ ಅಲೆ ನಿಯಂತ್ರಣ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಕೋವಿಡ್ ವಿಚಾರದಲ್ಲಿ ಸ್ವಂತ ಆರೈಕೆ, ಪರೀಕ್ಷೆ ಅಥವಾ ಚಿಕಿತ್ಸೆ ಮಾಡಿಕೊಳ್ಳುವುದು ಕಾನೂನಾತ್ಮಕವಾಗಿ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಸಚಿವರು ಹೇಳಿದರು.

ಅಬಲಾಶ್ರಮದ ಕಾರ್ಯಕ್ಕೆ ಮೆಚ್ಚುಗೆ : ಬಸವನಗುಡಿಯ ಅಬಲಾಶ್ರಮದಲ್ಲಿ ಭಾನುವಾರ 'ಸ್ವಾಸ್ಥ್ಯ' ಆರೋಗ್ಯ ಸೇವೆಗಳ ಉಪಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಸುಧಾಕರ್ ಅವರು ಸಂಸ್ಥೆಯ ಸೇವಾ ಕಾರ್ಯಗಳು, ಸುವ್ಯಸ್ಥಿತ ನಿರ್ವಹಣೆ ಪ್ರೇರಣಾದಯಾಕ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮೋದಿ ಸಂಪುಟಕ್ಕೆ ಅಭಿನಂದನೆ ಸಲ್ಲಿಸಿದ ಕಟೀಲ್ : ಕೊರೊನಾ ವಿರುದ್ಧ ಭಾರತದಲ್ಲಿ ನಡೆಸಲಾಗುತ್ತಿರುವ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವು ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತ್ವರಿತವಾಗಿ ಲಸಿಕೆ ಉತ್ಪಾದನೆಗೆ ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದ ಮತ್ತು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಭಾರತದ ಅರ್ಹ ಜನಸಂಖ್ಯೆಯ ಶೇ.92ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ದೇಶದ ಶೇ.70ರಷ್ಟು ಅರ್ಹ ಜನಸಂಖ್ಯೆ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಇದು ನಿಜಕ್ಕೂ ಮಹತ್ವದ ಕಾರ್ಯ. ಇದರಿಂದಾಗಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ.

ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಇದುವರೆಗೆ 156.76 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಲಾಗಿದೆ. ಭಾರತದ ಲಸಿಕಾ ಅಭಿಯಾನವು ಜಗತ್ತಿನ ಅನೇಕ ಪ್ರಮುಖ ದೇಶಗಳಿಗಿಂತ ವೇಗವಾಗಿ ನಡೆಯುತ್ತಿದೆ. ಭಾರತದಲ್ಲಿ ಒಂದು ವರ್ಷದಲ್ಲಿ ದೈನಂದಿನ ಸರಾಸರಿ 4.26 ಮಿಲಿಯನ್ ಜನರಿಗೆ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿಯವರನ್ನು ಅಭಿನಂದಿಸುವುದಾಗಿ ಕಟೀಲ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಓದಿ: ಸಂಕ್ರಾಂತಿಗೆ ಕಾಯ್ದಿದ್ದೇ ಬಂತು, ಸಂಪುಟ ಪುನಾರಚನೆ ಆಗಲಿಲ್ಲ.. ಆಕಾಂಕ್ಷಿಗಳು 5 ರಾಜ್ಯ ಚುನಾವಣೆ ಮುಗಿಯುವವರೆಗೂ ಕಾಯಲೇಬೇಕು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.