ETV Bharat / state

ಮಹಾರಾಷ್ಟ್ರ ಕೊರೊನಾ ಆತಂಕ: ಎಚ್ಚರಿಕೆಯಿಂದಿರುವಂತೆ ರಾಜ್ಯದ ಜನತೆಗೆ ಸುಧಾಕರ್ ಮನವಿ - ಮಹಾರಾಷ್ಟ್ರ ಕೊರೊನಾ

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಸಚಿವ ಸುಧಾಕರ್ ಕಳವಳ ವ್ಯಕ್ತಪಡಿಸಿದ್ದು, ನಾಡಿನ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಟ್ವಿಟರ್​​​ನಲ್ಲಿ ಮನವಿ ಮಾಡಿದ್ದಾರೆ.

ಸುಧಾಕರ್
ಸುಧಾಕರ್
author img

By

Published : Mar 11, 2021, 4:32 PM IST

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ ಎಂದು ಸಚಿವ ಸುಧಾಕರ್ ಟ್ವಿಟರ್​​ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

  • ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ.

    ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು.
    1/3

    — Dr Sudhakar K (@mla_sudhakar) March 11, 2021 " class="align-text-top noRightClick twitterSection" data=" ">

ಲಸಿಕೆ ಪಡೆಯಲು ಮನವಿ

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದಿದ್ದಾರೆ.

ಇದಲ್ಲದೆ ಶಾಲಾ ಪುನಾರಂಭ ಕುರಿತು ಅಸಮಾಧಾನ ಹೊರಹಾಕಿದ್ದು, ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನಾರಂಭಿಸಿರುವುದರ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರಿಗೆ ನನ್ನ ಮನವಿ ಎಂದಿದ್ದಾರೆ.

ಇದನ್ನೂ ಓದಿ: ಮಾರ್ಚ್​ 15ರಿಂದ ನಾಗ್ಪುರ​ ಲಾಕ್​ಡೌನ್​.. ದೇಶಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ‘ಮಹಾ’ ನಿರ್ಣಯ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.