ETV Bharat / state

ಕೊರೊನಾ ಭೀತಿ:  ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ.ಸುಧಾಕರ್ ಚರ್ಚೆ - Union health minister

ರಾಜ್ಯದಲ್ಲಿ ಕೋವಿಡ್-19 ಸ್ಥಿತಿಗತಿ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ಇಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಡಿಯೋ ಸಂವಾದ ನಡೆಸಿದರು.

Dr. K. Sudhakar
ಡಾ.ಕೆ.ಸುಧಾಕರ್
author img

By

Published : May 8, 2020, 8:09 PM IST

ಬೆಂಗಳೂರು: ಲಾಕ್​ಡೌನ್​ ಸಡಿಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ಇಂದು ನಡೆಸಿದ ವಿಡಿಯೊ ಸಂವಾದದಲ್ಲಿ ರಾಜ್ಯದ ಪರವಾಗಿ ಡಾ.ಸುಧಾಕರ್ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲಾಗಿದೆ. ಮುಂದಿನ ದಿನಗಳಲ್ಲೂ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಟಾಸ್ಕ್ ಫೋರ್ಸ್ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೈಗೊಳ್ಳಬೇಕಿರುವ ಕ್ರಮಗಳನ್ನು ನಿರ್ಧರಿಸಲಾಗಿದೆ ಎಂದು ಡಾ. ಸುಧಾಕರ್ ಕೇಂದ್ರ ಸಚಿವರಿಗೆ ವಿವರಿಸಿದರು.

ಈ ಹಿಂದೆ ತಿಳಿಸಿದ್ದಂತೆ ತಂತ್ರಜ್ಞಾನ ಮತ್ತು ತಜ್ಞರ ಹೊಂದಾಣಿಕೆಯ ಮೂಲಕ ಕೋವಿಡ್-19 ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 4 ಟಿ ಸೂತ್ರ ಯಶಸ್ವಿಯಾಗಿದೆ. ಆದರೆ, ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ಯತ್ನಗಳ ನಡುವೆಯೂ ಮೂವತ್ತು ಮಂದಿ ಸಾವನ್ನಪ್ಪಿರುವುದು ದುರದೃಷ್ಟಕರ ಎಂದು ಸಚಿವ ಡಾ.ಸುಧಾಕರ್ ಹೇಳಿದರು.

ಟೆಲಿ ಮೆಡಿಸಿನ್ ಮತ್ತು ಟೆಲಿ ಐಸಿಯು ನಂತಹ ಪರಿಣಾಮಕಾರಿ ಕ್ರಮಗಳ ಮೂಲಕ ಕರ್ನಾಟಕದಲ್ಲಿ ಉನ್ನತ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುತ್ತಿದೆ. ಆರಂಭದಲ್ಲಿ ಎರಡು ಲ್ಯಾಬ್​ಗಳಿಂದ ಕೇವಲ 300 ಟೆಸ್ಟ್​ಗಳನ್ನು ಮಾತ್ರವೇ ಮಾಡಲು ಸಾಧ್ಯವಾಗಿತ್ತು. ಆದರೆ ಈಗ ಲ್ಯಾಬ್​ಗಳ ಸಂಖ್ಯೆ 32 ಹಾಗೂ ಪ್ರತಿ ದಿನ ಐದು ಸಾವಿರದ ಐನೂರು ಟೆಸ್ಟ್​ಗಳನ್ನು ಮಾಡಲಾಗುತ್ತಿದೆ ಎಂದು ಡಾ.ಸುಧಾಕರ್ ತಿಳಿಸಿದರು.

ಬೆಂಗಳೂರಿನ ಖಾಸಗಿ ಸಂಸ್ಥೆ ಆವರಣದಲ್ಲಿ ಅಳವಡಿಸಿರುವ ಎರಡು ಟೆಸ್ಟ್ ಮಿಷನ್​ಗಳನ್ನು ನಮ್ಮ ಬಳಕೆಗೆ ಸಿಗುವಂತೆ ಐಸಿಎಂಆರ್ ಅಗತ್ಯ ಸೂಚನೆ ನೀಡಿದರೆ ದಿನವೊಂದಕ್ಕೆ ಹೆಚ್ಚುವರಿಯಾಗಿ ಆರೂವರೆ ಸಾವಿರ ಟೆಸ್ಟ್ ಮಾಡಲು ಅವಕಾಶವಾಗುತ್ತದೆ. ಈ ಕುರಿತು ಸಚಿವಾಲಯದಿಂದ ಅಗತ್ಯ ಸೂಚನೆ ರವಾನೆಯಾಗಬೇಕು ಎಂದು ಇದೇ ಸಮಯದಲ್ಲಿ ಡಾ.ಸುಧಾಕರ್ ಕೋರಿದರು.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು ಐಸಿಎಂಆರ್ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳೀಯವಾಗಿಯೇ ಆ ಯಂತ್ರಗಳ ಬಳಕೆಗೆ ಅವಕಾಶ ನೀಡಲು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ಹಾಗೆಯೇ, ಟೆಸ್ಟ್ ಸಂಖ್ಯೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಟೆಸ್ಟಿಂಗ್ ಕಿಟ್​ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಳುಹಿಸಿಕೊಡುವಂತೆ ಸಚಿವ ಸುಧಾಕರ್ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಟೆಸ್ಟಿಂಗ್ ಕಿಟ್ ಕಳುಹಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರತಿ ದಿನವೂ ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ. ಆರೋಗ್ಯ ಸೇತು ಆ್ಯಪ್ ಜೊತೆಗೆ ಆಪ್ತಮಿತ್ರ ಸಹಾಯವಾಣಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗಿದೆ. ಈ ಎರಡು ಹೆಚ್ಚು ಉಪಯುಕ್ತವಾಗುತ್ತದೆ. ಲಾಕ್​​​ಡೌನ್ ಸಡಿಲಿಕೆ ನಂತರ ಎದುರಾಗಬಹುದಾದ ಪರಿಸ್ಥಿತಿ ನಿಭಾಯಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರದ ಸೂಚನೆಯಂತೆ ವಿದೇಶದಿಂದ ಆಗಮಿಸುವ ಆರು ಸಾವಿರದ ಐನೂರು ಪ್ರಯಾಣಿಕರನ್ನು ಬರಮಾಡಿಕೊಂಡು, ಕೇಂದ್ರ ನೀಡಿರುವ ಮಾರ್ಗಸೂಚಿ ಪ್ರಕಾರವೇ ತಪಾಸಣೆ ಮತ್ತು ಕ್ವಾರಂಟೈನ್​ಗೆ ಒಳಪಡಿಸಲಾಗುವುದು ಎಂದು ಸುಧಾಕರ್ ಕೇಂದ್ರ ಸಚಿವರಿಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ನಗರ ಮತ್ತು ಮೈಸೂರು ಜಿಲ್ಲೆ ಅಧಿಕಾರಿಗಳ ಜೊತೆ ಕೂಡ ಕೇಂದ್ರ ಸಚಿವರು ಮಾತನಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್​​​​ ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.